‘ದೃಢವಾಗಿ ನಿಲ್ಲಿ, ಇಲ್ಲ ರಾಜೀನಾಮೆ ಕೊಡಿ’; ಚುನಾವಣಾ ಆಯೋಗದ ‘ಪಕ್ಷಪಾತಿ’ ಧೋರಣೆ ವಿರುದ್ಧ ಅಭಿಯಾನ

Date:

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಕ್ರಮಕೈಗೊಳ್ಳಲು ಭಾರತ ಚುನಾವಣಾ ಆಯೋಗ (ಇಸಿಐ) ವಿಫಲವಾಗಿದೆ ಎಂದು ಆರೋಪಿ ದೇಶಾದ್ಯಂತ ಹಲವಾರು ಸಂಘಟನೆಗಳು ಶನಿವಾರ ಪ್ರತಿಭಟನೆ ನಡೆಸಿವೆ. ಅಲ್ಲದೆ, ‘#GrowASpineOrResign’ (ಬೆನ್ನುಮೂಳೆ ಗಟ್ಟಿ ಮಾಡಿಕೊಳ್ಳಿ ಅಥವಾ ರಾಜೀನಾಮೆ ಕೊಡಿ) ಎಂಬ ಅಭಿಯಾನ ಆರಂಭಿಸಿವೆ.

ಮೋದಿ ಸೇರಿದಂತೆ ಬಿಜೆಪಿ ನಾಯಕರು ತಮ್ಮ ಚುನಾವಣಾ ಪ್ರಚಾರಗಳಲ್ಲಿ ಎಗ್ಗಿಲ್ಲದೆ ದ್ವೇಷ ಭಾಷಣ ಮಾಡುತ್ತಿದ್ದಾರೆ. ಮೋದಿ ಅವರು ಹಸೀ ಹಸೀ ಸುಳ್ಳುಗಳ ಮೂಲಕ ಕೋಮು ದ್ವೇಷ ಪ್ರಚೋದಿಸುತ್ತಿದ್ದಾರೆ. ಆದರೂ, ಅವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಆಯೋಗ ವಿಫಲವಾಗಿದೆ ಎಂದು ಆರೋಪಿಸಲಾಗಿದೆ.

ದೆಹಲಿಯಲ್ಲಿರುವ ಚುನಾವಣಾ ಆಯೋಗದ ಹೊರಗೆ ಹಲವಾರು ಮಂದಿ ಪ್ಲೆಕಾರ್ಡ್‌ಗಳನ್ನು ಹಿಡಿದು, ಪ್ರತಿಭಟನೆ ನಡೆಸಿದ್ದಾರೆ. ಅಹಮದಾಬಾದ್, ಹೈದರಾಬಾದ್, ಮುಂಬೈ, ಬೆಂಗಳೂರು ಮತ್ತು ಮೈಸೂರುಗಳಿಂದ ಹಲವಾರು ಮುಖಂಡರು ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘನೆಯ ವಿಚಾರದಲ್ಲಿ ವಿರೋಧ ಪಕ್ಷದ ನಾಯಕರ ವಿರುದ್ಧ ಚಾಟಿ ಬೀಸುವ ಆಯೋಗ, ಆಡಳಿತರೂಢ ಬಿಜೆಪಿ ನಾಯಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಪಕ್ಷಪಾತಿ ಧೋರಣೆಯಿಂದ ವರ್ತಿಸುತ್ತಿದೆ” ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ನಿರ್ದಿಷ್ಟವಾಗಿ ಹೇಳುವುದಾದರೆ, ಇತ್ತೀಚೆಗೆ ರಾಜಸ್ಥಾನದಲ್ಲಿ ನಡೆದ ಪ್ರಚಾರ ರ‍್ಯಾಲಿಯಿಂದ ಆರಂಭಿಸಿ ಆಂಧ್ರ, ಉತ್ತರ ಪ್ರದೇಶ ಸೇರಿದಂತೆ ಎಲ್ಲಡೆ ಪ್ರಧಾನಿ ಮೋದಿ ಅವರು ಕಾಂಗ್ರೆಸ್‌ಅನ್ನು ಗುರಿಯಾಗಿಸಿಕೊಂಡು ಮುಸ್ಲಿಂ ವಿರೋಧಿ ದ್ವೇಷ ಭಾಷಣ ಮಾಡಿದ್ದರು. ಆದರೂ, ಮೋದಿ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ, ಆಯೋಗ ಮೌನವಾಗಿದೆ. ಹೀಗಾಗಿ, ಆಯೋಗದ ವಿರುದ್ಧ ತೀವ್ರ ಟೀಕೆಗಳು ವ್ಯಕ್ತವಾಗಿವೆ. ಹಲವಾರು ದೂರುಗಳು ಮತ್ತು ಸಾಕ್ಷ್ಯಗಳನ್ನು ನೀಡದ ಹೊರತಾಗಿಯೂ, ಆಯೋಗವು ಮೋದಿ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾಗಿದೆ.

ಸಾಕಷ್ಟು ಟೀಕೆಗಳ ನಂತರ, ಅಂತಿಮವಾಗಿ ಚುನಾವಣಾ ಆಯೋಗವು ಮೋದಿಗೆ ನೋಟಿಸ್‌ ನೀಡುವ ಬದಲು, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ನೋಟಿಸ್‌ ಕಳಿಸಿದೆ. ಆದರೆ, ದ್ವೇಷಪೂರಿತ ಭಾಷಣ ಮಾಡಿದ ಪ್ರಕರಣಗಳಲ್ಲಿ ಯಾರು ಭಾಷಣ ಮಾಡಿದ್ದರೂ ಆ ವ್ಯಕ್ತಿಗೆ ನೇರವಾಗಿ ನೋಟಿಸ್ ಕಳಿಸಬೇಕೆಂಬುದು ನಿಯಮ.

ಅಲ್ಲದೆ, 2ನೇ ಮತ್ತು 3ನೇ ಹಂತದ ಮತದಾನದ ಅಂಕಿಅಂಶ ಬಿಡುಗಡೆಗೂ ಆಯೋಗ ವಿಳಂಬ ಮಾಡಿಯೂ ಟೀಕೆಗೆ ಗುರಿಯಾಗಿದೆ. ಅಲ್ಲದೆ, ಬಿಡುಗಡೆಯಾಗಿರುವ ಸಂಖ್ಯೆಯೂ ನೈಜ ಅಂಶಅಂಶವಲ್ಲ ಎಂಬ ಆರೋಪಗಳು ಇವೆ.

ಈ ಹಿನ್ನೆಲೆಯಲ್ಲಿ, ಹಲವಾರು ಸಂಘಟನೆಗಳು – ನ್ಯಾಷನಲ್ ಅಲೈಯನ್ಸ್ ಫಾರ್ ಪೀಪಲ್ಸ್ ಮೂವ್‌ಮೆಂಟ್ಸ್, ಬಹುತ್ವ ಕರ್ನಾಟಕ, ಅಖಿಲ ಭಾರತ ವಕೀಲರ ಸಂಘ, ಜಾತ್ಯತೀತ ಪ್ರಜಾಪ್ರಭುತ್ವಕ್ಕಾಗಿ ಭಾರತೀಯ ಮುಸ್ಲಿಮರು ಹಾಗೂ ಭಾರತ್ ಬಚಾವೋ ಆಂದೋಲನ -‘#GrowASpineOrResign’ ಅಭಿಯಾನ ಆರಂಭಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...