‘ರಾಷ್ಟ್ರ ನಿರ್ಮಾಣದಲ್ಲಿ ಮತದಾನ ಮೊದಲ ಹೆಜ್ಜೆ’: ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅಧಿಕಾರ ಸ್ವೀಕಾರ

Date:

ಚುನಾವಣಾ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್‌ ಅಧಿಕಾರಿ ಜ್ಞಾನೇಶ್‌ ಕುಮಾರ್ ಅವರು ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿ ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಮತದಾನವು ರಾಷ್ಟ್ರ ನಿರ್ಮಾಣದಲ್ಲಿ ಮೊದಲ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

2024ರ ಮಾರ್ಚ್‌ 15ರಿಂದ ಜ್ಞಾನೇಶ್ ಕುಮಾರ್ ಅವರು ಚುನಾವಣಾ ಆಯೋಗದಲ್ಲಿ ಆಯುಕ್ತರಾಗಿದ್ದರು. ಕಳೆದ ನಾಲ್ಕೂವರೆ ವರ್ಷಗಳಿಂದ ಮುಖ್ಯ ಆಯುಕ್ತರಾಗಿದ್ದ ರಾಜೀವ್ ಕುಮಾರ್ ಅವರ ಅಧಿಕಾರವಧಿ ಮುಗಿದ ಬಳಿಕ, ಆ ಸ್ಥಾನಕ್ಕೆ ಜ್ಞಾನೇಶ್‌ ಕುಮಾರ್ ನೇಮಕವಾಗಿದ್ದಾರೆ. ಇನ್ನು, ನಾಲ್ಕೂವರೆ ವರ್ಷಗಳ ಕಾಲ ಚುನಾವಣಾ ಆಯೋಗವನ್ನು ಮುನ್ನಡೆಸಲಿದ್ದಾರೆ.

“ರಾಷ್ಟ್ರ ನಿರ್ಮಾಣಕ್ಕೆ ಮೊದಲ ಹೆಜ್ಜೆ ಮತದಾನ. ಆದ್ದರಿಂದ, 18 ವರ್ಷ ತುಂಬಿದ ಪ್ರತಿಯೊಬ್ಬ ಭಾರತೀಯರೂ ಮತದಾರರಾಗಬೇಕು ಮತ್ತು ಮತ ಚಲಾಯಿಸಬೇಕು. ಭಾರತದ ಸಂವಿಧಾನದಲ್ಲಿ ನೀಡಲಾದ ಚುನಾವಣಾ ಕಾನೂನುಗಳು, ನಿಯಮಗಳು ಮತ್ತು ಸೂಚನೆಗಳಿಗೆ ಅನುಗುಣವಾಗಿ ಚುನಾವಣಾ ಆಯೋಗವು ಮತದಾರರೊಂದಿಗಿದೆ. ಮುಂದೆಯೂ ಇರುತ್ತದೆ” ಎಂದು ಜ್ಞಾನೇಶ್ ಕುಮಾರ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜ್ಞಾನೇಶ್ ಕುಮಾರ್ ಅವರ ಬಡ್ತಿಯಿಂದ ತೆರವಾಗಿರುವ ಚುನಾವಣಾ ಆಯುಕ್ತರ ಹುದ್ದೆಗೆ ಹರಿಯಾಣ ಮುಖ್ಯ ಕಾರ್ಯದರ್ಶಿಯಾಗಿದ್ದ ವಿವೇಕ್ ಜೋಶಿ ಅವರನ್ನು ನೇಮಕ ಮಾಡಲಾಗಿದೆ. ಅವರೂ ಕೂಡ ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿದ್ದ ಆಯ್ಕೆ ಸಮಿತಿಯು ಜ್ಞಾನೇಶ್‌ ಕುಮಾರ್‌ ಅವರನ್ನು ಮುಖ್ಯ ಆಯುಕ್ತರ ಹುದ್ದೆಗೆ ಶಿಫಾರಸು ಮಾಡಿತ್ತು. ಶಿಫಾರಸಿನ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಖ್ಯ ಚುನಾವಣಾ ಆಯುಕ್ತರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.

ಆದಾಗ್ಯೂ, ಮುಖ್ಯ ಚುನಾವಣಾ ಆಯುಕ್ತರ ನೇಮಕ ಮತ್ತು ನೇಮಕ ಪ್ರಕ್ರಿಯೆಯ ಬಗ್ಗೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಮಿತಿಯಲ್ಲಿ ಆಡಳಿತ ಪಕ್ಷದ ಪರವಾಗಿ ಇಬ್ಬರು ಸದಸ್ಯರಿದ್ದರೆ, ಆಯ್ಕೆ ಮತ್ತು ನೇಮಕಾತಿಯೂ ಸರ್ಕಾರ ಅಥವಾ ಆಡಳಿತ ಪಕ್ಷದ ಧೋರಣೆಗೆ ತಕ್ಕಂತೆಯೇ ಇರುತ್ತದೆ. ಹಿಂದೆ ಇದ್ದಂತೆ, ಸಮಿತಿಯಲ್ಲಿ ಪ್ರಧಾನಿ, ವಿಪಕ್ಷ ನಾಯಕ ಹಾಗೂ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯೇ ಇರಬೇಕೆಂದು ವಾದಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಸಿಜೆಐ ಅವರನ್ನು ಹೊರಗಿಟ್ಟು, ಕೇಂದ್ರ ಸಚಿವರನ್ನು ಒಳಗೊಂಡು ಸಮಿತಿ ರಚಿಸುವ 2023ರ ತಿದ್ದುಪಡಿ ಕಾನೂನನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ. ಫೆಬ್ರವರಿ 19ರಂದು ವಿಚಾರಣೆ ನಡೆಯಲಿದೆ. ವಿಚಾರಣೆ ಮುಗಿಯದೆಯೇ ಚುನಾವಣಾ ಆಯುಕ್ತರನ್ನು ನೇಮಿಸಬಾರದು. ಆಯ್ಕೆ ಮಾಡುವ ಸಮತಿ ಸಭೆಯನ್ನು ಮುಂದೂಡಬೇಕೆಂದು ರಾಹುಲ್‌ ಗಾಂಧಿ ವಾದಿಸಿದ್ದರು. ಆದಾಗ್ಯೂ, ಕೇಂದ್ರ ಸರ್ಕಾರವು ರಾತ್ರೋರಾತ್ರಿ ಚುನಾವಣಾ ಮುಖ್ಯ ಆಯುಕ್ತರನ್ನು ನೇಮಿಸಿದೆ. ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ. ಇದೀಗ, ಜ್ಞಾನೇಶ್ ಕುಮಾರ್ ಅಧಿಕಾರವನ್ನೂ ಸ್ವೀಕರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...