ಶೇ.3.75 ರಷ್ಟು ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಿಸಿ ಸರ್ಕಾರ ಆದೇಶ

Date:

ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.3.75 ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.38.75ಗೆ ಏರಿಕೆಯಾಗಿದೆ. ಮೂಲವೇತನಕ್ಕೆ ಶೇ.38.75 ರಷ್ಟು ತುಟ್ಟಿ ಭತ್ಯೆ ಇತ್ತು. ಇದನ್ನು ಜನವರಿಯಿಂದ ಪೂರ್ವಾನ್ವಯವಾಗುವಂತೆ ಶೇ.42.5ಕ್ಕೆ ಹೆಚ್ಚಳ ಮಾಡಲಾಗಿದೆ.

ಇನ್ನು, ಕೇಂದ್ರ ವೇತನ ನೀತಿಯಂತೆ ವೇತನ ಪಡೆಯುವ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.4ರಷ್ಟು ಏರಿಸಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಪ್ರತಿ ವರ್ಷ 1792.71 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ ಎಂದು ಹೇಳಲಾಗಿದೆ. ಕೇಂದ್ರ ವೇತನ ನೀತಿಯಂತೆ ವೇತನ ಪಡೆಯುವವರ ತುಟ್ಟಿ ಭತ್ಯೆಯನ್ನು ಶೇ.46 ರಿಂದ ಶೇ.50ಕ್ಕೆ ಏರಿಸುವುದಾಗಿ ಸರ್ಕಾರ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರದ ಮುಂದೆ ಶೇ.4ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿತ್ತು. ಕೇಂದ್ರ ಸರ್ಕಾರವು ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿ, ಜನವರಿ 1ರಂತೆ ಪೂರ್ವಾನ್ವಯವಾಗುವಂತೆ ಆದೇಶ ಹೊರಡಿಸಿತ್ತು. ಅದೇ ರೀತಿ ಕರ್ನಾಟಕದಲ್ಲೂ ತುಟ್ಟಿ ಭತ್ಯೆಯನ್ನು ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ನೌಕರರ ಸಂಘ ಪತ್ರ ಬರೆದು ಮನವಿ ಸಲ್ಲಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...