ಗೃಹ ಲಕ್ಷ್ಮಿ ಹಣ ವಿಳಂಬವಾಗಿದೆ, ಆದರೆ ಗ್ಯಾರಂಟಿ ಯೋಜನೆ ಸರ್ಕಾರ ನಿಲ್ಲಿಸಲ್ಲ: ಸತೀಶ ಜಾರಕಿಹೊಳಿ

Date:

ಗೃಹ ಲಕ್ಷ್ಮಿಯೋಜನೆಯ ಫಲಾನುಭವಿಗಳಿಗೆ ಹಣ ನೀಡುವುದು ಒಂದೆರಡು ತಿಂಗಳು ವಿಳಂಬವಾಗಿರಬಹುದು. ಮುಂಬರುವ ದಿನಗಳಲ್ಲಿ ಅದನ್ನೆಲ್ಲ ಒಟ್ಟಿಗೆ ಸೇರಿಸಿ ಹಣ ಹಾಕಲಾಗುತ್ತದೆ. ಆದರೆ, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಸರ್ಕಾರದ ಮಟ್ಟದಲ್ಲಿ ಹಣ ನೀಡುವುದು ವಿಳಂಬವಾಗಿರುವುದು ನಿಜ. ಹಾಗಂತ ವಿಳಂಬವಾದರೂ ಹಣ ಕೊಡುವುದನ್ನು ನಿಲ್ಲಿಸಿಲ್ಲ” ಎಂದರು.

“ಕೆಪಿಸಿಸಿ ಅಧ್ಯಕ್ಷರನ್ನು ನೇಮಿಸುವ ಅಧಿಕಾರ ನಮಗಿಲ್ಲ, ಅದನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ತಕ್ಷಣ ಆಗದೆ ಇರಬಹುದು, ಮುಂದೆ ಆಗಬಹುದು. ಯಾವಾಗ ಮಾಡುತ್ತಾರೆ ಎನ್ನುವುದನ್ನು ಕಾದುನೋಡಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಖ್ಯಮಂತ್ರಿ ರೇಸ್‌ನಲ್ಲಿ ಡಿ.ಕೆ. ಶಿವಕುಮಾರ್ ಮೊದಲಿನಿಂದಲೂ ಇದ್ದಾರೆ. ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ಆಕಾಂಕ್ಷಿ ಅಲ್ಲ. ಸಮಯ ಬಂದಾಗ ಮುಂದಿನ ತೀರ್ಮಾನ ಹೇಳುತ್ತೇನೆ” ಎಂದು ಹೇಳಿದರು.

“ಸಿದ್ದರಾಮಯ್ಯ ವಿಚಾರಕ್ಕಾಗಿ ಮುಡಾ ಪ್ರಕರಣದಲ್ಲಿ ರಾಜಕೀಯ ಇದೆ. 2,000 ಸೈಟ್‌ಗಳು ಹಂಚಿಕೆ ಆಗಿವೆ. ಆ ಬಗ್ಗೆ ಯಾಕೆ ಚರ್ಚೆ ಯಾಕಿಲ್ಲ? ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಸಂಸ್ಥೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಹೇಳಲು ಸಾಧ್ಯವಿಲ್ಲ. ಅದನ್ನು ಸಾಬೀತುಪಡಿಸಲು ಆಗಲ್ಲ. ಸಾಕ್ಷಾಧಾರಗಳೂ ಇಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...