ಗುಜರಾತ್ ಗಾಂಧಿನಗರ ಕ್ಷೇತ್ರ | 5 ಲಕ್ಷ ಮತಗಳ ಅಂತರದಿಂದ ಗೃಹ ಸಚಿವ ಅಮಿತ್ ಶಾ ಗೆಲುವು

Date:

ಗುಜರಾತ್‌ನ ಗಾಂಧಿನಗರ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ 5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಆದರೆ,  ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಇನ್ನು ಹಾವು-ಏಣಿ ಆಟ ಅನುಭವಿಸುತ್ತಿದ್ದಾರೆ.

ಅಮಿತಾ ಶಾ ವಿರುದ್ಧ ಕಾಂಗ್ರೆಸ್‌ ಅಭ್ಯರ್ಥಿ ಸೋನಾಲ್ ಪಟೇಲ್‌ ಸ್ಪರ್ಧೆಗಿಳಿದಿದ್ದರು. ಗುಜರಾತಿನ ಗಾಂಧಿನಗರವು ರಾಜಧಾನಿ ಮಾತ್ರವಲ್ಲದೆ, ಮಹತ್ವದ ರಾಜಕೀಯ ಕೇಂದ್ರವೂ ಆಗಿದೆ. ಕಳೆದ 30 ವರ್ಷಗಳಿಂದ ಇದು ಬಿಜೆಪಿಯ ಭದ್ರಕೋಟೆಯಾಗಿದೆ. ಪ್ರತಿಷ್ಠಿತ ನಾಯಕರ ಪ್ರಾತಿನಿಧ್ಯವನ್ನು ಕಂಡಿದೆ. ಅಟಲ್ ಬಿಹಾರಿ ವಾಜಪೇಯಿ, ಎಲ್‌ಕೆ ಅಡ್ವಾಣಿ ಮತ್ತು ಈಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಂತಹವರು ಈ ಕ್ಷೇತ್ರವನ್ನು ಸಂಸತ್‌ನಲ್ಲಿ ಪ್ರತಿನಿಧಿಸಿದ್ದಾರೆ. 

ಗುಜರಾತಿನ 26ರ ಪೈಕಿ 25 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದೆ. ಸೂರತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಿಲೇಶ್ ಕುಂಭಾನಿ ನಾಮಪತ್ರ ತಿರಸ್ಕೃತವಾದ ಹಿನ್ನೆಲೆ ಬಿಜೆಪಿಯ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗಾಂಧಿನಗರ ಲೋಕಸಭಾ ಕ್ಷೇತ್ರದ ಮೊದಲ ಸುತ್ತಿನಿಂದಲೂ ಅಮಿತ್ ಶಾ ಮುನ್ನಡೆ ಕಾಯ್ದುಕೊಂಡು ಬಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚುನಾವಣೆ ಫಲಿತಾಂಶ | ಪಂಜಾಬ್ ಮತ್ತು ಹರಿಯಾಣದಲ್ಲಿ ಬಿಜೆಪಿಗೆ ಹಿನ್ನಡೆ

ಇತ್ತ ಪೋರಬಂದರ್ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಸಹ ಭಾರೀ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ 2-3 ಕ್ಷೇತ್ರಗಳನ್ನು ಮುನ್ನಡೆಯನ್ನು ಹೊಂದಿದೆ.

ವಾರಣಾಸಿಯಲ್ಲಿ ಆರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಮುನ್ನಡೆ ಸಾಧಿಸಿದ್ದರು. ಆನಂತರ, ಮೋದಿ ಮುನ್ನಡೆ ಗಳಿಸಿದ್ದಾರೆ. ಈ ಹಿಂದೆ ಲಕ್ಷ ಮತಗಳ ಅಂತರದಿಂದ ಗೆದ್ದಿದ್ದ ಮೋದಿಗೆ ಈ ಬಾರಿ ಶಾಕ್ ಆಗಿದೆ. ಉತ್ತರ ಪ್ರದೇಶದಲ್ಲಿ ಒಟ್ಟಾರೆ ಬಿಜೆಪಿಗೆ ಹಿನ್ನಡೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...