BJP-RSS ಸುಳ್ಳೋತ್ಪಾದಕರ ಮುಖಕ್ಕೆ ಗ್ಯಾರಂಟಿ ಯೋಜನೆ ಫಲಾನುಭವಿಗಳು ಉತ್ತರಿಸಿ: ಸಿದ್ದರಾಮಯ್ಯ ಕರೆ

Date:

ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿ ಮಹಿಳೆಯರು, ಯುವಕ-ಯುವತಿಯರು BJP-RSS ಸುಳ್ಳೋತ್ಪಾದಕರ ಮುಖಕ್ಕೆ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ತುಮಕೂರು ಜಿಲ್ಲೆಯ 30,125 ಫಲಾನುಭವಿಗಳಿಗೆ ಹಲವು ಇಲಾಖೆಗಳ ಸವಲತ್ತು ಮತ್ತು ಸಲಕರಣೆಗಳನ್ನು ವಿತರಿಸಿ, ಒಂದೇ ದಿನ 697.27 ಕೋಟಿ ರೂ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದರು.

“ಗ್ಯಾರಂಟಿ ಯೋಜನೆಗಳು ಜಾರಿಯಾಗಲ್ಲ, ಸರ್ಕಾರದಲ್ಲಿ ಹಣ ಇಲ್ಲ ಎಂದು ಸುಳ್ಳೋತ್ಪಾದಿಕರಿಗೆ ಈ ಕಾರ್ಯಕ್ರಮವೇ ಒಂದು ಉತ್ತರ. ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಈ ಯೋಜನೆಗಳ ಫಲಾನುಭವಿಗಳು ಸುಳ್ಳೋತ್ಪಾದಕರ ಮುಖಕ್ಕೆ ಸರಿಯಾಗಿ ಉತ್ತರ ನೀಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಭೀಕರ ಬರಗಾಲ ಬಂದಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ರಾಜ್ಯದ ಪಾಲಿನ ಒಂದೇ ಒಂದು ರೂಪಾಯಿ ಬರ ಪರಿಹಾರವನ್ನೂ ನೀಡಿಲ್ಲ. ಆದರೆ ರಾಜ್ಯ ಸರ್ಕಾರ 29,28,910 ರೈತರ ಖಾತೆಗೆ ಬರ ಪರಿಹಾರದ ಮೊದಲ ಕಂತನ್ನು ಜಮೆ ಮಾಡಿದೆ” ಎಂದು ದಾಖಲೆಗಳ ಸಮೇತ ವಿವರಿಸಿದರು

“ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ. ಹೊಸ ಅಭಿವೃದ್ಧಿ ಕಾರ್ಯಗಳನ್ನೂ ಕೈಗೆ ಎತ್ತಿಕೊಂಡಿದ್ದೇವೆ. ಗ್ಯಾರಂಟಿ ಯೋಜನೆಗಳಿಂದ ನಾಡಿನ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿರುವುದರಿಂದ ಕೇಂದ್ರದ ಬೆಲೆ ಏರಿಕೆಯಿಂದಾಗಿ ಸೃಷ್ಟಿಯಾಗಿದ್ದ ಸಂಕಷ್ಟವನ್ನು ನಾವು ಕಡಿಮೆ ಮಾಡಿದ್ದೇವೆ. ಆದರೂ ಬಿಜೆಪಿ ಪರಿವಾರ ಸುಳ್ಳಿನ ಉತ್ಪಾದನೆಯಲ್ಲಿ ತೊಡಗಿದ್ದಾರೆ” ಎಂದು ವ್ಯಂಗ್ಯವಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂವರು ಮಾನಗೆಟ್ಟ ನಾಯಕರು ಮತ್ತು ರಾಮ ರಾಜಕಾರಣ

“2013-18 ರ ವರೆಗೆ ನಾವು ಕೊಟ್ಟ ಎಲ್ಲಾ ಭರವಸೆಗಳನ್ನೂ ಈಡೇರಿಸಿದ್ದೇವೆ. ಈ ಬಾರಿ ಚುನಾವಣೆ ವೇಳೆಯಲ್ಲಿ ಕೊಟ್ಟಿದ್ದ ಐದು ಗ್ಯಾರಂಟಿಗಳನ್ನು 8 ತಿಂಗಳ ಒಳಗೆ ಜಾರಿಗೆ ಮಾಡಿದ್ದೇವೆ. ಉಳಿದ ಭರವಸೆಗಳನ್ನೂ ಈಡೇರಿಸುತ್ತಲೇ ಇದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ ಬಿಜೆಪಿ ಯವರೂ ಇದ್ದಾರೆ. ಆದರೂ ಬಿಜೆಪಿಯವರು ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳುಗಳ ಉತ್ಪಾದನೆಯಲ್ಲಿ ತೊಡಗಿದ್ದಾರೆ” ಎನ್ನುತ್ತಾ ಫಲಾನುಭವಿಗಳ ಲೆಕ್ಕ ನೀಡಿದರು.

“142 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. ಒಂದು ಕೋಟಿ 50 ಲಕ್ಷ ಮಹಿಳೆಯರಿಗೆ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಅನಯಕೂಲಗಳು ತಲುಪುತ್ತಿವೆ. ಒಂದು ಕೋಟಿ 18 ಲಕ್ಷ ಮಂದಿಗೆ ಗೃಹಜ್ಯೋತಿಯ ಅನುಕೂಲಗಳು ಸಿಕ್ಕುತ್ತಿವೆ. ಯುವನಿಧಿಗಾಗಿ ಲಕ್ಷಾಂತರ ಯುವಕ ಯುವತಿಯರು ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ” ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಡಿಸಿಎಂ ಶಿವಕುಮಾರ್, ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ, ಕೃಷ್ಣ ಭೈರೇಗೌಡ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಬೈರತಿ ಸುರೇಶ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ಹಾಗೂ ಜಿಲ್ಲೆಯ ಶಾಸಕರುಗಳು ಮತ್ತು ಎಲ್ಲ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...