ಪಕ್ಷದ ವಿರುದ್ಧ ಮತ್ತೆ ಸಿಡಿದ ಜಿಟಿಡಿ, ಹಳೆ ಮೈಸೂರು ಭಾಗದಲ್ಲಿ ಸಡಿಲವಾಗಲಿದೆಯೇ ಜೆಡಿಎಸ್‌ ಹಿಡಿತ?

Date:

ಮಂಡ್ಯ, ಹಾಸನ, ತುಮಕೂರು ಜಿಲ್ಲೆಗಳಲ್ಲಿ ಜೆಡಿಎಸ್‌ ಹಿಡಿತವೇ ಇಲ್ಲವಾಗಿದೆ. ಹಳೆ ಮೈಸೂರು ಭಾಗದಲ್ಲಿ ಜಿಟಿಡಿ ಕಾರಣಕ್ಕೆ ಪಕ್ಷ ಒಂದು ಹಂತಕ್ಕೆ ಹಿಡಿತ ಸಾಧಿಸಿದೆ. ಪದೇ ಪದೆ ಜಿ ಟಿ ದೇವೇಗೌಡ ಅವರು ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಳ್ಳುತ್ತಿರುವುದು ಬರುವ ದಿನಗಳಲ್ಲಿ ಹಳೆ ಮೈಸೂರು ಭಾಗದಲ್ಲಿನ ಜೆಡಿಎಸ್‌ ಹಿಡಿತ ಸಡಿಲಗೊಳ್ಳುವುದೇ ಎನ್ನುವ ಅನುಮಾನ ಹುಟ್ಟಿಸಿದೆ...

ಜೆಡಿಎಸ್‌ನ ಹಿರಿಯ ಶಾಸಕ ಜಿ ಟಿ ದೇವೇಗೌಡ ಅವರು ಮತ್ತೆ ಸ್ವಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ದು, “ಚುನಾವಣೆಗಳು ಬಂದಾಗ ಮಾತ್ರ ಪಕ್ಷಕ್ಕೆ ನನ್ನ ನೆನಪಾಗುತ್ತದೆ, ಆಗ ಮಾತ್ರ ನನ್ನ ಬಳಸಿಕೊಳ್ಳುತ್ತಾರೆ” ಎಂದು ಗುಡುಗಿದ್ದಾರೆ.

ಇತ್ತೀಚೆಗೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ, “ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ಪಕ್ಷವನ್ನು ಸಂಘಟಿಸುವುದು ಎಷ್ಟು ಕಷ್ಟ ಎಂಬುದು ತಿಳಿದಿದೆ. ನಾನು ಕೂಡ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿದ್ದೇನೆ. ದುರದೃಷ್ಟವಶಾತ್ ಚುನಾವಣೆಯ ಸಮಯದಲ್ಲಿ ಮಾತ್ರ ನನ್ನನ್ನು ಬಳಸಲಾಗುತ್ತಿದೆ” ಎಂದು ನೇರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿಯೂ ಮಾತನಾಡಿರುವ ಅವರು, “ಜೆಡಿಎಸ್ ಪಕ್ಷವನ್ನು ನಿಖಿಲ್ ಕುಮಾರಸ್ವಾಮಿ ಸಂಘಟನೆ ಮಾಡುತ್ತಿದ್ದಾರೆ. ಅವರ ಪಕ್ಷ ಅವರು ಕಟ್ಟಲಿ, ಇವರ ಪಕ್ಷ ಇವರು ಕಟ್ಟಲಿ. ಪಾರ್ಲಿಮೆಂಟ್ ಚುನಾವಣೆಯಲ್ಲಿ ಒಟ್ಟಾಗಿದ್ದಂತೆ ಮುಂದಿನ ಚುನಾವಣೆಯಲ್ಲೂ ಒಂದಾಗಿರಲಿ” ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿ ಟಿ ದೇವೇಗೌಡರಿಗೆ ಮುನಿಸು ಹೊಸದಲ್ಲ. ಈ ಹಿಂದೆಯೂ ಪಕ್ಷದ ಬಗ್ಗೆ ಸಾಕಷ್ಟು ಸಲ ಮಾತನಾಡಿ ಬೇಸರ ವ್ಯಕ್ತಪಡಿಸಿದ್ದಿದೆ. ಆದರೀಗ ರಾಜ್ಯದಲ್ಲಿ ಜೆಡಿಎಸ್‌ ಪಕ್ಷ ಸಂಘಟನೆ ನಿಟ್ಟಿನಲ್ಲಿ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ 58 ದಿನಗಳ ರಾಜ್ಯ ಪ್ರವಾಸ ಹಮ್ಮಿಕೊಂಡಿದ್ದಾರೆ. 90 ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ, ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ. ಈ ಪ್ರವಾಸದ ನಂತರ ನಿಖಿಲ್‌ಗೆ ರಾಜ್ಯಾಧ್ಯಕ್ಷ ಪಟ್ಟಾಭಿಷೇಕ ನೆರವೇರಿಸುವ ಸಾಧ್ಯತೆಯಿದೆ. ಇಂತಹ ಸಂದರ್ಭದಲ್ಲಿ ಆಡಿರುವ ಮಾತು ಜಿ ಟಿ ದೇವೇಗೌಡರೊಳಗೆ ಹೆಪ್ಪುಗಟ್ಟಿರುವ ಅಸಮಾಧಾನವನ್ನು ಹೆಚ್ಚು ಧ್ವನಿಸುತ್ತಿದೆ.

