ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಿ ಸರ್ಕಾರ ಆದೇಶ

Date:

ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಎಲ್ಲ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಸರ್ಕಾರ ಆದೇಶಿಸಿದೆ.

ಸಚಿವರಾದ ಕೃಷ್ಣ ಬೈರೇಗೌಡ, ಡಾ. ಎಂ ಸಿ ಸುಧಾಕರ್‌ ನೇತೃತ್ವದಲ್ಲಿ ಕಾಂಗ್ರೆಸ್ಸಿನ ಒಕ್ಕಲಿಗ ಸಮುದಾಯದ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶುಕ್ರವಾರ ಭೇಟಿಯಾಗಿ ಮಾಜಿ ಸಚಿವ ಮುನಿರತ್ನ ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳ ತನಿಖೆಗೆ ಪೊಲೀಸರ ವಿಶೇಷ ತನಿಖಾ ತಂಡ ರಚಿಸುವಂತೆ ಮನವಿ ಮಾಡಿದ್ದರು.

ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಮೂರು ಪ್ರಕರಣಗಳ ಗಂಭೀರತೆಯನ್ನು ಅರಿತು ಸರ್ಕಾರ ಸಿಐಡಿಯ ಅಪರ ಪೊಲೀಸ್‌ ಮಹಾನಿರ್ದೇಶಕ ಬಿ ಕೆ ಸಿಂಗ್‌ ನೇತೃತ್ವದಲ್ಲಿ ಎಸ್‌ಐಟಿ ರಚಿಸಿದೆ. ಈ ವಿಶೇಷ ತನಿಖಾ ತಂಡದಲ್ಲಿ ಬೆಂಗಳೂರು ಕೇಂದ್ರ ವಲಯದ ಪೊಲೀಸ್‌ ಮಹಾನಿರ್ದೇಶಕ ಲಭುರಾಮ್‌, ಬೆಂಗಳೂರು ರೈಲ್ವೇಸ್‌ ಪೊಲೀಸ್‌ ಅಧೀಕ್ಷಕರಾದ ಸೌಮ್ಯಲತ, ಪೊಲೀಸ್‌ ಅಧೀಕ್ಷಕ ಸಿ ಎ ಸೈಮನ್‌ ಸದಸ್ಯರಾಗಿ ನೇಮಕವಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಮುನಿರತ್ನ ವಿರುದ್ಧ ಬೆಂಗಳೂರು ವೈಯ್ಯಾಲಿಕಾವಲ್‌ ಪೊಲೀಸ್‌ ಠಾಣೆಯಲ್ಲಿ ಎರಡು ಪ್ರತ್ಯೇಕ ದೂರು ದಾಖಲಾಗಿವೆ. ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವರು ಜಾತಿ ನಿಂದನೆ ಮತ್ತು ಭ್ರಷ್ಟಾಚಾರ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ತೆಗೆದುಕೊಂಡ ಹೊರಬಂದಿದ್ದ ಮುನಿರತ್ನ ಅವರನ್ನು ಕೂಡಲೇ ಅತ್ಯಾಚಾರ ಪ್ರಕರಣದಡಿ ಮತ್ತೆ ಪೊಲೀಸರು ಬಂಧಿಸಿದ್ದಾರೆ. 14 ದಿನಗಳ ನ್ಯಾಯಾಂಗ ಬಂಧನದಲ್ಲಿ ಶಾಸಕ ಮುನಿರತ್ನ ಇದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...