ಗುಜರಾತ್ | ಭಾರತದ ಅತಿ ಉದ್ದದ ಸೇತುವೆ ‘ಸುದರ್ಶನ್ ಸೇತು’ ಉದ್ಘಾಟಿಸಿದ ಪ್ರಧಾನಿ ಮೋದಿ

Date:

ಗುಜರಾತ್‌ನ ದ್ವಾರಕಾ ಜಿಲ್ಲೆಯ ಬೇಟ್ ದ್ವಾರಕಾ ದ್ವೀಪದಿಂದ ಓಖಾ ಪ್ರದೇಶಕ್ಕೆ ಸಂಪರ್ಕಿಸುವ, ಅರಬ್ಬಿ ಸಮುದ್ರದ ಮೇಲೆ ನಿರ್ಮಿಸಲಾಗಿರುವ ಕೇಬಲ್-ಸ್ಟೇಯ್ಡ್‌ ಸೇತುವೆ ‘ಸುದರ್ಶನ್ ಸೇತು’ವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಈ ಸೇತುವೆ 2.32 ಕಿ.ಮೀ ಉದ್ದವಿದ್ದು, ದೇಶದ ಅತಿ ಉದ್ದದ ಸೇತುವೆಯಾಗಿದೆ.

2.32 ಕಿಮೀ ಉದ್ದದ ಸೇತುವೆ, 900 ಮೀಟರ್ ಕೇಂದ್ರ ಡಬಲ್ ಸ್ಪ್ಯಾನ್ ಕೇಬಲ್-ಸ್ಟೇಯ್ಡ್‌ ಭಾಗ ಮತ್ತು 2.45 ಕಿಮೀ ಉದ್ದದ ಅಪ್ರೋಚ್ ರಸ್ತೆಯನ್ನು 979 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ನಾಲ್ಕು ಪಥದ 27.20 ಮೀಟರ್ ಅಗಲದ ಸೇತುವೆಯು ಪ್ರತಿ ಬದಿಯಲ್ಲಿ 2.50 ಮೀಟರ್ ಅಗಲದ ಪಾದಚಾರಿ ಮಾರ್ಗವನ್ನು ಹೊಂದಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಸಿಗ್ನೇಚರ್ ಸೇತುವೆ’ ಎಂದು ಕರೆಯಲಾಗುತ್ತಿದ್ದ ಸೇತುವೆಯನ್ನು ‘ಸುದರ್ಶನ ಸೇತು’ ಎಂದು ಮರುನಾಮಕರಣ ಮಾಡಲಾಗಿದೆ.

ಬೇಟ್ ದ್ವಾರಕಾ ಓಖಾ ಪ್ರದೇಶವು ಸಣ್ಣ ದ್ವೀಪವಾಗಿದ್ದು, ಇದು ದ್ವಾರಕಾ ಪಟ್ಟಣದಿಂದ ಸುಮಾರು 30 ಕಿ.ಮೀ ದೂರದಲ್ಲಿದೆ. ಅಲ್ಲಿ ಶ್ರೀಕೃಷ್ಣನ ಪ್ರಸಿದ್ಧ ದ್ವಾರಕಾಧೀಶ್ ದೇವಾಲಯವಿದೆ.

ಪ್ರಸ್ತುತ, ಬೇಟ್ ದ್ವಾರಕಾದಲ್ಲಿರುವ ದೇವಾಲಯಕ್ಕೆ ಭೇಟಿ ನೀಡುವ ಭಕ್ತರು ಹಗಲಿನಲ್ಲಿ ಮಾತ್ರ ದೋಣಿಯಲ್ಲಿ ಪ್ರಯಾಣಿಸಬಹುದಿತ್ತು. ಸೇತುವೆಯ ನಿರ್ಮಾಣದಿಂದಾಗಿ, ಈಗ ಎಲ್ಲ ಸಮಯದಲ್ಲೂ ಪ್ರಯಾಣಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...