ಸ್ವಾತಂತ್ರ್ಯ ದಿನಾಚರಣೆ ಪೋಸ್ಟರ್‌ | ಗಾಂಧಿಗಿಂತ ಸಾವರ್ಕರ್‌ಗೆ ಪ್ರಾಮುಖ್ಯತೆ ನೀಡಿದ ಕೇಂದ್ರ: ತೀವ್ರ ಆಕ್ರೋಶ

Date:

ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಪೋಸ್ಟರ್‌ನಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಸುಭಾಷ್ ಚಂದ್ರ ಬೋಸ್‌ಗಿಂತ ದೊಡ್ಡದಾಗಿ ಹಿಂದುತ್ವ ಸಿದ್ಧಾಂತವಾದಿ, ಬ್ರಿಟೀಷರಲ್ಲಿ ಕ್ಷಮೆ ಕೋರಿದ್ದ ವಿ ಡಿ ಸಾವರ್ಕರ್ ಚಿತ್ರವನ್ನು ಬಳಸಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ರಾಷ್ಟ್ರಪಿತ ಮಹಾತ್ಮ ಗಾಂಧಿ ಹತ್ಯೆ ಆರೋಪ ಹೊಂದಿರುವವರನ್ನೇ ಕೇಂದ್ರ ಸರ್ಕಾರ ವೈಭವೀಕರಿಸುತ್ತಿರುವುದಕ್ಕೆ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಎಕ್ಸ್‌ನಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ, ಮಹಾತ್ಮಗಾಂಧಿ, ಬೋಸ್, ಭಗತ್ ಸಿಂಗ್ ಮತ್ತು ಸಾವರ್ಕರ್ ಅವರ ಛಾಯಾಚಿತ್ರಗಳು, ಕೆಂಪು ಕೋಟೆ, ತ್ರಿವರ್ಣ ಧ್ವಜ ಮತ್ತು ಅಶೋಕ ಚಕ್ರವನ್ನು ಹೊಂದಿರುವ ಚಿತ್ರವನ್ನು ಪೋಸ್ಟರ್ ಮಾಡಿದ್ದು, “ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು” ಎಂದು ಬರೆದುಕೊಂಡಿದೆ. ಆದರೆ ಈ ಚಿತ್ರವು ತೀವ್ರ ವಿವಾದಕ್ಕೆ ಕಾರಣವಾಗಿದೆ.

ಇದನ್ನು ಓದಿದ್ದೀರಾ? ಭಗತ್ ಸಿಂಗ್ ಹೆಸರಿಡಲು ಆಗ್ರಹಿಸಿ ಸಾವರ್ಕರ್ ಫ್ಲೈ ಓವರ್‌ಗೆ ಮಸಿ ಬಳಿದ NSUI ಕಾರ್ಯಕರ್ತರು: ಮೂವರ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪೋಸ್ಟರ್ ಬಗ್ಗೆ ವಿರೋಧ ವ್ಯಕ್ತಪಡಿಸಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಪಿಐಎಂ ಸಂಸದ ಜಾನ್ ಬ್ರಿಟಾಸ್, “ವಿ.ಡಿ. ಸಾವರ್ಕರ್ ಅವರನ್ನು ಉದ್ದೇಶಪೂರ್ವಕವಾಗಿ ಮಹಾತ್ಮ ಗಾಂಧಿಯವರ ಮೇಲೆ ಹಾಕಿರುವುದು ಕಾಕತಾಳೀಯವಲ್ಲ, ಬದಲಾಗಿ ಒಂದು ಉದ್ದೇಶಪೂರ್ವಕ ಕೃತ್ಯ. ಸರ್ಕಾರದ ಕ್ರಮಗಳು ದೇಶದ ಜಾತ್ಯತೀತ ಸಂವಿಧಾನದ ಬದ್ಧತೆಯನ್ನು ದುರ್ಬಲಗೊಳಿಸುತ್ತವೆ” ಎಂದು ದೂರಿದ್ದಾರೆ.

“ಸಾವರ್ಕರ್ ಗಾಂಧಿಯವರ ಹತ್ಯೆಯಲ್ಲಿ ಆರೋಪಿಯಾಗಿದ್ದರು. ಆದರೆ ಸಾಕಷ್ಟು ಸಾಕ್ಷ್ಯಾಧಾರಗಳಿಲ್ಲದ ಕಾರಣ ಅವರನ್ನು ಖುಲಾಸೆಗೊಳಿಸಲಾಯಿತು. ಆದಾಗ್ಯೂ ಕಪೂರ್ ಆಯೋಗವು ಸಾವರ್ಕರ್ ಅವರು ಅಪರಾಧಿ ಎಂಬ ಸಾಂದರ್ಭಿಕ ಸಾಕ್ಷ್ಯಗಳನ್ನು ಎತ್ತಿ ತೋರಿಸಿದೆ. ಸಂವಿಧಾನವನ್ನು ಎತ್ತಿಹಿಡಿಯುವವರಿಂದ ನ್ಯಾಯ ಮತ್ತು ಜಾತ್ಯತೀತ ಮೌಲ್ಯಗಳ ಈ ಅಣಕವನ್ನು ನಿಸ್ಸಂದಿಗ್ಧವಾಗಿ ಖಂಡಿಸಬೇಕು” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಕೆ.ಸಿ. ವೇಣುಗೋಪಾಲ್, “ಇದು Orwellian(ಇತಿಹಾಸದ ಬದಲಾವಣೆ) ಪ್ರತಿರೂಪ. ಬ್ರಿಟೀಷರಿಗೆ ದಯಾ ಅರ್ಜಿ ಬರೆದ ಸಾವರ್ಕರ್‌ನಂತಹ ವ್ಯಕ್ತಿಯ ಚಿತ್ರವನ್ನು ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಜೊತೆ ಹಾಕಿರುವುದು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಸರ್ಕಾರಕ್ಕಿರುವ ತಿರಸ್ಕಾರದ ಮನೋಭಾವವನ್ನು ಎತ್ತಿತೋರಿಸುತ್ತದೆ” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ಪ್ರತಿ ಸ್ವಾತಂತ್ರ್ಯ ದಿನದಂದು, ಮೋದಿ ನೇತೃತ್ವದ ಬಿಜೆಪಿ ಇತಿಹಾಸವನ್ನು ವಿರೂಪಗೊಳಿಸಿ ದೇಶದ್ರೋಹಿಗಳನ್ನು ವೀರರನ್ನಾಗಿ ಮಾಡುವುದನ್ನು ಒಂದು ಗುರಿಯನ್ನಾಗಿಸಿಕೊಂಡಿದೆ. ದ್ವೇಷದ ಬೀಜಗಳನ್ನು ಬಿತ್ತಲು ಬ್ರಿಟಿಷರೊಂದಿಗೆ ಸಹಕರಿಸಿದವರಿಂದ ನಾವು ಏನು ಬಯಸಲು ಸಾಧ್ಯ” ಎಂದು ಪ್ರಶ್ನಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...