ಕೆಪಿಎಸ್‌ಸಿ ಹುಳುಕು ಸರಿಪಡಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲ: ಬಿ ವೈ ವಿಜಯೇಂದ್ರ ಕಿಡಿ

Date:

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಕ್ರಮ ಬಯಲಾಗಿದ್ದು, ಉದ್ಯೋಗದಾತ ಸಂಸ್ಥೆಯ ಹುಳುಕು ಸರಿಪಡಿಸುವಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟೀಕಿಸಿದ್ದಾರೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಹುದ್ದೆಗಳ ನೇಮಕಾತಿಯಲ್ಲಿ 10 ಅಭ್ಯರ್ಥಿಗಳು ಒಎಂಆರ್‌ ಶೀಟ್‌ ತಿದ್ದಿ ಹುದ್ದೆಗೆ ಆಯ್ಕೆಯಾಗಿರುವ ಬಗ್ಗೆ ವಿಚಾರಣಾ ಸಮಿತಿ ವರದಿ ನೀದ್ದು, ಇದನ್ನು ಉಲ್ಲೇಖಿಸಿ ವಿಜಯೇಂದ್ರ ಟ್ವೀಟ್‌ ಮಾಡಿದ್ದಾರೆ.

“ದೇಶಾದ್ಯಂತ ತನ್ನ ಯಡವಟ್ಟುಗಳಿಂದಲೇ ಚರ್ಚೆಯಲ್ಲಿರುವ ಕೆಪಿಎಸ್‌ಸಿಯ ಅಕ್ರಮಗಳು ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಂಡು ಬಯಲಾಗುತ್ತಿವೆ. ಲಕ್ಷಾಂತರ ಉದ್ಯೋಗ ಆಕಾಂಕ್ಷಿಗಳಿಗೆ ಪ್ರತಿಯೊಂದು ಪರೀಕ್ಷೆಗಳಲ್ಲೂ ಗೊಂದಲಗಳನ್ನು ಸೃಷ್ಟಿಸಿ ಅಕ್ರಮಗಳ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವ ಮುನ್ನವೂ ಗೊಂದಲ ಸೃಷ್ಟಿಸಿ, ಪರೀಕ್ಷೆಯ ನಂತರವೂ ಸಂಕಟ ತಂದೊಡ್ಡಿತ್ತು” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ನೆಲದಲ್ಲಿ ಮೋದಿ ಸಾಧಿಸಿದ್ದಕ್ಕಿಂತ ತಲೆ ಬಾಗಿದ್ದೇ ಹೆಚ್ಚು

“ಕರ್ನಾಟಕದ ಆಡಳಿತದಲ್ಲಿ ದಕ್ಷತೆ ತುಂಬಬೇಕಾದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಆಯ್ಕೆ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗದ ವ್ಯವಸ್ಥೆಗೆ ಅಕ್ರಮಗಳ ಸುರುಳಿ ಸುತ್ತಿಕೊಂಡಿರುವಾಗ ಉದ್ಯೋಗಾಕಾಂಕ್ಷಿತ ರಾಜ್ಯದ ಅಭ್ಯರ್ಥಿಗಳಿಗೆ ನ್ಯಾಯ ಸಿಗುವುದಾದರೂ ಹೇಗೆ” ಎಂದು ಪ್ರಶ್ನಿಸಿದ್ದಾರೆ.

“ರಾಜ್ಯದಲ್ಲಿರುವ ದಪ್ಪಚರ್ಮದ ಹಾಗೂ ಭ್ರಷ್ಟಾಚಾರದ ಕಪ್ಪುಮಸಿ ಅಂಟಿಸಿಕೊಂಡಿರುವ ರಾಜ್ಯ ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಅಕ್ರಮವೆಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಲಕ್ಷಾಂತರ ಪ್ರತಿಭಾವಂತ ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ನ್ಯಾಯಯುತ ಮಾರ್ಗದೆಡೆಗೆ ಹೆಜ್ಜೆ ಹಾಕಲಿ” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...