ಜಿ ಟಿ ದೇವೇಗೌಡರ ಅಸಮಾಧಾನವನ್ನು ಪುತ್ರ ಜಿ ಡಿ ದೇವೇಗೌಡ ಸ್ವತಃ ಒಪ್ಪಿಕೊಂಡಿದ್ದಾರೆ. “ಪಕ್ಷದ ಕಾರ್ಯಚಟುವಟಿಕೆಯಿಂದ ನಮ್ಮ ತಂದೆ ದೂರ ಉಳಿದಿದ್ದಾರೆ. ಅವರಿಗೆ ಪಕ್ಷದ ಬಗ್ಗೆ ಬೇಸರ ಇರುವುದು ನಿಜ. ಅವರನ್ನು ಮನವೊಲಿಸುವ ಕಾರ್ಯವನ್ನು ಪಕ್ಷದ ವರಿಷ್ಠರು ಮಾಡುತ್ತಿದ್ದಾರೆ” ಎಂದಿದ್ದಾರೆ.

ಜುಲೈನಲ್ಲಿ ಸಹ ಹೀಗೆ ಮಾತನಾಡಿದ್ದ ಜಿ ಟಿ ದೇವೇಗೌಡ, “ನನ್ನನ್ನು ಚನ್ನಪಟ್ಟಣ ಉಪ ಚುನಾವಣೆ ವೇಳೆ ಕರೆದಿದ್ದರಾ? ಇವತ್ತು ಎಲ್ಲರೂ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಜೆಡಿಎಸ್ ಬಿಟ್ಟು ಹೋದಾಗ ಉಳಿದುಕೊಂಡವರು ಯಾರು? ನನ್ನ ಬಗ್ಗೆ ಮಾತನಾಡುವ ಯೋಗ್ಯತೆ ನಿಮಗಿದೆಯಾ? ಯಾವುದೋ ಕಾರಣಕ್ಕೆ ಪಕ್ಷಕ್ಕೆ ಬಂದು, ಸಣ್ಣ ಅಧಿಕಾರ ಹಿಡಿದುಕೊಂಡಿರುವ ನಿಮಗೆ ಈ ಜಿ.ಟಿ. ದೇವೇಗೌಡನನ್ನು ಎದುರಿಸುವ ಶಕ್ತಿ ಇದೆಯೇ?” ಎಂದು ಯಾರ ಹೆಸರನ್ನೂ ಪ್ರಸ್ತಾಪಿಸದೆ ಹೇಳಿಕೆ ನೀಡಿದ್ದರು.

