ಎಲ್ಲ ರೀತಿಯ ಸೌಲಭ್ಯಗಳಿರುವ ಮೂರು ಸಾವಿರ ಸರ್ಕಾರಿ ಶಾಲೆ ನಿರ್ಮಾಣ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Date:

ರಾಜ್ಯದಲ್ಲಿ ಒಟ್ಟು ಮೂರು ಸಾವಿರ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ನಿರ್ಮಿಸಲು ಸರ್ಕಾರ ತೀರ್ಮಾನಿಸಿದೆ. ಈ ವರ್ಷ 500ರಿಂದ 600 ಶಾಲೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಈ ಶಾಲೆಗಳಲ್ಲಿ ಮೂಲಸೌಕರ್ಯಗಳು ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳು ಇರಲಿವೆ. ಇದರಿಂದ ಮಕ್ಕಳಿಗೆ ಅನುಕೂಲವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

‘ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳನ್ನು ಬಿಟ್ಟು ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ಹೋಗಿ ಸೇರಿದರೆ, ನಮ್ಮ ಶಾಲೆಗಳ ಗುಣಮಟ್ಟ ಸರಿ ಇಲ್ಲ ಎಂದೇ ಅರ್ಥ. ಇದನ್ನು ಸರಿಪಡಿಸಲು ಸರ್ಕಾರ ಮುಂದಾಗಿದೆ’ ಎಂದು ಮಧು ಬಂಗಾರಪ್ಪ ಬೆಂಗಳೂರಿನಲ್ಲಿ ಮಾತನಾಡುತ್ತಾ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಿ ಶಾಲೆಗಳ ಸುಮಾರು 53 ಸಾವಿರ ವಿದ್ಯಾರ್ಥಿಗಳು ಕಳೆದ ಐದು ವರ್ಷಗಳಲ್ಲಿ ಅನುದಾನಿತ ಶಾಲೆಗಳಿಗೆ ಮತ್ತು ಖಾಸಗಿ ಶಾಲೆಗಳಿಗೆ ಸೇರಿದ್ದಾರೆ ಎಂಬ ವರದಿಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ನ್ಯಾಯಾಲಯದ ತೀರ್ಪು ಹೊರಬಂದ ನಂತರ 13,500 ಶಿಕ್ಷಕರಿಗೆ ನೇಮಕಾತಿ ಆದೇಶ ಪತ್ರ ನೀಡಲಾಗುವುದು. ನ್ಯಾಯಾಲಯ ಇನ್ನು ಒಂದು ತಿಂಗಳಲ್ಲಿ ನೇಮಕಾತಿ ಆದೇಶ ಪತ್ರ ನೀಡಲು ಅನುಮತಿ ನೀಡಬಹುದು ಎಂದು ಇದೇ ವೇಳೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ರಾಜ್ಯದ ಸರ್ಕಾರಿ ಶಾಲೆಗಳಿಗೆ ಒಟ್ಟು 53 ಸಾವಿರ ಶಿಕ್ಷಕರ ಅಗತ್ಯ ಇದೆ. 20 ಸಾವಿರ ಶಿಕ್ಷಕರು ಸೇರ್ಪಡೆಯಾದರೆ ಈಗಿರುವ ಶಿಕ್ಷಕರ ಮೇಲಿನ ಒತ್ತಡ ಕಡಿಮೆ ಆಗಲಿದೆ. ಇನ್ನೂ 20 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಸಂಬಂಧ ಮುಖ್ಯಮಂತ್ರಿಯವರಿಗೆ ಪ್ರಸ್ತಾವ ಸಲ್ಲಿಸಲು ಉದ್ದೇಶಿಸಲಾಗಿದೆ. ಇದಕ್ಕೆ ಒಪ್ಪಿಗೆ ನೀಡಿದರೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಈ ನೇಮಕಾತಿಯೂ ಪೂರ್ಣಗೊಳ್ಳಲಿದೆ ಎಂದು ಇದೇ ವೇಳೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...