ಜಪಾನ್‌ ಕಂಪನಿಗಳು ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ: ಎಂ ಬಿ ಪಾಟೀಲ

Date:

ಕರ್ನಾಟಕ ಮತ್ತು ಜಪಾನ್ ನಡುವಿನ ಸಂಬಂಧ ಮೊದಲಿನಿಂದಲೂ ರಚನಾತ್ಮಕವಾಗಿದೆ. ಇದನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ರಾಜ್ಯ ಸರಕಾರವು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಇದಕ್ಕೆ ಪೂರಕವಾಗಿ ಜಪಾನಿನ ಕಂಪನಿಗಳು ಕೂಡ ರಾಜ್ಯದಲ್ಲಿ ಮತ್ತಷ್ಟು ಹೆಚ್ಚಿನ ಬಂಡವಾಳ ಹೂಡಬೇಕು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಜಪಾನಿನಿಂದ ಆಗಮಿಸಿರುವ ಸಂಸದೀಯ ನಿಯೋಗದ ಸದಸ್ಯರ ಜತೆ ಬುಧವಾರ ಅವರು ಮಾತುಕತೆ ನಡೆಸಿ, ಈ ಮಾತುಗಳನ್ನಾಡಿದ್ದಾರೆ.

“ರಾಜ್ಯದಲ್ಲಿ ಟೊಯೋಟಾ, ಹಿಟಾಚಿ, ಮಿತ್ಸುಬಿಶಿ, ಹೋಂಡಾ, ಮಕಿಟಾ, ಮಕಿನೋ ಸೇರಿದಂತೆ ಜಪಾನಿನ 525ಕ್ಕೂ ಹೆಚ್ಚು ಕಂಪನಿಗಳು ನೆಲೆ ಹೊಂದಿದ್ದು, ಕೈಗಾರಿಕಾ ಚಟುವಟಿಕೆಗಳನ್ನು ನಡೆಸುತ್ತಿವೆ. ಹಾಗೆಯೇ, ತುಮಕೂರಿನಲ್ಲಿ ಪ್ರತ್ಯೇಕ ಜಪಾನ್ ಕೈಗಾರಿಕಾ ಟೌನ್ ಶಿಪ್ ಇದೆ. ಜೊತೆಗೆ, ಎರಡೂ ದೇಶಗಳ ನವೋದ್ಯಮಗಳ ನಡುವಿನ ನೆರವಿಗೆ ಜಪಾನ್-ಇಂಡಿಯಾ ಸ್ಟಾರ್ಟಪ್ ಹಬ್ ಎಂಬ ಆನ್ಲೈನ್ ವೇದಿಕೆಯೂ ಇದೆ. ತಂತ್ರಜ್ಞಾನ ಪರಿಣತಿಗೆ ಹೆಸರಾಗಿರುವ ಜಪಾನಿನ ಮತ್ತಷ್ಟು ಕಂಪನಿಗಳು ರಾಜ್ಯಕ್ಕೆ ಬರಬೇಕು” ಎಂದು ಅವರು ಆಹ್ವಾನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯವು ಇತ್ತೀಚಿನ ವರ್ಷಗಳಲ್ಲಿ ಕೃತಕ ಬುದ್ಧಿಮತ್ತೆ, ಮಶೀನ್ ಲರ್ನಿಂಗ್, ವಿದ್ಯುಚ್ಚಾಲಿತ ವಾಹನಗಳ ತಯಾರಿಕೆ ಮುಂತಾದ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದು, ಜಾಗತಿಕ ಮಟ್ಟದ ಸಂಶೋಧನಾ ಕೇಂದ್ರಗಳನ್ನೂ ಹೊಂದಿದೆ. ಜಪಾನಿನ ಹೂಡಿಕೆದಾರರು ಇವುಗಳ ಲಾಭವನ್ನು ಪಡೆದುಕೊಂಡು, ಕರ್ನಾಟಕದಲ್ಲಿಯೇ ತಮ್ಮ ಉತ್ಪಾದನಾ/ತಯಾರಿಕಾ ಚಟುವಟಿಕೆಗಳನ್ನು ಆರಂಭಿಸಬೇಕು” ಎಂದು ಅವರು ಕೋರಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಭಿಮಾನ ಅಂಧಾಭಿಮಾನವಾಗದಿರಲಿ; ಬಡವರ ಮಕ್ಕಳು ಬಲಿಯಾಗದಿರಲಿ

“ವಾಣಿಜ್ಯ ವಹಿವಾಟು ಮತ್ತು ವಿದೇಶಿ ನೇರ ಹೂಡಿಕೆಯಲ್ಲಿ ಎರಡೂ ದೇಶಗಳ ನಡುವೆ ಒಳ್ಳೆಯ ನಂಟಿದೆ. ಜಪಾನ್ ದೇಶವು ಭಾರತದಲ್ಲಿ ಹೂಡಿಕೆ ಮಾಡುತ್ತಿರುವ ರಾಷ್ಟ್ರಗಳ ಪೈಕಿ ಐದನೆಯ ಸ್ಥಾನದಲ್ಲಿದೆ. ರಾಜ್ಯ ಸರಕಾರವು ರೂಪಿಸಿರುವ 2020-25ರ ನಡುವಿನ ಕೈಗಾರಿಕಾ ನೀತಿಯಲ್ಲಿ ಹತ್ತು ಹಲವು ಉದ್ಯಮಸ್ನೇಹಿ ಅಂಶಗಳನ್ನು ಅಳವಡಿಸಿಕೊಳ್ಳಲಾಗಿದೆ” ಎಂದು ಸಚಿವರು ಜಪಾನ್ ನಿಯೋಗಕ್ಕೆ ಮನದಟ್ಟು ಮಾಡಿಕೊಟ್ಟರು.

ಜಪಾನ್ ನಿಯೋಗದಲ್ಲಿ ಆ ದೇಶದ ವಿವಿಧ ಪಕ್ಷಗಳ ಸಂಸದರಾದ ಹೋಂಡಾ ತಾರೋ, ಕವಾಸಕಿ ಹಿದೆಸ್ತೋ, ಯಮಾಗುಚಿ ಸುಸುಮು, ಕೋಬಯಾಶಿ ಕಝುಹಿರೋ ಮತ್ತು ಬೆಂಗಳೂರಿನಲ್ಲಿರುವ ಜಪಾನ್ ಕಾನ್ಸುಲ್ ಜನರಲ್ ನಕಾನೆ ಸುಟೋಮು, ಡೆಪ್ಯುಟಿ ಕಾನ್ಸುಲ್ ಜನರಲ್ ಕಯಾ ಹೊಕುಟೋ ಇದ್ದರು.

ರಾಜ್ಯ ಸರಕಾರದ ಪರವಾಗಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...