“ನಿಖಿಲ್ ಕುಮಾರಸ್ವಾಮಿ ಸಿನಿಮಾ ನಟರೂ ಹೌದು. ಜನಪ್ರಿಯತೆ ಇದೆ. ಯುವಕ. ಮೂರು ಬಾರಿ ಚುನಾವಣೆ ಸೋತ ಅನುಭವವಿದೆ. ದೇವೇಗೌಡರು ಕಟ್ಟಿರುವ ಪಕ್ಷ ಉಳಿಸಲೇಬೇಕಲ್ಲವೇ? ಪಕ್ಷ ಕಟ್ಟುತ್ತಿದ್ದಾರೆ ಕಟ್ಟಲಿ. ಸದ್ಯಕ್ಕೆ ನಾನು ತಟಸ್ಥವಾಗಿದ್ದೇನೆ” ಎಂದು ಲೇವಡಿಯ ಧ್ವನಿಯಲ್ಲಿ ಮಾತನಾಡಿದ್ದರು.

ಇಲ್ಲಿಗೆ ಜಿ.ಟಿ. ದೇವೇಗೌಡ ಸದ್ಯಕ್ಕೆ ಪಕ್ಷದ ಎಲ್ಲ ಚಟುವಟಿಕೆಯಿಂದ ದೂರ ಉಳಿದಿರುವುದು ಸ್ಪಷ್ಟವಾಗುತ್ತದೆ. ಅವರ ಮಾತುಗಳ ಹಿಂದಿನ ಅಸಮಾಧಾನಕ್ಕೆ ಕಾರಣ ಹುಡುಕಿದರೆ ಅಲ್ಲಿ ನೇರವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಬಿಂಬವೇ ಪ್ರತಿಫಲಿಸುತ್ತದೆ. ಕುಮಾರಸ್ವಾಮಿ ವಿರುದ್ಧ ಜಿ ಟಿ ದೇವೇಗೌಡ ಅವರ ಮುನಿಸು ಇಂದಿನದಲ್ಲ. ಈ ಹಿಂದೆಯೂ ಅವರು ಬಂಡಾಯ ಎದ್ದು ಪಕ್ಷಾಂತರದ ಮುನ್ಸೂಚನೆ ನೀಡಿದ್ದರು. ಅದಕ್ಕೆ ಹಲವು ಕಾರಣಗಳು ಇವೆ. ಮೈಸೂರು ರಾಜಕಾರಣದಲ್ಲಿ ಪ್ರಭಾವ ಹಾಗೂ ಹಿಡಿತ ಹೊಂದಿದ್ದ ಜಿ ಟಿ ದೇವೇಗೌಡರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ ಎಂಬುದು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ಅಧ್ಯಕ್ಷರ ನೇಮಕದಲ್ಲಿ ಬಗೆಹರಿಯುವುದೇ ಮೋದಿ-ಆರ್‌ಎಸ್‌ಎಸ್‌ ಕಗ್ಗಂಟು?

ಎಚ್‌ ಡಿ ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಆಗಿದ್ದ ವೇಳೆ ಜಿ ಟಿ ದೇವೇಗೌಡ ಅವರು ಸಹಕಾರಿ ಖಾತೆಯ ನಿರೀಕ್ಷೆಯಲ್ಲಿದ್ದರು. ಆದರೆ ಅವರಿಗೆ ಉನ್ನತ ಶಿಕ್ಷಣ ಖಾತೆಯನ್ನು ನೀಡಲಾಗಿತ್ತು. ಇದಕ್ಕೆ ಅವರು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಹಾಗೆಯೇ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದಾಗಲೂ ಅದೂ ಈಡೇರಲಿಲ್ಲ. ಇದರಿಂದ ಬೇಸತ್ತು ದೇವೇಗೌಡ ಕುಟುಂಬದ ಜೊತೆಗೆ ಅಂತರ ಕಾಯ್ದುಕೊಂಡಿದ್ದರು.

