- ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಇನ್ನೂ ನಿಗದಿಪಡಿಸದ ಕೊನೆಯ ದಿನಾಂಕ
- ಪ್ರತ್ಯೇಕ ವೆಬ್ ಸೈಟ್ ಲಿಂಕ್ ಬಳಿಕ ವೇಗ ಪಡೆದುಕೊಂಡ ಅರ್ಜಿ ಸಲ್ಲಿಕೆ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಪೈಕಿ ‘ಗೃಹ ಜ್ಯೋತಿ’ ನೋಂದಣಿಯ ಸರ್ವರ್ ಸಮಸ್ಯೆ ಸರಿಯಾಗಿದ್ದು, ಇನ್ನಷ್ಟು ವೇಗ ಪಡೆದುಕೊಂಡಿದೆ. ಅಲ್ಲದೇ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯನ್ನು ಭಾನುವಾರ(ಜೂ.25) ಸರ್ಕಾರ ಇನ್ನೂ ಸರಳ ಮಾಡಿದೆ.
ಶನಿವಾರ(ಜೂ.24) ಸಂಜೆ 8 ಗಂಟೆಯವರೆಗೆ ಒಟ್ಟು 45,61,662 ಗ್ರಾಹಕರು ನೋಂದಣಿ ಮಾಡಿಕೊಂಡಿರುವುದಾಗಿ ಸರ್ಕಾರ ಮಾಹಿತಿ ನೀಡಿದೆ.
ಇ-ಆಡಳಿತ ಇಲಾಖೆಯು ಹೊಸದಾಗಿ ಪ್ರತ್ಯೇಕ ನೋಂದಣಿ ಲಿಂಕ್ ಅನ್ನು ರಾಜ್ಯದ 2,000 ವಿದ್ಯುಚ್ಛಕ್ತಿ ಕಚೇರಿಗಳಿಗೆ ನೀಡಿದ ನಂತರ ನೋಂದಣಿ ಪ್ರಕ್ರಿಯೆ ವೇಗ ಪಡೆದುಕೊಂಡಿದೆ.
ಶುಕ್ರವಾರ (ಜೂ. 23) 10,93,606 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದರು. ಶನಿವಾರ (ಜೂ. 24) ಸಂಜೆ 8 ಗಂಟೆಯವರೆಗೆ 11,17,208 ಗ್ರಾಹಕರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಸರ್ಕಾರ ತಿಳಿಸಿದೆ.
ರಾಜ್ಯದಲ್ಲಿ 200 ಯೂನಿಟ್‌ವರೆಗೆ ವಿದ್ಯುತ್ ಬಳಸುವ ಗ್ರಾಹಕರ ಸಂಖ್ಯೆ 2.14 ಕೋಟಿ ಇದ್ದು, ಯೋಜನೆಗೆ ನೋಂದಣಿ ಮಾಡಲು ಸಾರ್ವಜನಿಕರು ಭಾರೀ ಉತ್ಸುಕತೆ ತೋರುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಚಿರತೆ ಸೆರೆಗೆ ಬೋನಿನಲ್ಲಿಟ್ಟಿದ್ದ ಮೇಕೆಯನ್ನೆ ಕದ್ದ ಕಳ್ಳರು
ಸೇವಾ ಸಿಂಧು ಪೋರ್ಟಲ್ ಮೂಲಕ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ನಾಡ ಕಚೇರಿ ಹಾಗೂ ಬಾಪೂಜಿ ಕೇಂದ್ರಗಳಲ್ಲಿ ಗ್ರಾಹಕರು ನೋಂದಾಯಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಕಂಪ್ಯೂಟರ್, ಲ್ಯಾಪ್ ಟಾಪ್, ಮೊಬೈಲ್ ಫೋನ್ ಹಾಗೂ ಸೈಬರ್ ಕೇಂದ್ರಗಳಲ್ಲಿ ಕೂಡ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ಕೇವಲ
ಈ ಯೋಜನೆಯ ಫಲಾನುಭವಿಗಳಾಗಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಯಾವುದೇ ಗಡುವನ್ನು ನಿಗದಿಪಡಿಸದ ಕಾರಣ ಗ್ರಾಹಕರು ಆತಂಕಪಡದೆ https://sevasindhugs.karnataka.gov.in ಪೋರ್ಟಲ್ ಮೂಲಕ ನೋಂದಾಯಿಸಬಹುದು ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.





