ಚಿತ್ರದುರ್ಗ | ಮಾಜಿ ಸಿಎಂ ನಿಜಲಿಂಗಪ್ಪ ಅವರ ಮನೆ ಖರೀದಿ; ಸರ್ಕಾರದಿಂದ 5 ಕೋಟಿ ರೂ. ಮಂಜೂರು

Date:

ಚಿತ್ರದುರ್ಗದಲ್ಲಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್‌ ನಿಜಲಿಂಗಪ್ಪ ಅವರ ಮನೆಯನ್ನು ಖರೀದಿಸಿ, ಅಭಿವೃದ್ದಿಪಡಿಸಲು ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ 5 ಕೋಟಿ ರೂ. ಅನುದಾನ ಮಂಜೂರು ಮಾಡಿದೆ.

ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಪರ ಕಾರ್ಯದರ್ಶಿ ಎನ್‌ ಶಾರದಾಂಬ ಅವರು ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್‌ ಟಿ ಅವರಿಗೆ ಪತ್ರ ಬರೆದಿದ್ದಾರೆ. ಮನೆ ಖರೀಸುವ ಕುರಿತು ನಿರ್ದೇಶನ ನೀಡಿದ್ದಾರೆ.”ನಿಜಲಿಂಗಪ್ಪ ಅವರ ಮನೆಯನ್ನು 4.18 ಕೋಟಿ ರೂ. ಹಣ ಕೊಟ್ಟು ವಿನಯ್ ಅವರಿಂದ ಖರೀದಿಸಬೇಕು. ಮನೆಯನ್ನು ಸಂರಕ್ಷಿಸಿ, ಅಭಿವೃದ್ದಿಪಡಿಸಬೇಕು” ಎಂದು ಸೂಚಿಸಿದ್ದಾರೆ.

ಈ ಹಿಂದೆ, 2020ರಲ್ಲಿಯೇ ನಿಜಲಿಂಗಪ್ಪ ಅವರ ಮನೆಯನ್ನು ಖರೀದಿಸಲು 5 ಕೋಟಿ ರೂ. ಅನುದಾನ ಒದಗಿಸುವುದಾಗಿ ಅಂದಿನ ಸರ್ಕಾರ ಘೋಷಿಸಿತ್ತು. ಆದರೆ, ಅದು ಕಾರ್ಯಗತಕ್ಕೆ ಬಂದಿರಲಿಲ್ಲ. ಇದೀಗ, ಸರ್ಕಾರವು ಅನುದಾನ ಮಂಜೂರು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗಾಗಲೇ 2 ಕೋಟಿ ರೂ. ಅನುದಾನಕ್ಕೆ ಮಂಜೂರಾತಿ ನೀಡಲಾಗಿದೆ. ಉಳಿದ 3 ಕೋಟಿ ರೂ. ಹಣವನ್ನು ಮಂಜೂರು ಮಾಡಲು ಆದೇಶಿಸಲಾಗಿದೆ. ನಿಜಲಿಂಗಪ್ಪನವರ ಮನೆಯನ್ನು ಸಂರಕ್ಷಿಸಿ, ಅಭಿವೃದ್ಧಿಗೊಳಿಸುವ ಜವಾಬ್ದಾರಿಯನ್ನು ಚಿತ್ರದುರ್ಗ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರಿಗೆ ವಹಿಸಲಾಗಿದೆ. ಅನುಮೋದಿತ ಅನುದಾನದಲ್ಲಿ ಅಂದಾಜುಪಟ್ಟಿ ಅನುಸಾರ ಸದರಿ ಮನೆಯನ್ನು 4,18,49,017 ರೂ.ಗಳ ಮೊತ್ತದಲ್ಲಿ ವಿನಯ್ ಅವರಿಂದ ಖರೀದಿಸಬೇಕು” ಎಂದು ಸೂಚನೆ ನೀಡಿದ್ದಾರೆ.

ಎಸ್ ನಿಜಲಿಂಗಪ್ಪ ಅವರು 2000ರ ಆಗಸ್ಟ್ 8ರಂದು ನಿಧನರಾದರು. ಅವರ ಎಲ್ಲ ಆಸ್ತಿಯು ಅವರ ಮಕ್ಕಳ ಹೆಸರಿಗೆ ವರ್ಗಾವಣೆ ಯಾಗಿತ್ತು. ಈಗ, ನಿಜಲಿಂಗಪ್ಪ ಅವರ ಮನೆಯು ಅವರ ಮೊಮ್ಮಗ ಎಸ್.ಕೆ ವಿನಯ್ ಸ್ವಾಧೀನದಲ್ಲಿದೆ. ವಿನಯ್ ಅವರಿಂದ ಮನೆಯನ್ನು ಖರೀದಿ, ಅಭಿವೃದ್ಧಿ ಪಡಿಸಬೇಕೆಂಬ ಒತ್ತಾಯಗಳು ಹಿಂದಿನಿಂದಲೂ ಇದ್ದವು. ಇದೀಗ, ಆ ಮನೆಯ ಖರೀದಿಗೆ ಸರ್ಕಾರ ಮುಂದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...