2023ರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿತ್ತು. ಆದರೆ ಜೆಡಿಎಸ್‌ ವರಿಷ್ಠ ಹೆಚ್‌ ಡಿ ದೇವೇಗೌಡರು ಅಖಾಡಕ್ಕಿಳಿದು, ಸ್ವತಃ ಜಿಟಿಡಿ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದರು. ಅಲ್ಲಿಗೆ ಜಿಟಿಡಿ ಬಂಡಾಯ ಶಮನಗೊಂಡಿತ್ತು. ಕಳೆದ ವಿಧಾನಸಭೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಾನು ಗೆದ್ದರೆ, ಅವರ ಪುತ್ರ ಹರೀಶ್‌ ಗೌಡ ಹುಣಸೂರು ಕ್ಷೇತ್ರದಲ್ಲಿ ಗೆಲುವು ಸಾಧಿಸಿದರು.

ಈ ನಡುವೆ ವಿರೋಧ ಪಕ್ಷದಲ್ಲಿರುವ ಜಿಟಿಡಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನದ ನಿರೀಕ್ಷೆಯಲ್ಲಿದ್ದರು. ಆದರೆ ಅದು ಅವರ ಕೈಸೇರಿಲ್ಲ. ಬದಲಾಗಿ ಸುರೇಶ್ ಬಾಬು ಪಾಲಾಯಿತು. ಇದು ಜಿಟಿಡಿ ಅಸಮಾಧಾನವನ್ನು ಮತ್ತಷ್ಟು ಹೆಚ್ಚಿಸಿದ ಬೆಳವಣಿಗೆ. ಹೀಗೆ ಪಕ್ಷದಲ್ಲೂ ಸೂಕ್ತ ಸ್ಥಾನಮಾನ ನೀಡಲಾಗಿಲ್ಲ ಎಂಬ ಅಸಮಾಧಾನ ಸದಾ ಅವರಿಗಿದೆ. ಅಲ್ಲದೆ ಕುಮಾರಸ್ವಾಮಿ ಅವರು ತಮಗಿಂತ ಸಾ ರಾ ಮಹೇಶ್‌ಗೆ ಹೆಚ್ಚಿನ ಮಣೆ ಹಾಕುತ್ತಾರೆ ಎಂಬ ಬೇಸರವೂ ಜಿಟಿಡಿಗೆ ಇದೆ. ಈಗ ಕುಮಾರಸ್ವಾಮಿ ಪುತ್ರ ನಿಖಿಲ್‌ ಸಹ ಜಿ ಟಿ ದೇವೇಗೌಡರನ್ನು ಕಡೆಗಣಿಸಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ಇದು ಮತ್ತಷ್ಟು ಜಿಟಿಡಿ ಕಣ್ಣು ಕೆಂಪಾಗುವಂತೆ ಮಾಡಿದೆ.

2024ರ ನಾಡಹಬ್ಬ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ‌ ವಹಿಸಿ ಮಾತನಾಡುವಾಗಲೂ ಜಿ ಟಿ ದೇವೇಗೌಡ ನೇರವಾಗಿ ಕುಮಾರಸ್ವಾಮಿಯನ್ನು ಕೆಣಕಿದ್ದರು. ”ಮುಡಾ ಪ್ರಕರಣದಲ್ಲಿ ಯಾರೆಲ್ಲರ‌ ವಿರುದ್ಧ ಎಫ್‌ಐಆರ್ ದಾಖಲಾಗಿದೆಯೋ‌ ಅವರೆಲ್ಲರೂ ರಾಜೀನಾಮೆ‌ ಕೊಡಲಿ. ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಕೂಡ ರಾಜೀನಾಮೆ ಕೊಡಲಿ. ರಾಜೀನಾಮೆ ಕೇಳುವ ಎಲ್ಲರಿಗೂ ದೇವಿ ಚಾಮುಂಡೇಶ್ವರಿ ಒಳ್ಳೆ ಬುದ್ಧಿ ಕೊಡಲಿ” ಎಂದು ಗಟ್ಟಿ ಧ್ವನಿಯಲ್ಲಿ ಮಾತನಾಡಿ ಸಭಿಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು.

