ಗುಜರಾತ್ | ಎಎಪಿ ಶಾಸಕನ ಮೇಲೆ ಬೂಟು ಎಸೆದ ಕಿಡಿಗೇಡಿ

Date:

ಎಎಪಿ ಶಾಸಕರೊಬ್ಬರ ಮೇಲೆ ಕಿಡಿಗೇಡಿಯೊಬ್ಬ ಬೂಟು ಎಸೆದಿರುವ ಘಟನೆ ಗುಜರಾತ್‌ನ ಜಾಮ್‌ನಗರದಲ್ಲಿ ನಡೆದಿದೆ. ನಗರದ ಟೌನ್‌ಹಾಲ್‌ನಲ್ಲಿ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಆರೋಪಿ ಕೃತ್ಯ ಎಸಗಿದ್ದು, ಆತನನ್ನು ಸ್ಥಳದಲ್ಲಿದ್ದವರು ಥಳಿಸಿದ್ದಾರೆ.

ಗುಜರಾತ್‌ನ ವಿಶ್ವದರ್ ವಿಧಾನಸಭಾ ಕ್ಷೇತ್ರ ಎಎಪಿ ಶಾಸಕ ಗೋಪಾಲ್ ಇಟಾಲಿಯಾ ಅವರ ಮೇಲೆ ಆರೋಪಿ ಬೂಟು ಎಸೆದಿದ್ದಾನೆ. ಆತನನ್ನು ಕಾಂಗ್ರೆಸ್‌ ಕಾರ್ಯಕರ್ತ ಛತ್ರಪಾಲ್ ಸಿನ್ಹ ಎಂದು ಗುರುತಿಸಲಾಗಿದೆ.

ಜಾಮ್‌ನಗರ ನಗರ ಪಾಲಿಕೆಯ ಕಾಂಗ್ರೆಸ್‌ ಕೌನ್ಸಿಲರ್‌ ಫೆಮಿದಾಬೆನ್ ಜುನೇಜಾ, ಅಸ್ಲಾಂ ಖಿಲ್ಜಿ ಹಾಗೂ ವಕೀಲ ಜನಾಬೆನ್ ಖಾಫಿ ಅವರು ಎಎಪಿ ಶಾಸಕ ಗೋಪಾಲ್ ಸಮ್ಮುಖದಲ್ಲಿ ಎಎಪಿಗೆ ಸೇರ್ಪಡೆಯಾಗಿದ್ದಾರೆ. ಇದರಿಂದ, ಕುಪಿತಗೊಂಡ ಆರೋಪಿ, ಶಾಸಕರ ಮೇಲೆ ಬೂಟು ಎಸೆದಿದ್ದಾನೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ದ್ವೇಷ ಭಾಷಣ ನಿಷೇಧ ವಿಧೇಯಕ | ಕರ್ನಾಟಕದ ಸೌಹಾರ್ದ ಪರಂಪರೆಗೆ ರಕ್ಷಾ ಕವಚವಾಗಬಲ್ಲದೇ?

ಶಾಸಕ ಗೋಪಾಲ್ ಇಟಾಲಿಯಾ ಅವರು ಸಭೆಯಲ್ಲಿ ಮಾತನಾಡುವಾಗ, ಆರೋಪಿ ಛತ್ರಪಾಲ್ ಸಿನ್ಹ್ ವೇದಿಕೆಯ ಬಳಿ ನೆಲದಲ್ಲಿ ಕುಳಿತಿದ್ದರು. ಏಕಾಏಕಿ ಗೋಪಾಲ್ ಅವರ ಎಡೆಗೆ ಬೂಟು ಎಸೆದಿದ್ದಾರೆ. ಕ್ಷಣಾರ್ಧದಲ್ಲಿ ಗೋಪಾಲ್‌ ಅವರು ಪೆಟ್ಟು ಬೀಳುವುದರಿಂದ ತಪ್ಪಿಸಿಕೊಂಡಿದ್ದಾರೆ. ತಕ್ಷಣವೇ ವೇದಿಕೆಯ ಮೇಲಿದ್ದವರು ಆತನ್ನು ಹಿಡಿದು ಥಳಿಸಿದ್ದಾರೆ. ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನೆಯ ಹಿಂದೆ ಕಾಂಗ್ರೆಸ್ ಮತ್ತು ಬಿಜೆಪಿಯ ಕೈವಾಡವಿದೆ ಎಂದು ಎಎಪಿ ಆರೋಪಿಸಿದೆ. ಘಟನೆಯನ್ನು ಖಂಡಿಸಿರುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಮಿತ್ ಚಾವ್ಡಾ, ‘ಘಟನೆಯಲ್ಲಿ ಕಾಂಗ್ರೆಸ್ ಪಕ್ಷದ ಯಾವುದೇ ಪಾತ್ರವಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...