ಗ್ಯಾರಂಟಿ ಯೋಜನೆ: ಅಮಿತ್ ಶಾ ಬಹಿರಂಗ ಚರ್ಚೆಗೆ ಬರಲಿ; ಸಿಎಂ ಸಿದ್ದರಾಮಯ್ಯ ಸವಾಲು

Date:

ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧವಿದ್ದರೆ ಬಿಜೆಪಿ ನಾಯಕರು ಅದನ್ನು ಕಂತುಗಳಲ್ಲಿ ಹೇಳುವುದನ್ನು ಬಿಟ್ಟು ಒಂದೇ ಬಾರಿ ನೇರವಾಗಿ, ಸ್ಪಷ್ಟವಾಗಿ ಹೇಳಿಬಿಡಬೇಕು. ಅದೇ ರೀತಿ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಾಗಿ ಆ ರಾಜ್ಯಗಳಲ್ಲಿ ಘೋಷಣೆ ಮಾಡಬೇಕು. ಈ ಮೂಲಕ ತಮ್ಮ ದಮ್ಮು ತಾಖತ್ ತೋರಿಸಬೇಕು. ಆಗಾಗ ಗೊಣಗಾಡಿಕೊಂಡರೆ ಏನು ಫಲ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಅಪಸ್ವರ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ, “ಇದೀಗ ಕರ್ನಾಟಕಕ್ಕೆ ಆಗಮಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಹಾ ಅವರು ‘ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಿದೆ’ ಎನ್ನುತ್ತಿದ್ದಾರೆ. ನಮ್ಮ ಸರ್ಕಾರದ ಬಗ್ಗೆ ಅವರಿಗೆ ಇರುವ ಈರ್ಷ್ಯೆಯನ್ನು ಹೊರಹಾಕಿದ್ದಾರೆ. ಇದು ಅಮಿತ್ ಶಾ ಅವರ ಖಚಿತ ಅಭಿಪ್ರಾಯವಾಗಿದ್ದರೆ, ಅವರು ನನ್ನ ಜೊತೆ ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳಲಿ, ಗ್ಯಾರಂಟಿ ಯೋಜನೆಗಳಿಂದ ನಮ್ಮ ಖಜಾನೆ ಬರಿದಾಗಿಲ್ಲ. ಬದಲಿಗೆ ತೆರಿಗೆ ಹಂಚಿಕೆ ಮತ್ತು ಅನುದಾನ ವಿತರಣೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎನ್ನುವುದನ್ನು ನಾನು ಸಾಬೀತು ಮಾಡಬಲ್ಲೆ. ಇದು ಅಮಿತ್ ಶ ಅವರಿಗೆ ನನ್ನ ಸವಾಲು ಕೂಡಾ ಹೌದು” ಎಂದಿದ್ದಾರೆ.

“ಕರ್ನಾಟಕದ ಬಗ್ಗೆ ಮಾತನಾಡುವಾಗ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವ ಬಿಜೆಪಿ ನಾಯಕರು ತಮ್ಮ ಆಳ್ವಿಕೆಯ ರಾಜ್ಯಗಳಲ್ಲಿ ಅದೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಭರವಸೆ ನೀಡುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದ ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ಗ್ಯಾರಂಟಿಯ ಯೋಜನೆಗಳನ್ನು ಮಾತ್ರ ಅಲ್ಲ, ಗ್ಯಾರಂಟಿ ಎಂಬ ಹೆಸರನ್ನೂ ಕದ್ದು ಈಗ ಅದೇ ಹೆಸರಲ್ಲಿ ಜಾಹೀರಾತು ನೀಡಿದ್ದಾರೆ. ಇದು ಆ ಪಕ್ಷದ ಬಡಜನ ವಿರೋಧಿ ನಿಲುವು ಮತ್ತು ಬೌದ್ದಿಕ ದಿವಾಳಿತನವನ್ನು ತೋರಿಸುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಹಾ ಅವರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರು ನಿಜವಾಗಿ ವಿರೋಧಿಸುವುದು ಗ್ಯಾರಂಟಿ ಯೋಜನೆಗಳನ್ನಲ್ಲ, ಅವರ ಕೆಂಗಣ್ಣು ಬಿದ್ದಿರುವುದು ಈ ಯೋಜನೆಗಳ ಫಲಾನುಭವಿಗಳಾಧ ಬಡವರ ಮೇಲೆ. ಬಡಜನರಿಗಾಗಿ ಯಾವುದೇ ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ಅವುಗಳನ್ನು ವಿರೋಧಿಸುತ್ತಲೇ ಬಂದಿರುವ ಇತಿಹಾಸ ಬಿಜೆಪಿ ಮತ್ತು ಸಂಘ ಪರಿವಾರಕ್ಕಿದೆ. ದಿವಂಗತ ಪ್ರಧಾನಿ ಇಂದಿರಾಗಾಂಧಿಯವರು ಗರೀಬಿ ಹಟಾವೋ ಎಂದು ಕರೆನೀಡಿದಾಗಲೂ ಇದೇ ಪರಿವಾರದವರು ಅದನ್ನು ವಿರೋಧಿಸಿದ್ದರು. ಭೂ ಸುಧಾರಣೆ, ಮೀಸಲಾತಿ ಸೇರಿದಂತೆ ಸಾಮಾಜಿಕ ನ್ಯಾಯದ ಯಾವುದೇ ಕಾರ್ಯಕ್ರಮಗಳಿದ್ದರೂ ಇವರ ವಿರೋಧ ಇದ್ದೇ ಇದೆ. ಇದಕ್ಕೆ ಬಡವರೇ ತಕ್ಕ ಉತ್ತರವನ್ನು ಕೊಡಬೇಕು” ಎಂದರು.

