ವಿವಿಧ ಹುದ್ದೆಗಳಿಗೆ ನಿಯೋಜನೆಗೊಂಡ ನಿವೃತ್ತ ಸರ್ಕಾರಿ ಅಧಿಕಾರಿಗಳು, ನೌಕರರನ್ನು ಸೇವೆಯಿಂದ ಕೈಬಿಡಲು ಸರ್ಕಾರ ಆದೇಶ

Date:

ಕರ್ನಾಟಕ ಸರ್ಕಾರ ಸಚಿವಾಲಯ ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಾಲಿ ಗುತ್ತಿಗೆ ಮತ್ತು ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಸರ್ಕಾರಿ ಅಧಿಕಾರಿ ಹಾಗೂ ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸುವಂತೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌ ಅವರು ಆದೇಶ ಹೊರಡಿಸಿದ್ದಾರೆ.

ಹಾಲಿ ಸರ್ಕಾರಿ ಸೇವೆಯಲ್ಲಿರುವ ಅಧಿಕಾರಿ/ ನೌಕರರುಗಳನ್ನು ನಿಯೋಜನೆ ಮಾಡಲು ಹಾಗೂ ವಿವಿಧ ಇಲಾಖೆಗಳಲ್ಲಿ ಹಾಲಿ ಗುತ್ತಿಗೆ/ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಸರ್ಕಾರಿ ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸಲು ಅಗತ್ಯ ಕ್ರಮವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದರು.

ಜ.9ರಂದು ಟಿಪ್ಪಣಿ ಹೊರಡಿಸಿದ್ದ ಸಿದ್ದರಾಮಯ್ಯ ಅವರು, “ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ರಾಜ್ಯ ಸರ್ಕಾರದ ಕೆಲವು ಇಲಾಖೆಗಳಲ್ಲಿ/ಸಚಿವಾಲಯದಲ್ಲಿ ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ಅಧಿಕಾರಿ/ ನೌಕರರನ್ನು ಅನಗತ್ಯವಾಗಿ ಹುದ್ದೆಗಳನ್ನು ಸೃಜಿಸಿ ಸಮಾಲೋಚಕರು/ ವಿಶೇಷ ಸಂಪನ್ಮೂಲ ವ್ಯಕ್ತಿಗಳನ್ನಾಗಿ ಹಾಗೂ ಕೆಲವು ಗ್ರೂಪ್-ಎ ವೃಂದದ ಹುದ್ದೆಗಳಿಗೂ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವುದು ಗಮನಕ್ಕೆ ಬಂದಿರುತ್ತದೆ. ಸದರಿ ನಿವೃತ್ತ ನೌಕರರಿಗೆ ವೇತನ, ವಾಹನ ಸೌಲಭ್ಯ ಇನ್ನಿತರೆ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿ ಆರ್ಥಿಕ ಹೊರೆಯಾಗುವುದಲ್ಲದೆ, ಕಾರ್ಯಕ್ಷಮತೆಯ ಗುಣಮಟ್ಟ ಹಾಗೂ ಉತ್ತರದಾಯಿತ್ಯದ ಕೊರತೆಯೂ ಎದ್ದು ಕಾಣುತ್ತಿದೆ” ಎಂದು ಉಲ್ಲೇಖಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯಾವುದು ರಾಮರಾಜ್ಯ? ಗಾಂಧೀಜಿ ಹೇಳಿದ್ದೇ, ಪ್ರಧಾನಿ ಪಾಲಿಸುತ್ತಿರುವುದೇ?

ಈ ಬಗ್ಗೆ ಕಾರ್ಯಪ್ರವೃತ್ತರಾದ ಮುಖ್ಯಕಾರ್ಯದರ್ಶಿಗಳು, ಸಿದ್ದರಾಮಯ್ಯ ಸೂಚನೆ ಅನುಸಾರ ಹಾಲಿ ಗುತ್ತಿಗೆ ಮತ್ತು ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಸರ್ಕಾರಿ ಅಧಿಕಾರಿ ಹಾಗೂ ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸಿ, ಹಾಲಿ ಸರ್ಕಾರಿ ಸೇವೆಯಲ್ಲಿರುವ ಅಧಿಕಾರಿ/ನೌಕರರುಗಳನ್ನು ನಿಯೋಜನೆ ಮಾಡಲು ಕೂಡಲೇ ಅಗತ್ಯ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಈ ಕಚೇರಿಗೆ ಸಲ್ಲಿಸುವಂತೆ ಗೋಯಲ್‌ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...