ಸಾರಿಗೆ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರದಿಂದ ‘ಗ್ರೀನ್ ಸಿಗ್ನಲ್’

Date:

  • ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ 2016 ನಂತರ ಇದೇ ಮೊದಲ ಬಾರಿಗೆ ನೇಮಕಾತಿ
  • ಒಟ್ಟು 8 ಸಾವಿರಕ್ಕೂ ಅಧಿಕ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಅನುಮತಿ

ಸಾರಿಗೆ ಸಂಸ್ಥೆಗಳಲ್ಲಿ‌ ಕಳೆದ ಎಂಟು ವರುಷಗಳಿಂದ ಅಂದರೆ 2016ರಲ್ಲಿನ ನೇಮಕಾತಿ ನಂತರ ಯಾವುದೇ ನೇಮಕಾತಿ ಆಗಿರಲಿಲ್ಲ. ಈ ಸಂಬಂಧ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ 2016ರಿಂದ ಇಲ್ಲಿಯವರೆಗೆ ಸಿಬ್ಬಂದಿಗಳ ನಿವೃತ್ತಿ ಹಾಗೂ ಇತರೆ ಕಾರಣಗಳಿಂದ 13,669 ಖಾಲಿ ಹುದ್ದೆಗಳಿದ್ದವು.

ಈ ಬಗ್ಗೆ 13000 ಚಾಲನಾ ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಸಾರಿಗೆ ಸಂಸ್ಥೆಗಳಿಗೆ ಅನುಮತಿ ನೀಡುವಂತೆ ಸರ್ಕಾರವನ್ನು ಕೋರಲಾಗಿತ್ತು. ಅದರಂತೆ ಮೊದಲನೇ ಹಂತದಲ್ಲಿ 6500 ಚಾಲನಾ ಸಿಬ್ಬಂದಿಗಳಿಗೆ ಹಾಗೂ 300 ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರದಿಂದ ಅನುಮತಿ ದೊರಕಿದೆ.

ಕೆಎಸ್‌ಆರ್‌ಟಿಸಿಯಲ್ಲಿ ಡ್ರೈವರ್ ಕಮ್ ಕಂಡಕ್ಟರ್-2000, ತಾಂತ್ರಿಕ ಸಿಬ್ಬಂದಿ-300, ಎನ್‌ಡಬ್ಲ್ಯೂಕೆಆರ್‌ಟಿಸಿ ಡ್ರೈವರ್ ಕಮ್ ಕಂಡಕ್ಟರ್-2000, ಬಿಎಂಟಿಸಿ ಕಂಡಕ್ಟರ್ 2500 ಹಾಗೂ ಕೆಕೆಆರ್‌ಟಿಸಿಯಲ್ಲಿ ಈಗಾಗಲೇ 1619 ಚಾಲನಾ ಸಿಬ್ಬಂದಿಗಳ ನೇಮಕಾತಿ‌ ಪ್ರಕ್ರಿಯೆ ‌ಪ್ರಾರಂಭವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧ ಚಾಲನಾ ಪರೀಕ್ಷೆ ನಡೆಯುತ್ತಿದ್ದು, ಜನವರಿ 2024ರ ಕೊನೆಯಲ್ಲಿ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆಯಾಗಲಿದೆ. ಕೆಕೆಆರ್‌ಟಿಸಿಯಲ್ಲಿ 300 ಕಂಡಕ್ಟರ್‌ಗಳ ನೇಮಕಾತಿಗೆ ಅನುಮತಿ ದೊರಕಿದ್ದು, ಅಧಿಸೂಚನೆ ಹೊರಡಿಸುವ ಹಂತದಲ್ಲಿದೆ. ಒಟ್ಟಾರೆ 8719 ಚಾಲನಾ‌ ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಚಾಲನೆ ದೊರಕಿದೆ.

ಶಕ್ತಿ ಯೋಜನೆಗೆ 5,675 ಹೊಸ ಬಸ್‌ ಖರೀದಿ

ಶಕ್ತಿ ಯೋಜನೆಗೆ ರಾಜ್ಯಾದ್ಯಂತ ನಿರೀಕ್ಷೆ ಮೀರಿ ಸ್ಪಂದನೆ ಹಾಗೂ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಹೊಸದಾಗಿ 5,675 ಹೊಸ ಬಸ್‌ ಖರೀದಿಗೆ ಸೂಚನೆ ನೀಡುವ ಮೂಲಕ ಪ್ರಯಾಣಿಕರಿಗೆ ಇನ್ನಷ್ಟು ಸೌಕರ್ಯ ಕಲ್ಪಿಸಲು ಮುಂದಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...