“ಮುಖ್ಯಮಂತ್ರಿ ಸ್ಥಾನದ ಮೊದಲ ಅವಧಿಯಲ್ಲಿ ನಾನು ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಬಡವರ ಕಲ್ಯಾಣದ ಕಾರ್ಯಕ್ರಮಗಳ ಬಗ್ಗೆಯೂ ಬಿಜೆಪಿ ನಾಯಕರು ಇದೇ ರೀತಿ ತಮ್ಮ ಅಸಹನೆ ಮತ್ತು ಮತ್ಸರವನ್ನು ಕಾರಿಕೊಂಡಿದ್ದರು. ಬಡವರಿಗೆ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಗೆ ಬೇಕಾದ ಅಕ್ಕಿಯನ್ನು ಕೊಡಲು ನಿರಾಕರಿಸಿದ್ದ ಕೇಂದ್ರ ಸರ್ಕಾರ ಈಗ ಭಾರತ್ ಬ್ರಾಂಡ್‌ನಲ್ಲಿ ಅದೇ ಅಕ್ಕಿಯನ್ನು ಮಾರಾಟ ಮಾಡುತ್ತಿದ್ದಾರೆ. ನಾವು ಕಿಲೋಗೆ ರೂ.33ರಂತೆ ಅಕ್ಕಿ ಕೇಳಿದಾಗ ನಿರಾಕರಿಸಿದ್ದ ಕೇಂದ್ರ ಸರ್ಕಾರ ಈಗ ಕಿಲೋಗೆ ರೂ.29ರಂತೆ ಮಾರಾಟ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಬಿಜೆಪಿಗೆ ಕರ್ನಾಟಕದ ಬಡವರು, ರೈತರು, ಮಹಿಳೆಯರು, ಕಾರ್ಮಿಕರೆಂದರೆ ಅಸಹನೆ” ಎಂದು ಆರೋಪಿಸಿದ್ದಾರೆ.

“ನಮ್ಮ ಗ್ಯಾರಂಟಿ ಯೋಜನೆಗಳ ವಿರುದ್ದ ಮಾತನಾಡುತ್ತಿರುವ ಗೃಹ ಸಚಿವ ಅಮಿತ್ ಶಹಾ ಅವರಿಗೆ ಕನ್ನಡಿಗರೆಂದರೆ ತಾತ್ಸಾರ. ಕನ್ನಡ ಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆಗೆ ಪ್ರಯತ್ನ, ನಂದಿನಿ ಮೇಲೆ ಅಮುಲ್ ಹೇರುವ ಹುನ್ನಾರ ಇವೆಲ್ಲವೂ ಅಮಿತ್ ಶಹಾ ಸಾಧನೆಗಳು. ಕೇಂದ್ರ ಸರ್ಕಾರ ಬರಪರಿಹಾರ ನೀಡಬೇಕೆಂದರೆ ಗೃಹ ಸಚಿವ ಅಮಿತ್ ಶಹಾ ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತೀರ್ಮಾನಿಸಬೇಕು. ಕನ್ನಡಿಗರ ವಿರೋಧಿಯಾಗಿರುವ ಅಮಿತ್ ಶಹಾ ಅವರು ಆ ಸಭೆಯನ್ನೇ ಕರೆಯುತ್ತಿಲ್ಲ. ಇಂತಹವರು ರಾಜ್ಯಕ್ಕೆ ಬಂದು ನಮಗೆ ಪಾಠ ಮಾಡುತ್ತಿದ್ದಾರೆ” ಎಂದು ಕಿರಿಕಾರಿದ್ದಾರೆ.

“ಬಡವರ ಕಷ್ಟ ಕಡಿಮೆ ಮಾಡುವ ಕಣ್ಣೀರು ಒರೆಸುವ ಕೆಲಸವೇ ನಿಜವಾದ ದೈವ ಭಕ್ತಿ ಎಂದು ನಾನು ತಿಳಿದುಕೊಂಡವನು. ಬಡವರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಿ ಎಷ್ಟು ಬಾರಿ ರಾಮನಾಮ ಹೇಳಿದರೂ ಅದು ವ್ಯರ್ಥ. ಬಡವರಗೆ ಅನ್ನವನ್ನೂ ನೀಡದೆ ದೇವರಿಗೆ ನೈವೇಧ್ಯ ನೀಡಿ ಏನು ಫಲ? ಬಡವರಿಗೆ ಮನೆ ಕಟ್ಟಿಕೊಡದೆ ದೇವರಿಗೆ ಗುಡಿ ಕೊಟ್ಟು ಏನು ಫಲ? ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವವರಿಗೆ ಯಾವ ರಾಮನ ದಯೆಯೂ ಇರಲಾರದು. ತಾಯಿ ಚಾಮುಂಡೇಶ್ವರಿಯ ಆಶೀರ್ವಾದವೂ ಇರಲಾರದು” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...