ಜಿಲ್ಲಾ, ತಾಲ್ಲೂಕು ಪಂಚಾಯತಿ ಚುನಾವಣೆ | ಸರ್ಕಾರಕ್ಕೆ ನಾಲ್ಕು ವಾರದ ಗಡುವು ನೀಡಿದ ಹೈಕೋರ್ಟ್

Date:

  • ಕ್ಷೇತ್ರಗಳ ವಿಂಗಡಣೆ ಹಾಗೂ ಮೀಸಲಾತಿ ಪಟ್ಟಿ ಅಂತಿಮಗೊಳಿಸಲು ಸೂಚನೆ
  • ಶಾಸನಬದ್ಧ ಸಂಸ್ಥೆಗಳನ್ನು ಚುನಾವಣೆ ನಡೆಸದೇ ಬಿಡಲಾಗದು: ಹೈಕೋರ್ಟ್‌

ಕಳೆದ ಎರಡು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ನಾಲ್ಕು ವಾರದೊಳಗೆ ಕ್ಷೇತ್ರಗಳ ವಿಂಗಡಣೆ ಹಾಗೂ ಮೀಸಲಾತಿ ಪಟ್ಟಿ ಅಂತಿಮಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ನಿಗದಿತ ಅವಧಿಯೊಳಗೆ ರಾಜ್ಯ ಸರ್ಕಾರ ಚುನಾವಣೆಗೆ ಅಗತ್ಯವಿರುವ ಮೀಸಲಾತಿ ಪಟ್ಟಿ ಮತ್ತು ಕ್ಷೇತ್ರ ಪುನರ್ ವಿಂಗಡಣೆಯ ವಿವರ ಸಲ್ಲಿಸಿಲ್ಲ ಎಂದು ಆರೋಪಿಸಿ ಚುನಾವಣಾ ಆಯೋಗ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ ಬಿ ಹೊರಾಳೆ ಮತ್ತು ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ರಾಜ್ಯ ಸರ್ಕಾರಕ್ಕೆ ಈ ಸೂಚನೆ ನೀಡಿದೆ.

ಅರ್ಜಿಯ ವಿಚಾರಣೆ ವೇಳೆ ಸರ್ಕಾರದ ಪರವಾಗಿ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಕ್ಷೇತ್ರ ಪುನರ್ ವಿಂಗಡಣೆ ಕುರಿತಂತೆ ಸೀಮಾ ನಿರ್ಣಯ ಆಯೋಗ ಇನ್ನೂ ವರದಿ ಸಲ್ಲಿಸಿಲ್ಲ. ಹಾಗೆ ಮೀಸಲಾತಿ ನಿಗದಿ ಕುರಿತು ಸಮಿತಿ ವರದಿ ನೀಡಿದ್ದು ಅದರ ಪರಿಶೀಲನೆ ಮಾಡಲಾಗುತ್ತಿದೆ. ಹೀಗಾಗಿ ಇನ್ನೂ ಹತ್ತು ವಾರಗಳ ಕಾಲಾವಕಾಶ ನೀಡುವಂತೆ” ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ಮಳೆ: ಜನರಿಗೆ ನರಕದಿಂದ ಮುಕ್ತಿ ಸಿಗುವುದೆಂದು?

ಇದನ್ನು ತಿರಸ್ಕರಿಸಿದ ನ್ಯಾಯಪೀಠ, “ಶಾಸನಬದ್ಧ ಸಂಸ್ಥೆಗಳನ್ನು ಚುನಾವಣೆ ನಡೆಸದೇ ಬಿಡಲಾಗದು. ಈ ವಿಷಯದಲ್ಲಿ ಸರ್ಕಾರಕ್ಕೆ ಈಗಾಗಲೇ ಸಾಕಷ್ಟು ಸಮಯಾವಕಾಶ ನೀಡಲಾಗಿದೆ. ಇನ್ನು ಮುಂದೆ ಇದು ಸಾಧ್ಯವಿಲ್ಲ. ಮುಂದಿನ ಒಂದು ತಿಂಗಳಲ್ಲಿ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿ ಕೋರ್ಟ್‌ಗೆ ವರದಿ ಸಲ್ಲಿಸಬೇಕು. ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಬೇಕು” ಎಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...