ಗುಜರಾತ್‌ | 2 ವರ್ಷದಿಂದ 3.8 ಲಕ್ಷ ಅರ್ಹ ಶಿಕ್ಷಕರು ನಿರುದ್ಯೋಗಿಗಳಾಗಿದ್ದಾರೆ

Date:

ಗುಜರಾತ್‌ನಲ್ಲಿ 2.75 ಲಕ್ಷ ಅಭ್ಯರ್ಥಿಗಳು ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ (ಟಿಇಟಿ) ಉತ್ತೀರ್ಣರಾಗಿದ್ದಾರೆ. 1.18 ಲಕ್ಷ ಅಭ್ಯರ್ಥಿಗಳು ಶಿಕ್ಷಕರ ಆಪ್ಟಿಟ್ಯೂಡ್ ಪರೀಕ್ಷೆಯಲ್ಲಿ (ಟಿಎಟಿ) ಉತ್ತೀರ್ಣರಾಗಿದ್ದಾರೆ. ಆದರೆ, ಅವರೆಲ್ಲರೂ ನಿರುದ್ಯೋಗಿಗಳಾಗಿದ್ದಾರೆ ಎಂದು ವರದಿಯಾಗಿದೆ.

ಬೋಧನಾ ಹುದ್ದೆಗಳಿಗೆ ಅರ್ಹತೆ ಪಡೆಯಲು ಈ – ಟಿಎಟಿ ಮತ್ತು ಟಿಇಟಿ – ಪರೀಕ್ಷೆಗಳು ಅವಶ್ಯಕವಾಗಿವೆ. ಈ ಪರೀಕ್ಷೆಗಳಲ್ಲಿ ಕಳೆದ ಎರಡು ವರ್ಷಗಳಲ್ಲಿ ಉತ್ತೀರ್ಣರಾಗಿರುವ 3.94 ಲಕ್ಷ ಅಭ್ಯರ್ಥಿಗಳ ಪೈಕಿ 3.88 ಲಕ್ಷ ಮಂದಿ ಈಗಲೂ ನಿರುದ್ಯೋಗಿಗಳಾಗಿದ್ದಾರೆ ಎಂದು ಗುಜರಾತ್ ಸರ್ಕಾರ ವಿಧಾನಸಭೆಯಲ್ಲಿ ಒಪ್ಪಿಕೊಂಡಿದೆ.

ಶಾಲೆಗಳಿಗೆ ಶಿಕ್ಷಕರ ನೇಮಕಾತಿಗಾಗಿ ಟಿಇಟಿ ಮತ್ತು ಟಿಎಟಿ ಉತ್ತೀರ್ಣರಾದವರನ್ನು ನೇಮಿಸಿಕೊಳ್ಳುವಂತೆ ಆಗ್ರಹಿಸಿ ಗುಜರಾತ್‌ನಲ್ಲಿ ಆಗಾಗ್ಗೆ ಪ್ರತಿಭಟನೆಗಳು ನಡೆಯುತ್ತಿವೆ. ಈ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ಸಂಖ್ಯೆ ಮತ್ತು ನಿಜವಾಗಿ ಎಷ್ಟು ಮಂದಿ ಉದ್ಯೋಗದಲ್ಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಕಿರಿತ್ ಪಟೇಲ್ ಗುಜರಾತ್ ವಿಧಾನಸಭೆಯಲ್ಲಿ ಪ್ರಶ್ನೆಗಳನ್ನು ಎತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಪ್ರಶ್ನೆಗೆ ಉತ್ತರಿಸಿರುವ ಸರ್ಕಾರ, “2023ರ ಡಿಸೆಂಬರ್ 31ಕ್ಕೆ ಅನ್ವಯವಾಗುವಂತೆ ಟಿಎಟಿ-1ರಲ್ಲಿ 39,395 ಅಭ್ಯರ್ಥಿಗಳು ಹಾಗೂ ಟಿಎಟಿ-2ನಲ್ಲಿ 35,956 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಅಲ್ಲದೆ, ಟಿಎಟಿ ಸೆಕೆಂಡರಿಯಲ್ಲಿ 75,328 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಅಲ್ಲದೆ, ಹೆಚ್ಚುವರಿಯಾಗಿ 28,307 ಅಭ್ಯರ್ಥಿಗಳು ಟಿಎಟಿ ಸೆಕೆಂಡರಿ ಡ್ಯುಯಲ್ ಮಟ್ಟವನ್ನು ಹಾಗೂ 15,253 ಅಭ್ಯರ್ಥಿಗಳು ಟಿಎಟಿ ಹೈಯರ್ ಸೆಕೆಂಡರಿ ಡ್ಯುಯಲ್ ಮಟ್ಟವನ್ನು ಸಾಧಿಸಿದ್ದಾರೆ” ಎಂದು ಹೇಳಿದೆ.