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಕುಮಾರಸ್ವಾಮಿ ಕೇಳಿದ್ದರು. ಆದರೆ, ಜಿ ಟಿ ದೇವೇಗೌಡ ಬಹಿರಂಗವಾಗಿ ಸಿದ್ದರಾಮಯ್ಯ ಪರ ನಿಂತರು. ಸೈಲೆಂಟಾಗಿದ್ದ ಜಿಟಿಡಿ ದಿಢೀರ್‌ ಆಗಿ ಹೆಚ್‌ ಡಿ ಕುಮಾರಸ್ವಾಮಿ ವಿರುದ್ಧ ಮಾತನಾಡಿದರು. ಸ್ವಪಕ್ಷದ ನಾಯಕರ ವಿರುದ್ಧವೇ ಕಿಡಿಕಾರಿದ ತಮ್ಮ ಎದುರಾಳಿ ಜಿ ಟಿ ದೇವೇಗೌಡರನ್ನು ಸಿದ್ದರಾಮಯ್ಯ ಆಗ ಗುಣಗಾನ ಮಾಡಿದ್ದು, ಜೆಡಿಎಸ್‌-ಬಿಜೆಪಿ ಮೈತ್ರಿಗೂ ಕಿಡಿ ಹೊತ್ತಿಸಿತ್ತು.

ಈ ಬೆಳವಣಿಗೆ ಏರುಗತಿಯಲ್ಲಿದ್ದಾಗ ಕುಮಾರಸ್ವಾಮಿ ಅವರನ್ನು ಸುದ್ದಿಗಾರರು ಪ್ರಶ್ನಿಸಿದಾಗ, “ಜನತಾದಳಕ್ಕೂ, ಜಿ ಟಿ ದೇವೇಗೌಡರಿಗೂ ಗಂಡ-ಹೆಂಡತಿಯ ಸಂಬಂಧ ಇದ್ದ ರೀತಿ ಇದೆ.‌ ಜಗಳ ಮುನಿಸು ನಡೆಯುತ್ತವೆ. ಹಾಗಂತ ಸಂಬಂಧವೇನೂ ಮುರಿಯುವುದಿಲ್ಲ. ಆಯಾಯ ಸಂದರ್ಭಕ್ಕೆ ತಕ್ಕಂತೆ ಜಿ ಟಿ ದೇವೆಗೌಡರು ಅನ್ನಿಸಿದ್ದನ್ನು ಹೇಳುತ್ತಾರೆ.‌ ಅಷ್ಟಕ್ಕೆ ನಮ್ಮ ಅವರ ಸಂಬಂಧ ಮುಗಿಯಿತು ಎಂದು ಅರ್ಥವಲ್ಲ” ಎಂದು ಸ್ಪಷ್ಟನೆ ನೀಡಿದ್ದರು. ಆದರೆ, ಈವರೆಗೂ ಜಿ ಟಿ ದೇವೇಗೌಡರ ಜೊತೆ ಕುಮಾರಸ್ವಾಮಿ ಮುಖಕೊಟ್ಟು ಮಾತನಾಡಿಲ್ಲ ಎಂಬುದು ಗಮನಾರ್ಹ ಸಂಗತಿ.

