ಬಿಜೆಪಿ ಹಗರಣಗಳ ತನಿಖೆ | ಸಿಬಿಐ, ಸಿಸಿಬಿಗೆ ವಹಿಸುವುದು ಕಳ್ಳನ ಕೈಗೆ ಕೀಲಿ ಕೊಟ್ಟಂತೆ: ಪ್ರಿಯಾಂಕ್ ಖರ್ಗೆ

Date:

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಗರಣಗಳನ್ನು ಸಿಬಿಐ ಅಥವಾ ಸಿಸಿಬಿ ತನಿಖೆಗೆ ವಹಿಸುವುದು, ಕಳ್ಳನ ಕೈಗೆ ಕೀಲಿ ಕೊಟ್ಟಂತೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದಿನ ಸರ್ಕಾರದಲ್ಲಿ ಪಿಎಸ್ಐ ನೇಮಕಾತಿ ಹಗರಣ, ಬಿಟ್‌ ಕಾಯಿನ್‌ ಹಗರಣ, ಗಂಗಾ ಕಲ್ಯಾಣ ಯೋಜನೆಯಲ್ಲಿ ಹಗರಣ ಹೀಗೆ ವೈವಿಧ್ಯಮಯ ಹಗರಣಗಳು ನಡೆದಿವೆ. ಈ ಎಲ್ಲ ಹಗರಣಗಳನ್ನು ಒಂದೇ ರೀತಿಯ ಸಮಿತಿಗೆ ವಹಿಸುವುದು ಸರಿಯಾಗುವುದಿಲ್ಲ” ಎಂದರು.

“ಕೆಲವು ಹಗರಣಗಳ ತನಿಖೆಗೆ ಎಸ್‌ಐಟಿ, ಸ್ಪೆಷಲ್‌ ಟಾಸ್ಕ್‌ ಫೋರ್ಸ್‌, ಎಸಿಎಸ್‌ ಮಟ್ಟದ ಅಧಿಕಾರಿಗಳ ಸಮಿತಿ ಹೀಗೆ ಬೇರೆ ಬೇರೆ ಹಗರಣಗಳಿಗೆ ಬೇರೆ ಬೇರೆ ತನಿಖಾ ತಂಡ ರಚನೆ ಮಾಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ತೀರ್ಮಾನಿಸಲಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿಂದಿನ ಬಿಜೆಪಿ ಸರ್ಕಾರ ಬಹಳ ವಿಭಿನ್ನವಾಗಿ ಸ್ಕ್ಯಾಮ್ ಮಾಡಿದೆ. ತಂತ್ರಜ್ಞಾನ ಸ್ಕ್ಯಾಮ್ ಆಗಿದೆ, ಬಿಟ್ ಕಾಯಿನ್ ಹಗರಣದಲ್ಲಿ ನಮಗೆ ಸೈಬರ್ ಎಕ್ಸ್‌ಪರ್ಟ್‌ ಬೇಕಾಗುತ್ತದೆ. ತಂತ್ರಜ್ಞಾನ ತಿಳಿದ ಅಧಿಕಾರಿಗಳ ಅವಶ್ಯಕತೆ ಇದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಭ್ರಷ್ಟಾಚಾರದ ವಿರುದ್ಧ ಆರೋಪ ಮಾಡುತ್ತಿದ್ದ ನಾವೇ ಭ್ರಷ್ಟಾಚಾರ ಮಾಡಲು ಸಾಧ್ಯವೆ: ರಾಮಲಿಂಗಾರೆಡ್ಡಿ ಪ್ರಶ್ನೆ

“ಕಳೆದ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್‌ ಕೆಲವರ ಬಗ್ಗೆ ಚರ್ಚಿಸಿದ್ದರು. ಯಾವ ತಂಡ ರಚನೆ ಮಾಡಬೇಕು ಎಂಬುದು ಈಗಾಗಲೇ ಸೂಚನೆ ನೀಡಲಾಗಿದೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...