ಹಾಸನ ಪೆನ್ ಡ್ರೈವ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ, ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಕೊಡಿ: ಕುಶಾಲಾ ಸ್ವಾಮಿ

Date:

ಹಾಸನ ಸೇರಿದಂತೆ ರಾಜ್ಯದಾದ್ಯಂತ ಓಡಾಡುತ್ತಿರುವ ಸಾವಿರಾರು ಅಶ್ಲೀಲ ವಿಡಿಯೋಗಳುಳ್ಳ ಪೆನ್ ಡ್ರೈವ್, ಸಿಡಿ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಸಿಐಡಿ ತನಿಖೆಗೆ ವಹಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಮಹಿಳಾ ಘಟಕದ ಅಧ್ಯಕ್ಷೆ ಕುಶಾಲಾ ಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

“ವಿಡಿಯೊ ಕುರಿತು ವಿಧಿವಿಜ್ಞಾನ ಪರೀಕ್ಷೆ ನಡೆಸಿ ವಂಚಕನನ್ನು ಬಂಧನ ಮಾಡಬೇಕು. ಆತ ಎಷ್ಟೇ ಪ್ರಭಾವಿಯಾದರೂ ಕಾನೂನುಬದ್ಧ ಕ್ರಮಕೈಗೊಳ್ಳಬೇಕು. ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ನೀಡಬೇಕು. ವಿಡಿಯೋಗಳನ್ನು ಹಂಚಿಕೆ ಮಾಡುತ್ತಿರುವವರಿಗೆ ಕಡಿವಾಣ ಹಾಕಬೇಕು” ಎಂದು ಹೇಳಿದ್ದಾರೆ.

“ಕೃತ್ಯ ಎಸಗಿರುವ ವ್ಯಕ್ತಿ ಯಾವನೇ ಆಗಿರಲಿ, ನಾವು ಮೊದಲು ಸಂತ್ರಸ್ತೆಯರ ರಕ್ಷಣೆಗೆ ನಿಲ್ಲಬೇಕು. ಸಾವಿರಾರು ಮಹಿಳೆಯರು ವಂಚನೆಗೆ ಒಳಗಾಗಿರುವುದಲ್ಲದೆ, ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿರುವುದರಿಂದ ಹಲವರು ಆತ್ಮಹತ್ಯೆಯ ಹಾದಿ ಹಿಡಿದಿದ್ದಾರೆ. ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ನೀಡುವ ಕೆಲಸ ಮೊದಲಾಗಬೇಕು. ಓರ್ವ ಅಭ್ಯರ್ಥಿ ಮೇಲಿನ ರಾಜಕೀಯ ದ್ವೇಷಕ್ಕೆ ಸಾವಿರಾರು ಮಹಿಳೆಯರ ಬದುಕು ನರಕವಾಗುವುದನ್ನು ಸಹಿಸಲಾಗುವುದಿಲ್ಲ. ಅಶ್ಲೀಲ ವಿಡಿಯೊಗಳನ್ನು ಹಂಚಿದರೆ, ಅದರಲ್ಲಿರುವ ಮಹಿಳೆಯರ ಪರಿಸ್ಥಿತಿ ಏನಾಗಬಹುದು ಎಂಬುದನ್ನು ಕೊಂಚವೂ ಯೋಚಿಸದಿರುವುದು ದುರಂತ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎರಡು ಸಾವಿರಕ್ಕೂ ಹೆಚ್ಚು ಖಾಸಗಿ ವಿಡಿಯೋಗಳು ಹರಿದಾಡುತ್ತಿವೆ ಎನ್ನಲಾಗುತ್ತಿದೆ. ಅಷ್ಟೂ ಮಂದಿ ಸಂತ್ರಸ್ತೆಯರ ಪರಿಸ್ಥಿತಿ ಏನಾಗಬೇಕು? ಅವರ ಕುಟುಂಬ ಸದಸ್ಯರಿಗೆ ಖಾಸಗಿ ವಿಡಿಯೊಗಳು ಲಭ್ಯವಾದರೆ ಏನೇನು ದುರಂತಗಳಾಗುತ್ತವೆ? ಮುಂದಾಗಬಹುದಾದ ದುಷ್ಪರಿಣಾಮಗಳಿಗೆ ಯಾರು ಹೊಣೆ? ವಿಡಿಯೊಗಳ ಹಂಚಿಕೆಗೆ ತಡೆಯೊಡ್ಡುವ ನಿಟ್ಟಿನಲ್ಲಿ ಏನು ಕ್ರಮ ಕೈಗೊಳ್ಳಲಾಗಿದೆ? ಹೆಣ್ಣುಮಕ್ಕಳ ಬದುಕು ಬೀದಿಗೆ ಬಿದ್ದರೂ ಬೀಳಲಿ, ನಮಗೆ ರಾಜಕೀಯ ಲಾಭವಾದರೆ ಸಾಕು ಎಂಬ ಧೋರಣೆಯನ್ನು ರಾಜ್ಯ ಸರ್ಕಾರ ಅನುಸರಿಸುತ್ತಿದೆಯೇ?” ಎಂದು ಖಾರವಾಗಿ ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಬ್ಬರದ ಜನಜಾಗೃತಿ ನಡುವೆಯೂ ಕರ್ತವ್ಯ ಮರೆತ ನಗರದ ಮಂದಿ: ಅದೇ ಹಳೆ ಕಥೆ

“ಅಧಿಕಾರದ ಪ್ರಭಾವದಿಂದ ಮಹಿಳೆಯರನ್ನು ದುರ್ಬಳಕೆ ಮಾಡಿಕೊಂಡಿರುವುದು ಎಷ್ಟು ದೊಡ್ಡ ಅಪರಾಧವೋ, ವಿಡಿಯೊಗಳನ್ನು ಹಂಚಿಕೆ ಮಾಡುತ್ತಿರುವುದೂ ಅಷ್ಟೇ ದೊಡ್ಡ ಅಪರಾಧವಾಗಿದೆ. ಇವರೆಲ್ಲರೂ ಮಹಿಳೆಯರ ಪಾಲಿನ ರಾಕ್ಷಸರಾಗಿದ್ದಾರೆ. ಮಹಿಳೆಯರು ಎಚ್ಚೆತ್ತುಕೊಳ್ಳಬೇಕು. ಯಾವುದೇ ಪ್ರಭಾವಕ್ಕೆ ಒಳಗಾಗಿ ಇಂತಹ ಸಂಕಷ್ಟದ ಪರಿಸ್ಥಿತಿಗೆ ಸಿಕ್ಕಿಹಾಕಿಕೊಳ್ಳಬಾರದು” ಎಂದು ಎಚ್ಚರಿಕೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...