ಜಿ ಟಿ ದೇವೇಗೌಡ ಮೈಸೂರು ಜಿಲ್ಲೆಯಲ್ಲಿ ಪ್ರಭಾವ ಹೊಂದಿರುವ ರಾಜಕಾರಣಿ. ಮೈಸೂರು ಜಿಲ್ಲೆಯ ರಾಜಕಾರಣದಲ್ಲೂ ಅವರಿಗೆ ಹಿಡಿತ ಇದೆ. ಹೀಗಾಗಿ ಅವರನ್ನು ಕಡೆಗಣಿಸಲು ಸಾಧ್ಯವಿಲ್ಲ. ಎರಡು ಕ್ಷೇತ್ರಗಳನ್ನು ಹೊಂದಿರುವ ಅವರ ಕುಟುಂಬವನ್ನು ಕಡೆಗಣಿಸಿದರೆ ಜಿಲ್ಲೆಯಲ್ಲಿ ಜೆಡಿಎಸ್‌ಗೆ ಹಿನ್ನಡೆ ಉಂಟಾಗಲಿದೆ ಎನ್ನುವ ಎಚ್ಚರಿಕೆಯೂ ದೇವೇಗೌಡರ ಕುಟುಂಬಕ್ಕಿದೆ. ಅಷ್ಟು ಸಹಜವಾಗಿ ಜಿ ಟಿ ದೇವೇಗೌಡರನ್ನು ಕುಮಾರಸ್ವಾಮಿ ಪರಿಗಣಿಸಲು ಸಾಧ್ಯವೇ ಇಲ್ಲ ಎನ್ನುತ್ತಾರೆ ಸ್ಥಳೀಯ ರಾಜಕಾರಣ ಬಲ್ಲವರು.

ಈಗಾಗಲೇ ಜೆಡಿಎಸ್‌ ರಾಜ್ಯದಲ್ಲಿ ತನ್ನ ಹಿಡಿತವನ್ನು ಹಂತ ಹಂತವಾಗಿ ಕಳೆದುಕೊಂಡಿದೆ. ಮಂಡ್ಯ, ಹಾಸನ, ತುಮಕೂರು ಜಿಲ್ಲೆಗಳಲ್ಲಿ ಜೆಡಿಎಸ್‌ ಹಿಡಿತವೇ ಇಲ್ಲವಾಗಿದೆ. ಕೋಲಾರದಲ್ಲಿ ತಕ್ಕಮಟ್ಟಿಗೆ ಹಿಡಿತ ಇದ್ದರೆ, ಹಳೆ ಮೈಸೂರು ಭಾಗದಲ್ಲಿ ಜಿಟಿಡಿ ಕಾರಣಕ್ಕೆ ಪಕ್ಷ ಒಂದು ಹಂತಕ್ಕೆ ಹಿಡಿತ ಸಾಧಿಸಿದೆ. ಪದೇ ಪದೆ ಜಿ ಟಿ ದೇವೇಗೌಡ ಅವರು ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಳ್ಳುವುದು ಬರುವ ದಿನಗಳಲ್ಲಿ ಹಳೆ ಮೈಸೂರು ಭಾಗದಲ್ಲಿನ ಜೆಡಿಎಸ್‌ ಹಿಡಿತ ಸಡಿಲಗೊಳ್ಳುವುದೇ ಎನ್ನುವ ಅನುಮಾನ ಹುಟ್ಟಿಸಿದೆ.

ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಈಗಾಲೇ ಜಿ ಟಿ ದೇವೇಗೌಡ ಅಧಿಕೃತವಾಗಿ ಹೇಳಿದ್ದಾರೆ. ಆದರೆ ಜೆಡಿಎಸ್‌ನಿಂದ ನಿಲ್ಲುತ್ತಾರಾ?‌ ಅಥವಾ ಬಿಜೆಪಿಯಿಂದ ಸ್ಪರ್ಧಿಸುತ್ತಾರಾ? ಇಲ್ಲವೇ ಕಾಂಗ್ರೆಸ್‌ನಿಂದ ಕಣಕ್ಕಿಳಿಯುತ್ತಾರಾ ಎಂಬುದಕ್ಕೆ ಉತ್ತರ ಸಿಕ್ಕಿಲ್ಲ ಜೆಡಿಎಸ್‌ಗೆ ಅಕ್ಷರಶಃ ಬಿಸಿತುಪ್ಪವಾಗಿದ್ದಾರೆ ಜಿಟಿಡಿ. ಕಾಲ ಕಾಲಕ್ಕೆ ಹೆಚ್ಚಾಗುತ್ತಿರುವ ಜಿಡಿಟಿ ಅಸಮಾಧಾನ ಎಲ್ಲಿಗೆ ಹೋಗಿ ಮುಟ್ಟತ್ತದೆ ಕಾದುನೋಡಬೇಕು.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...