ಗೃಹಲಕ್ಷ್ಮಿ | ಬಾಕಿ ಉಳಿದ ಫಲಾನುಭವಿಗಳಿಗೆ ಸಭೆ ನಡೆಸಿ ಹಣ ಬಿಡುಗಡೆ: ಲಕ್ಷ್ಮೀ ಹೆಬ್ಬಾಳ್ಕರ್

Date:

ಗೃಹಲಕ್ಷ್ಮಿ ಯೋಜನೆಗೆ ಉಂಟಾಗಿರುವ ಸಣ್ಣಪುಟ್ಟ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಸಿಗಲಿದ್ದು, ಇದಕ್ಕಾಗಿ ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಅದಾಲತ್ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, “ಈಗಾಗಲೇ 1 ಕೋಟಿ 10 ಲಕ್ಷ ಮಹಿಳೆಯರಿಗೆ ಈ ಯೋಜನೆ ತಲುಪಿದ್ದು, ಪಿಡಿಒ, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಬಾಕಿ ಉಳಿದಿರುವ ಫಲಾನುಭವಿಗಳಿಗೆ ಆಯಾ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಸಭೆ ನಡೆಸಿ ಹಣ ಹಾಕುವ ವ್ಯವಸ್ಥೆ ಮಾಡಲಾಗುವುದು” ಎಂದರು.

ಈಗಾಗಲೇ ಮೂರು ಕಂತಿನ ದುಡ್ಡು ಬಾರದೇ ಇದ್ದವರಿಗೆ ಏಕಕಾಲಕ್ಕೆ ಆರು ಸಾವಿರ ದುಡ್ಡು ಹಾಕುವ ಪ್ರಕ್ರಿಯೆ ನಡೆಯುತ್ತಿದೆ. ಗೃಹಲಕ್ಷ್ಮಿ ಯೋಜನೆಗೆ ಸುಮಾರು 50 ಸಾವಿರ ತೆರಿಗೆದಾರರು ಕೂಡ ಅರ್ಜಿ ಹಾಕಿದ್ದು, ಅರ್ಜಿಗಳನ್ನು ನಿರಾಕರಿಸಿ ಡಿಲೀಟ್ ಮಾಡಲಾಗಿದೆ” ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...