ಗೃಹಜ್ಯೋತಿ ಯೋಜನೆ | ಹೊಸ ಮನೆಗೆ ಇನ್ನೂರಲ್ಲ 58 ಯೂನಿಟ್ ಫ್ರೀ: ಸಚಿವ ಜಾರ್ಜ್

Date:

  • ಇಂಧನ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಚಿವ ಜಾರ್ಜ್
  • ಗೃಹಜ್ಯೋತಿ ಯೋಜನೆಯ ನಿಯಮದಲ್ಲಿ ಹೊಸ ಮಾರ್ಪಾಡು

ಹೊಸ ಮನೆ ಹಾಗೂ ಹೊಸ ಬಾಡಿಗೆದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗೃಹಜ್ಯೋತಿ ಯೋಜನೆ ನಿಯಮಗಳಲ್ಲಿ ಕೊಂಚ ಮಾರ್ಪಾಡು ಮಾಡಲಾಗಿರುವುದಾಗಿ ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಇಂಧನ ಇಲಾಖೆ ಇಲಾಖೆ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೊಸ ಮನೆ ಮತ್ತು ಮನೆ ಬದಲಾವಣೆ ವಿಚಾರ ಸಿಎಂ ಜೊತೆ ಚರ್ಚೆಯಾಗಿದೆ.

ಯಾರು ಹೊಸದಾಗಿ ಬಾಡಿಗೆ ಮನೆಗೆ ಬರ್ತಾರೆ ಅವರಿಗೆ ಅಗತ್ಯ ದಾಖಲೆಗಳಿರುವುದಿಲ್ಲ, ಹಾಗಾಗಿ ಅವರಿಗೆ ಅವರೇಜ್ 53% +10% ಸೇರಿಸಿ 58 ಯೂನಿಟ್ ವರೆಗೂ ವಿದ್ಯುತ್ ಉಚಿತ ನೀಡಲಾಗುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ನಿಯಮ ಹೊಸದಾಗಿ ಮನೆ ನಿರ್ಮಿಸಿದವರಿಗೂ ಅನ್ವಯವಾಗಲಿದೆ. ಏಕೆಂದರೆ ಹಿಂದಿನ ಒಂದು ವರ್ಷದವರೆಗಿನ ಲೆಕ್ಕ ಇವರಿಗೆ ಸಿಗುವುದಿಲ್ಲ, ಹೀಗಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಜಾರ್ಜ್ ಹೇಳಿದರು.

ಈ ಸುದ್ದಿ ಓದಿದ್ದೀರಾ?:ಹೊರರಾಜ್ಯದ ಮಹಿಳೆಯರಿಗೂ ಸಿಗಲಿ ಶಕ್ತಿ ಯೋಜನೆ: ಶಾಮನೂರು ಶಿವಶಂಕರಪ್ಪ ಆಗ್ರಹ

ಸದ್ಯ 58 ಯೂನಿಟ್ ಪಡೆಯುವ ಹೊಸ ಮನೆ ಮತ್ತು ಹೊಸ ಬಾಡಿಗೆದಾರರು, ವರ್ಷದ ಬಳಿಕ 200 ಯೂನಿಟ್ ಪಡೆದುಕೊಳ್ಳಲಿದ್ದಾರೆ. 2022ರ ಏಪ್ರಿಲ್ ತಿಂಗಳಿಂದ 2023ರ ಮಾರ್ಚ್ ತಿಂಗಳ 12 ತಿಂಗಳ ಅವಧಿ ಬಿಲ್ ಲೆಕ್ಕಾಚಾರ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.

ಇದೇ ವೇಳೆ ಯೋಜನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಜಾರ್ಜ್, ಬಿಜೆಪಿಯವರು ನಮ್ಮ ಉಚಿತ ಕೊಡುಗೆ ವಿರುದ್ಧ ಇದ್ದಾರೆ. ಅವರಿಗೆ ಪ್ರಶ್ನೆ ಮಾಡುವ ಹಕ್ಕಿಲ್ಲ ಎಂದರು.

ದರ ಏರಿಕೆ ಕೆಇಆರ್‌ಸಿ ನಿರ್ಧಾರ

ವಿದ್ಯುತ್ ದರ ಏರಿಕೆಯಾಗಿದ್ದು ಹಿಂದಿನ ಸರ್ಕಾರದ ಅವಧಿಯಲ್ಲಿ. ಅದು ಈಗ ಜಾರಿಯಾಗಿದೆ. ಕೆಇಆರ್‌ಸಿ ಒಮ್ಮೆ ಆದೇಶ ಮಾಡಿದರೆ ಅದನ್ನು ಹಿಂಪಡೆಯಲು ಆಗುವುದಿಲ್ಲ.ಕೆಇಆರ್‌ಸಿ ಕಾಯ್ದೆ ಕೇಂದ್ರ ಸರ್ಕಾರದ ಅಧೀನದಲ್ಲಿದೆ. ವಿದ್ಯುತ್ ಏರಿಕೆ ವಿಚಾರವನ್ನು ಕೇವಲ ಅಧಿಕಾರಿಗಳು ನಿರ್ಧರಿಸುವುದಿಲ್ಲ. ಸಿಎಂ, ಇಂಧನ ಇಲಾಖೆ ಸಚಿವರು ಸಭೆ ನಡೆಸಿ ನಿರ್ಧಾರ ಕೈಗೊಳ್ತಾರೆ. ನಾವು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಕೆಇಆರ್‌ಸಿ ಮೇಲೆ ಹಾಕಲ್ಲ. ಎಂದು ಜಾರ್ಜ್‌ ಹೇಳಿದರು.

ಗೃಹಜ್ಯೋತಿ ಜಾರಿ ಹೊರೆಯನ್ನು ಗ್ರಾಹಕರ ಮೇಲೆ ಹಾಕುವುದಿಲ್ಲ. ಗೃಹಜ್ಯೋತಿ ಯೋಜನೆ ವೆಚ್ಚವನ್ನು ರಾಜ್ಯ ಸರ್ಕಾವೇ ಭರಿಸಲಿದೆ.ಉಚಿತ ಯೋಜನೆ ಪಡೆಯುವ ಮುನ್ನ ಬಾಕಿ ಬಿಲ್‌ ಪಾವತಿ ಮಾಡಬೇಕು.ಈ ಹಿಂದಿನ ಬಿಲ್ ಪಾವತಿಸಲು ಗ್ರಾಹಕರಿಗೆ 3 ತಿಂಗಳ ಕಾಲಾವಕಾಶವಿದೆ ಎಂದು ಇಂಧನ ಸಚಿವರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...