H1B ವೀಸಾ ಶುಲ್ಕ ಏರಿಕೆ; ಟ್ರಂಪ್ ಧೋರಣೆ ಸಂಬಂಧ ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ

Date:

ಅಮೆರಿಕಗೆ ಉದ್ಯೋಗಕ್ಕಾಗಿ ತೆರಳುವವರಿಗೆ ನೀಡಲಾಗುವ ಎಚ್‌1ಬಿ ವೀಸಾ ಮೇಲಿನ ಶುಲ್ಕವನ್ನು 1 ಲಕ್ಷ ಡಾಲರ್‌ಗೆ (84 ಲಕ್ಷ ರೂ.) ಹೆಚ್ಚಿಸುವ ಕಾರ್ಯಕಾರಿ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಟ್ರಂಪ್ ಸಹಿಹಾಕಿದ್ದಾರೆ. ಅಮೆರಿಕದಲ್ಲಿ ಉದ್ಯೋಗ ಮಾಡುವ ವಿದೇಶಿ ಉದ್ಯೋಗಿಯು ಪ್ರತಿ ವರ್ಷ, ಎಚ್‌1ಬಿ ವೀಸಾಗಾಗಿ 1 ಲಕ್ಷ ಡಾಲರ್ ಶುಲ್ಕವನ್ನು ಪಾವತಿ ಮಾಡಬೇಕಿದೆ. ಇದು ಎಚ್‌1ಬಿ ವೀಸಾ ಪಡೆದು ಅಮೆರಿಕದಲ್ಲಿ ನೆಲೆಸಿರುವ ಸುಮಾರು 70% ಭಾರತೀಯರ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ.

ಎಚ್‌1ಬಿ ವೀಸಾ ಶುಲ್ಕ ಏರಿಕೆಯ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಹುಟ್ಟುಹಬ್ಬದ ಕರೆಯ ನಂತರ ನೀವು ಸ್ವೀಕರಿಸಿದ ರಿಟರ್ನ್ ಉಡುಗೊರೆಗಳಿಂದ ಭಾರತೀಯರು ನೋವು ಅನುಭವಿಸುತ್ತಿದ್ದಾರೆ. ನಿಮ್ಮ ‘ಅಬ್ಕಿ ಬಾರ್, ಟ್ರಂಪ್ ಸರ್ಕಾರ್’ದಿಂದ H-1B ವೀಸಾ ಹೊಂದಿರುವವರ 70% ಭಾರತೀಯರ ಮೇಲೆ ಪರಿಣಾಮ ಬೀರಲಿದೆ” ಎಂದು ಹೇಳಿದ್ದಾರೆ.

“ಈಗಾಗಲೇ 50% ಸುಂಕದಿಂದಾಗಿ ಕೇವಲ 10 ಪ್ರಮುಖ ಕ್ಷೇತ್ರಗಳಲ್ಲಿ ಭಾರತಕ್ಕೆ 2.17 ಲಕ್ಷ ಕೋಟಿ ರೂ. ನಷ್ಟವಾಗಿದೆ ಅಂದಾಜಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಭಾರತೀಯ ಸರಕುಗಳ ಮೇಲೆ 100% ಸುಂಕ ವಿಧಿಸಲು ಯುರೋಪಿಯನ್ ಒಕ್ಕೂಟಕ್ಕೆ ಟ್ರಂಪ್ ಕರೆಕೊಟ್ಟಿದ್ದಾರೆ.  ತಮ್ಮ ಹಸ್ತಕ್ಷೇಪದಿಂದಲೇ ಭಾರತ-ಪಾಕ್ ನಡುವೆ ಕದನ ವಿರಾಮ ಸಾಧ್ಯವಾಯಿತೆಂದು ಟ್ರಂಪ್ ಹೇಳಿಕೊಂಡಿದ್ದಾರೆ. ಇದೆಲ್ಲವನ್ನೂ ಮರೆಮಾಚಿ, ಜನರು ಮೋದಿ ಮೋದಿ ಎನ್ನುವಂತೆ ಮಾಡುವ ಪ್ರಯತ್ನಗಳು ನಡೆದಿವೆ. ಹೀಗೆ ಮಾಡುವುದೇ ವಿದೇಶಾಂಗ ನೀತಿಯಲ್ಲ” ಎಂದು ಖರ್ಗೆ ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿದೇಶಾಂಗ ನೀತಿಯು ನಮ್ಮ ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡುವುದು; ಭಾರತವನ್ನು ಮೊದಲ ಸ್ಥಾನದಲ್ಲಿರಿಸುವುದು ಹಾಗೂ ಬುದ್ಧಿವಂತಿಕೆ ಮತ್ತು ಸಮತೋಲನದೊಂದಿಗೆ ಇತರ ರಾಷ್ಟ್ರಗಳ ಜೊತೆಗಿನ ಸ್ನೇಹವನ್ನು ಮುನ್ನಡೆಸುವುದಾಗಿದೆ” ಎಂದು ಖರ್ಗೆ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...