2022ರಲ್ಲಿ ನಡೆದ ಟಿಇಟಿ-1 ಮತ್ತು 2023ರಲ್ಲಿ ನಡೆದ ಟಿಇಟಿ-2ರಲ್ಲಿ 2.75 ಲಕ್ಷ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಎಲ್ಲ ಸೇರಿ, ಒಟ್ಟು 3.94 ಲಕ್ಷ ಅರ್ಜಿದಾರರು ಶಿಕ್ಷಕರ ಅರ್ಹತಾ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಾರೆ. ಆದರೆ, 2022ರಿಂದ ಸೆಕೆಂಡರಿ ಅಥವಾ ಹೈಯರ್ ಸೆಕೆಂಡರಿ ಶಾಲೆಗಳಿಗೆ ಸರ್ಕಾರವು ಯಾವುದೇ ನೇಮಕಾತಿ ನಡೆದಿಲ್ಲ.

ಅದೇ ರೀತಿ, 2023ರಲ್ಲಿ ಸರ್ಕಾರಿ ಅಥವಾ ಅನುದಾನಿತ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳಿಗೆ ಯಾವುದೇ ಅಭ್ಯರ್ಥಿಗಳನ್ನು ನೇಮಿಸಲಾಗಿಲ್ಲ ಎಂದು ಸರ್ಕಾರ ಹೇಳಿದೆ. ಅವಶ್ಯಕತೆಗೆ ಅನುಗುಣವಾಗಿ ನೇಮಕಾತಿ ನಡೆಸಲಾಗುವುದು ಎಂದಿದೆ.

ಕಳೆದ ಎರಡು ವರ್ಷಗಳಲ್ಲಿ 3.94 ಲಕ್ಷ ಟಿಎಟಿ ಮತ್ತು ಟಿಇಟಿ ಅಭ್ಯರ್ಥಿಗಳ ಪೈಕಿ ಕೇವಲ 5,678 ಮಂದಿಗೆ ಮಾತ್ರ ನೇಮಕಾತಿಯಾಗಿದೆ ಎಂದು ಸರ್ಕಾರ ವಿಧಾನಸಭೆಯಲ್ಲಿ ಒಪ್ಪಿಕೊಂಡಿದೆ. ಅಲ್ಲದೆ, “2023ರ ಮಾರ್ಚ್‌ ಹೊತ್ತಿಗೆ 4,146 ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಹೈಯರ್ ಸೆಕೆಂಡರಿ ಶಾಲೆಗಳಲ್ಲಿ 5,940 ಶಿಕ್ಷಕರ ಹುದ್ದೆಗಳು ಖಾಲಿಯಾಗಿವೆ” ಎಂದು ಶಿಕ್ಷಣ ಸಚಿವ ಕುಬೇರ್ ದಿಂಡೋರ್ ಹೇಳಿದ್ದಾರೆ.

ಅದೇ ಅವಧಿಯ ವೇಳೆಗೆ, ವಿವಿಧ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಮಾಧ್ಯಮಿಕ ಶಾಲೆಗಳಲ್ಲಿ 3,260 ಬೋಧನಾ ಹುದ್ದೆಗಳು ಖಾಲಿಯಾಗಿವೆ ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...