ಗ್ಯಾರಂಟಿ ಯೋಜನೆ | ಮೂರು ದಿನಗಳ ಸಮೀಕ್ಷೆ ಯಾವ ಪುರುಷಾರ್ಥಕ್ಕಾಗಿ: ಆರ್‌ ಅಶೋಕ್‌ ಪ್ರಶ್ನೆ

Date:

ಆತ್ಮಹತ್ಯೆಗೆ ಶರಣಾಗುತ್ತಿರುವ ರೈತರು, ನೇಕಾರರು, ಮೀನುಗಾರರ ಸಮಸ್ಯೆ ಬಗ್ಗೆ ಸಮೀಕ್ಷೆ ನಡೆಸಲಿಲ್ಲ. ಹೊಟ್ಟೆಪಾಡಿಗಾಗಿ ಗುಳೆ ಹೋಗಿರುವ ಲಕ್ಷಾಂತರ ಕೃಷಿ ಕಾರ್ಮಿಕರ ಬಗ್ಗೆ ಸಮೀಕ್ಷೆ ನಡೆಸಲಿಲ್ಲ. ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಮೀಕ್ಷೆ ನಡೆಸಲಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಗ್ಯಾರಂಟಿ ಕುರಿತು ಮೂರು ದಿನಗಳ ಸಮೀಕ್ಷೆ ಯಾವ ಪುರುಷಾರ್ಥಕ್ಕಾಗಿ? ಇದರಿಂದ ಸಾಧಿಸಲು ಹೊರಟಿರುವುದಾದರೂ ಏನು” ಎಂದು ಪ್ರಶ್ನಿಸಿದ್ದಾರೆ.

“ನೂರಾರು ಕೋಟಿ ಖರ್ಚು ಮಾಡಿ ಒಂದಲ್ಲ ಹತ್ತಾರು ಮೂಲಗಳಿಂದ ಗ್ಯಾರಂಟಿಗಳ ಬಗ್ಗೆ ಸಮೀಕ್ಷೆ ಮಾಡಿಸಲು ಸಿಎಂ ಸಿದ್ದರಾಮಯ್ಯನವರಿಗೆ ಎಲ್ಲಿಲ್ಲದ ಆಸಕ್ತಿ, ಆತುರ. ಕಳೆದ 9 ತಿಂಗಳಿಂದ ರಾಜ್ಯವನ್ನು ಅಭಿವೃದ್ಧಿ ಶೂನ್ಯ ಮಾಡಿರುವ ಕಾಂಗ್ರೆಸ್‌ ಸರ್ಕಾರ, ಲೋಕಸಭಾ ಚುನಾವಣೆಯಲ್ಲಿ ಜನರಿಗೆ ಮುಖ ತೋರಿಸಲು ಹೇಗಾದರೂ ಮಾಡಿ ಗ್ಯಾರಂಟಿ ಯೋಜನೆಗಳ ಬಗ್ಗೆ ಸರ್ಟಿಫಿಕೇಟ್ ಪಡೆಯಬೇಕೆಂದು ಹಠಕ್ಕೆ ಬಿದ್ದಿದೆ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನರ ಗಮನ ಬೇರೆಡೆಗೆ ಸೆಳೆಯಲು ‘ಸಿಎಎ’ ಮುಂದೆ ಮಾಡಿದ ‘ಮೋಶಾ’

“ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಗ್ಯಾರಂಟಿ ಯೋಜನೆಗಳು ನಿಜವಾಗಿಯೂ ಜನರಿಗೆ ತಲುಪಿದ್ದರೆ, ಅದನ್ನು ಜನ ಮೆಚ್ಚಿದ್ದರೆ ಈ ಸಮೀಕ್ಷೆ ನಡೆಸುವ ಅಗತ್ಯ ಏನಿದೆ? ಯಾವುದೇ ಯೋಜನೆ ಜನರ ಬದುಕಿನ ಮೇಲೆ ಬೀರಿರುವ ಪರಿಣಾಮ, ಯೋಜನೆಯ ಪೂರ್ವದಲ್ಲಿ, ಯೋಜನೆಯ ನಂತರದಲ್ಲಿ ಅದು ಜನರ ಬದುಕಿನಲ್ಲಿ ತಂದಿರುವ ಬದಲಾವಣೆ ಬಗ್ಗೆ ವೈಜ್ಞಾನಿಕ ಅಧ್ಯಯನ ಮಾಡಬೇಕಾದರೆ ಅದಕ್ಕೆ ಕನಿಷ್ಠ 6 ತಿಂಗಳಾದರೂ ಸಮಯ ಬೇಕು. ಎಲ್ಲಕ್ಕಿಂತ ಮಿಗಿಲಾಗಿ ಯೋಜನೆ ಜಾರಿಯಾಗಿ ಒಂದು ವರ್ಷವಾದರೂ ಕಳೆದಿರಬೇಕು. ಅದು ಬಿಟ್ಟು ಹೀಗೆ ತರಾತುರಿಯಲ್ಲಿ ಹೀಗೆ ಮೂರು ದಿನಗಳಲ್ಲಿ ಸಮೀಕ್ಷೆ ಮಾಡಲು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ.

“ಗ್ಯಾರಂಟಿ ಜಾರಿ ಬಗ್ಗೆ ಖಾಸಗಿ ಸಂಸ್ಥೆಯಿಂದ ಸಮೀಕ್ಷೆ ಮಾಡಿಸಲು ಈಗಾಗಲೇ 1 ಕೋಟಿ ರೂಪಾಯಿ ಪೋಲು ಮಾಡಿದ್ದಾಯ್ತು. ಗ್ಯಾರಂಟಿ ಅನುಷ್ಠಾನಕ್ಕೆ ಸಮಿತಿ ರಚಿಸಿ, ಸಿಕ್ಕಸಿಕ್ಕವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ 16 ಕೋಟಿ ರೂಪಾಯಿ ದುಂದು ವೆಚ್ಚ ಮಾಡಿದ್ದಾಯ್ತು. 1.2 ಲಕ್ಷ ‘ಗ್ಯಾರಂಟಿ ಸ್ವಯಂ ಸೇವಕರ’ ಹುದ್ದೆ ಸೃಷ್ಟಿಸುವ ಮೂಲಕ 12 ಕೋಟಿ ರೂಪಾಯಿ ವ್ಯರ್ಥ ಮಾಡಿದ್ದಾಯ್ತು” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...