ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ನೀಡಿರುವುದು ರಾಜ್ಯ, ಕೇಂದ್ರವಲ್ಲ: ಪ್ರಲ್ಹಾದ್ ಜೋಶಿ

Date:

ರಾಜ್ಯದಲ್ಲಿ ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ಬಂದಿರುವ ವಿಚಾರ ಸದ್ಯ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಈ ಬಗ್ಗೆ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಆಹಾರ, ಸಾರ್ವಜನಿಕ ವಿತರಣೆ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, “ರಾಜ್ಯದ ಸಣ್ಣ ವ್ಯಾಪಾರಿಗಳಿಗೆ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಜಿಎಸ್‌ಟಿ ನೋಟಿಸ್‌ ಬಂದಿದೆಯೇ ಹೊರತು ಕೇಂದ್ರ ಸರ್ಕಾರ ನೀಡಿಲ್ಲ” ಎಂದು ಹೇಳಿದ್ದಾರೆ.

ತೆರಿಗೆ ಭರಿಸಲು ಸೂಚಿಸಿ ನೋಟಿಸ್‌ಗಳನ್ನು ನೀಡುವುದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಜೋಶಿ, “ಡಿಸಿಎಂ ನೀಡಿರುವ ಹೇಳಿಕೆ ಹಾಸ್ಯಾಸ್ಪದ. ಕರ್ನಾಟಕದ ವಾಣಿಜ್ಯ ತೆರಿಗೆ ಅಧಿಕಾರಿಗಳು ಜಿಎಸ್​ಟಿ ಬಾಕಿ ಕಟ್ಟುವಂತೆ ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ನೀಡಿದ್ದಾರೆ. ಆದರೆ ಜನರ ದಾರಿ ತಪ್ಪಿಸಲು ಇದರ ಹಿಂದೆ ರಾಜ್ಯ ಸರ್ಕಾರದ ಪಾತ್ರವಿಲ್ಲ ಎಂದು ಡಿಸಿಎಂ ಹೇಳುತ್ತಿದ್ದಾರೆ” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ? ಯುಪಿಐ ತೊರೆದು ನಗದು ವ್ಯವಹಾರ ಆರಂಭಿಸಿದ ವರ್ತಕರಿಗೆ ಎಚ್ಚರಿಕೆ ನೀಡಿದ ವಾಣಿಜ್ಯ ತೆರಿಗೆ ಇಲಾಖೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಎಸ್‌ಟಿಯಲ್ಲಿ ಎರಡು ಪ್ರಕಾರಗಳಿವೆ. ಕೇಂದ್ರ ಸರ್ಕಾರದಡಿ ಸಿಜಿಎಸ್‌ಟಿ ಮತ್ತು ರಾಜ್ಯ ಸರ್ಕಾರದಡಿ ಎಸ್‌ಜಿಎಸ್‌ಟಿ ಬರುತ್ತದೆ. ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆ ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ನೀಡಿದೆ. ಹಾಗಾಗಿ ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ” ಎಂದು ಜೋಶಿ ಹೇಳಿದರು.

“ಈ ನೋಟಿಸ್ ಅನ್ನು ಕೇಂದ್ರ ಸರ್ಕಾರವೇ ನೀಡಿದ್ದರೆ ದೇಶದ ಎಲ್ಲ ರಾಜ್ಯಗಳಲ್ಲಿ ಈ ಸಮಸ್ಯೆ ಇರುತ್ತಿತ್ತು. ಆದರೆ ಕರ್ನಾಟಕದಲ್ಲಿ ಮಾತ್ರ ಈ ಸಮಸ್ಯೆ ಇರುವುದು. ಸಿದ್ದರಾಮಯ್ಯ ಸರ್ಕಾರ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವ ಯತ್ನ ಮಾಡುತ್ತಿದೆ” ಟೀಕಿಸಿದರು.

ಇನ್ನು ಯುಪಿಐ ವ್ಯವಸ್ಥೆಯನ್ನು ಹಾಳು ಮಾಡುವ ಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದೂ ಕೇಂದ್ರ ಸಚಿವರು ಆರೋಪಿಸಿದರು. “ಯುಪಿಐ ವಹಿವಾಟು ಆಧಾರದಲ್ಲಿ ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್‌ಗಳನ್ನು ನೀಡುವ ಮೂಲಕ ರಾಜ್ಯ ಸರ್ಕಾರ ಡಿಜಿಟಲ್ ಮತ್ತು ಯುಪಿಐ ವಹಿವಾಟುಗಳಿಗೆ ಹಾನಿ ಮಾಡುವ ಯತ್ನ ಮಾಡುತ್ತಿದೆ. ದೇಶದಲ್ಲಿ ಯುಪಿಐ ವಹಿವಾಟು ಹೊಸ ದಾಖಲೆಗಳನ್ನು ಬರೆಯುತ್ತಿದೆ. ಆದರೆ ಕರ್ನಾಟಕ ಸರ್ಕಾರ ಈ ಅತ್ಯುತ್ತಮ ವ್ಯವಸ್ಥೆಯನ್ನು ಹಾಳು ಮಾಡುವ ಯತ್ನ ನಡೆಸುತ್ತಿದೆ” ಎಂದು ದೂರಿದರು.

20 ಲಕ್ಷ ರೂಪಾಯಿಗಿಂತ ಅಧಿಕ ಸೇವಾ ಪೂರೈಕೆ ಮಾಡಿದವರಿಗೆ ಮತ್ತು ಸರಕು ವ್ಯಾಪಾರಿಗಳು 40 ಲಕ್ಷ ರೂಪಾಯಿಗಿಂತ ಅಧಿಕ ವಹಿವಾಟು ಮಾಡಿದ್ದರೆ ಅವರು ಜಿಎಸ್‌ಟಿ ನೋಂದಣಿ ಮಾಡಿಸಿಕೊಳ್ಳಬೇಕು. ಆದರೆ ರಾಜ್ಯದಲ್ಲಿ ಯುಪಿಐ ವಹಿವಾಟು ಆಧಾರದಲ್ಲಿ ತೆರಿಗೆರಹಿತ ಕೃಷಿ ಉತ್ಪನ್ನಗಳಾದ ತರಕಾರಿ, ಹಾಲು, ಸೊಪ್ಪು ವ್ಯಾಪಾರಿಗಳಿಗೂ ಜಿಎಸ್‌ಟಿ ನೋಟಿಸ್ ಬಂದಿದೆ. ಇದರಿಂದಾಗಿ ವ್ಯಾಪಾರಿಗಳು ಯುಪಿಐ ಬಿಟ್ಟು ನಗದು ವಹಿವಾಟಿಗೆ ಜಾರುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...