ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆ, ರಾಜಭವನ ಬಿಜೆಪಿ ಕಚೇರಿ: ಎಂ‌ ಬಿ ಪಾಟೀಲ್‌ ಕಿಡಿ

Date:

ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದು, ರಾಜಭವನವು ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದ ನೆವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗವಾಗಿದೆ. ಇದಕ್ಕೆ ಬಿಜೆಪಿಯವರು ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ಕಿಡಿಕಾರಿದ್ದಾರೆ.

ಶನಿವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಟಿ ಜೆ ಅಬ್ರಹಾಂ ಅವರು ಸಿಎಂ ವಿರುದ್ಧ ದೂರು ಕೊಟ್ಟಾಗಲೇ ಸರಕಾರದ ಮುಖ್ಯ ಕಾರ್ಯದರ್ಶಿಗಳು ರಾಜಭವನಕ್ಕೆ ಸಮರ್ಪಕ ಮಾಹಿತಿ ಕೊಟ್ಟಿದ್ದರು. ಆದರೂ ರಾಜ್ಯಪಾಲರು ತರಾತುರಿಯಲ್ಲಿ ಸಿದ್ದರಾಮಯ್ಯನವರಿಗೆ ನೋಟಿಸ್ ಕೊಟ್ಟರು. ಆಗಲೇ ಅವರ ಮೇಲೆ ಅನುಮಾನ ಬಂದಿತ್ತು. ಈಗಿನ ಅವರ ನಡೆ ಅನಪೇಕ್ಷಣೀಯವಾಗಿದೆ. ಇದನ್ನು ರಾಜ್ಯದ ಜನತೆ ಸಹಿಸಿಕೊಳ್ಳುವುದಿಲ್ಲ” ಎಂದರು.

“ಎಚ್ ಡಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ ಮುಂತಾದವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ‌ ಕೋರಿ ಎಂಟ್ಹತ್ತು ತಿಂಗಳಿನಿಂದಲೂ ರಾಜ್ಯಪಾಲರ ಮುಂದೆ ಕೋರಿಕೆಗಳಿವೆ. ಅವುಗಳನ್ನು ಉದಾಸೀನ ಮಾಡಿರುವ ಅವರು,‌ ಯಾವ ಹುರುಳೂ ಇಲ್ಲದ ಮುಡಾ ಹಗರಣದ ಬಗ್ಗೆ ವಿಪರೀತ ಆಸಕ್ತಿ ತಾಳಿದ್ದಾರೆ” ಎಂದು ಅವರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರದ ಬಿಜೆಪಿ ಸರಕಾರವು ದೆಹಲಿ, ತಮಿಳುನಾಡು ಮುಂತಾದ ರಾಜ್ಯ ಸರ್ಕಾರಗಳ ವಿರುದ್ಧ ನಡೆಸುತ್ತಿರುವಂತಹ ಕೆಟ್ಟ ರಾಜಕಾರಣವನ್ನು ಈಗ ಕರ್ನಾಟಕದಲ್ಲೂ ಶುರು ಮಾಡಿದೆ. ಇದು ಭಾರೀ ಬಹುಮತದಿಂದ ಆರಿಸಿ ಬಂದಿರುವ ರಾಜ್ಯ ಸರ್ಕಾರದ ವಿರುದ್ಧ ತೋರಿಸುತ್ತಿರುವ ಅಸಹನೆಯಾಗಿದೆ” ಎಂದು ಅವರು ಟೀಕಿಸಿದರು.

“ಮುಡಾ ಹಗರಣದಲ್ಲಿ ತಪ್ಪು ಮಾಡಿರುವುದು ಆ ಸಂಸ್ಥೆ. ಸಿದ್ದರಾಮಯ್ಯನವರ ಕುಟುಂಬಕ್ಕೆ ಬದಲಿ ನಿವೇಶನಗಳನ್ನು ಕೊಟ್ಟಿದ್ದು ಬಿಜೆಪಿ ಸರಕಾರ. ಆಗ ಮುಡಾ ಸಭೆಯಲ್ಲಿ ಬಿಜೆಪಿ ನಾಯಕರೇ ಇದ್ದರು. ವಸ್ತುಸ್ಥಿತಿ ಹೀಗಿರುವಾಗ ಸಿದ್ದರಾಮಯ್ಯನವರನ್ನು ಬಲಿಪಶು ಮಾಡಲು ಸಂಚು ನಡೆಯುತ್ತಿರುವುದು ಖಂಡನೀಯ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...