ಎನ್‌ಇಪಿ ಶಿಫಾರಸು ತಿರಸ್ಕರಿಸಿದ ಸರ್ಕಾರ ಅದರ ಆತ್ಮವನ್ನೇ ಜಾರಿಗೊಳಿಸುತ್ತಿದೆ: ಶಿಕ್ಷಣ ತಜ್ಞ ಶ್ರೀಪಾದ ಭಟ್

Date:

ಎನ್‌ಇಪಿ ಶಿಫಾರಸನ್ನು ತಿರಸ್ಕರಿಸಿದ್ದ ರಾಜ್ಯ ಸರ್ಕಾರವು ಈಗ ಅದರ ಆತ್ಮವನ್ನೇ ಜಾರಿಗೊಳಿಸುತ್ತಿದೆ ಎಂದು ಶಿಕ್ಷಣ ತಜ್ಞ, ಹಿರಿಯ ಬರಹಗಾರ ಬಿ. ಶ್ರೀಪಾದ ಭಟ್ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಹಣಕಾಸು ಬಜೆಟ್ ಅನ್ನು ಮಂಡಿಸಿದ್ದಾರೆ. ಬಜೆಟ್ ಮಂಡನೆ ವೇಳೆ “ರಾಜ್ಯದ 16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನದಿಂದ ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ವೃತ್ತಿಪರ ವಿಷಯ ತಜ್ಞರನ್ನು ‘ಪ್ರೊಫೆಸರ್ ಆಫ್ ಪ್ರಾಕ್ಟೀಸ್’ (Professor of Practice) ಆಗಿ ನೇಮಿಸಲಾಗುವುದು” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ರಾಜ್ಯ ಬಜೆಟ್ | NABARD ಸಹಯೋಗದೊಂದಿಗೆ ಮೈಸೂರಿನಲ್ಲಿ ರೇಷ್ಮೆಗೂಡು ಮಾರುಕಟ್ಟೆ ಸ್ಥಾಪನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರದ ಈ ನಿರ್ಧಾರವನ್ನು ಶಿಕ್ಷಣ ತಜ್ಞ ಶ್ರೀಪಾದ ಭಟ್ ಖಂಡಿಸಿದ್ದಾರೆ. ‘ಪ್ರೊಫೆಸರ್ ಆಫ್ ಪ್ರಾಕ್ಟೀಸ್’ ಎಂಬುದೇ ಕಾರ್ಪೋರೇಟೀಕರಣ ಮತ್ತು ಬ್ರಾಹ್ಮಣೀಕರಣ. ಈ ಜ್ಞಾನವೂ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.

“ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್ ಭಾಷಣದಲ್ಲಿ ’16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವೃತ್ತಿಪರ ವಿಷಯ ತಜ್ಞರನ್ನು professor of practice ಆಗಿ ನೇಮಕ ಮಾಡಿಕೊಳ್ಳಲಾಗುವುದು’ ಎಂದು ಹೇಳಿದ್ದಾರೆ. ಅಂದರೆ ಕಾಂಗ್ರೆಸ್ ಸರ್ಕಾರವು ಸಹ ಮೀಸಲಾತಿ ನೀತಿಯನ್ನು ಉಲ್ಲಂಘಿಸುವ ಲ್ಯಾಟ್ರಲ್ ಪ್ರವೇಶವನ್ನು ಪ್ರಾರಂಭಿಸುತ್ತಿದ್ದಾರೆ” ಎಂದಿದ್ದಾರೆ.

“ಪ್ರೊಫೆಸರ್ ಆಫ್ ಪ್ರಾಕ್ಟೀಸ್ ಎನ್ನುವುದೇ ಶಿಕ್ಷಣದ ಕಾರ್ಪೋರೇಟೀಕರಣ ಮತ್ತು ಬ್ರಾಹ್ಮಣೀಕರಣ ಎನ್ನುವ ಸಾಮಾನ್ಯ ತಿಳುವಳಿಕೆಯೂ ಇಲ್ಲವಾಯಿತೇ? ಇದು ಎನ್‌ಇಪಿಯ ಶಿಫಾರಸು. ಅದನ್ನು ತಿರಸ್ಕರಿಸಿದ ಸರ್ಕಾರವು ಅದರ ಆತ್ಮವನ್ನೇ ಜಾರಿಗೊಳಿಸುತ್ತಿದೆ. ಸರ್ಕಾರ ಎಲ್ಲಿಗೆ ಬಂದು ತಲುಪಿದೆ” ಎಂದು ಟೀಕಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಂಗಳೂರು ಅಭಿವೃದ್ಧಿಗೆ 7,000 ಕೋಟಿ ರೂ. ಅನುದಾನ ಘೋಷಣೆ; ಬಜೆಟ್‌ನಲ್ಲಿ ರಾಜಧಾನಿಗೆ ಬೇರೇನಿದೆ?

ಪ್ರೊಫೆಸರ್ ಆಫ್ ಪ್ರಾಕ್ಟೀಸ್ ಎಂದರೆ ಒಂದು ನಿರ್ದಿಷ್ಟ ಕ್ಷೇತ್ರಕ್ಕೆ ಸಂಬಂಧಿಸಿ ತಜ್ಞರು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಉಪನ್ಯಾಸಕರಾಗುವುದು. ಪ್ರಾಯೋಗಿಕ ಕೌಶಲ್ಯ ಮತ್ತು ಸೈದ್ಧಾಂತಿಕ ವಿಚಾರಗಳನ್ನು ಪ್ರಸ್ತುತತೆಗೆ ತಕ್ಕುದಾಗಿ ವಿವರಿಸುವ, ಕಲಿಸುವ ಕರ್ತವ್ಯ ಇವರದ್ದಾಗಿರುತ್ತದೆ.

ಆದರೆ ಶಿಕ್ಷಕರಾಗಲು ಅಗತ್ಯವಿರುವ ವಿದ್ಯಾಭ್ಯಾಸವನ್ನು ಪಡೆಯದಿರುವ, ಆ ವಿಷಯದ ಬಗ್ಗೆ ಸಂಶೋಧನೆ ಮಾಡದಿರುವ, ವಿದ್ಯಾರ್ಥಿಗಳಿಗೆ ಭೋದಿಸುವ ಕೌಶಲ್ಯ ತಿಳಿಯದವರನ್ನು ಉಪನ್ಯಾಸಕರನ್ನಾಗಿಸುವುದು ಸರಿಯಲ್ಲ. ಕ್ರಮೇಣ ಇವರೇ ಖಾಯಂ ಉಪನ್ಯಾಸಕರಾಗುವ ಪ್ರಯತ್ನ ಮಾಡಬಹುದು ಎಂಬ ವಾದವಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...