ಕುಸ್ತಿಪಟುಗಳಿಗೆ ಕಿರುಕುಳ | ಬ್ರಿಜ್‌ ಭೂಷಣ್‌ರನ್ನು ಮೋದಿ ಯಾಕೆ ರಕ್ಷಿಸುತ್ತಿದ್ದಾರೆ?

Date:

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿ, ಬಿಜೆಪಿ ಸಂಸದ, ರೆಸ್ಲಿಂಗ್ ಫೆಡರೇಶನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಸಾಕಷ್ಟು ಪುರಾವೆಗಳಿವೆ ಎಂದು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ಬೆನ್ನಲ್ಲೇ, ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್, ‘ಪ್ರಧಾನಿ ಮೋದಿ ಅವರು ಬ್ರಿಜ್ ಭೂಷಣ್‌ ಸಿಂಗ್ ಅವರನ್ನು ಏಕೆ ರಕ್ಷಿಸುತ್ತಿದ್ದಾರೆ’ ಎಂದು ಪ್ರಶ್ನಿಸಿದೆ.

ಟ್ವೀಟರ್‌ನಲ್ಲಿ ಟ್ವೀಟ್‌ ಮಾಡಿರುವ ಕಾಂಗ್ರೆಸ್, ಬ್ರಿಜ್ ಭೂಷಣ್ ವಿರುದ್ಧ ಮಹಿಳಾ ಕುಸ್ತಿಪಟುಗಳ ಬಲವಾದ ಆರೋಪಗಳಿದ್ದರೂ ಮೋದಿ ಸರ್ಕಾರ ಅವರನ್ನು ರಕ್ಷಿಸುತ್ತಿದೆ” ಎಂದು ಆರೋಪಿಸಿದೆ.

“ಬ್ರಿಜ್ ಭೂಷಣ್ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿವೆ ಎಂದು ಪೊಲೀಸರು ಹೇಳಿದ್ದಾರೆ. ಆದರೂ, ಮಹಿಳೆಯರನ್ನು ಗೌರವಿಸುತ್ತೇವೆ ಎಂದು ಬಿಂಬಿಸಿಕೊಳ್ಳುವ ಮೋದಿ ಸರ್ಕಾರ ಲೈಂಗಿಕ ಶೋಷಣೆ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಪರವಾಗಿ ನಿಂತಿದೆ. ಇಂದಿಗೂ ಅದೇ ಪ್ರಶ್ನೆ ಕಾಡುತ್ತಿದೆ – ‘ಬ್ರಿಜ್ ಭೂಷಣ್ ಅನ್ನು ಪ್ರಧಾನಿ ಮೋದಿ ಏಕೆ ರಕ್ಷಿಸುತ್ತಿದ್ದಾರೆ?'” ಎಂದು ಕಾಂಗ್ರೆಸ್ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ಸಂಬಂಧ ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ದೆಹಲಿ ಪೊಲೀಸರ ಹೇಳಿಕೆಯನ್ನು ಆಲಿಸಿದೆ. ದೆಹಲಿ ಪೊಲೀಸರನ್ನು ಪ್ರತಿನಿಧಿಸಿದ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಶ್ರೀವಾಸ್ತವ, “ಬ್ರಿಜ್ ಭೂಷಣ್‌ ಸಿಂಗ್ ಅವರು ಅವಕಾಶ ಸಿಕ್ಕಾಗೆಲ್ಲ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಲು ಯತ್ನಿಸುತ್ತಿದ್ದರು. ಅವರ ನಡತೆಯು ಉದ್ದೇಶಪೂರ್ವಕ ಮತ್ತು ದುರುದ್ದೇಶದಿಂದ ಕೂಡಿತ್ತು” ಎಂದು ಒತ್ತಿ ಹೇಳಿದ್ದಾರೆ.

ವಿಶ್ವ ಚಾಂಪಿಯನ್‌ಶಿಪ್ ವಿಜೇತ ಭಾರತೀಯ ಕುಸ್ತಿಪಟುಗಳ ನೇತೃತ್ವದಲ್ಲಿ ಕುಸ್ತಿಪಟುಗಳು ಒಂದು ತಿಂಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ಬಳಿಕ, ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಜೂನ್ 15ರಂದು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

ಆರು ಬಾರಿ ಸಂಸದರಾಗಿರುವ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 354 (ಮಹಿಳೆಯರ ಮೇಲೆ ದೌರ್ಜನ್ಯ), 354A (ಲೈಂಗಿಕ ಕಿರುಕುಳ), 354D (ಹಿಂಬಾಲಿಸುವಿಕೆ) ಮತ್ತು 506 (ಅಪರಾಧ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...