ಹರಿಯಾಣ ಚುನಾವಣೆ | ಉಚಿತ ವಿದ್ಯುತ್, ವೈದ್ಯಕೀಯ ಚಿಕಿತ್ಸೆ ಸೇರಿ 5 ಗ್ಯಾರಂಟಿ ಘೋಷಿಸಿದ ಎಎಪಿ

Date:

ಈ ವರ್ಷದ ಅಕ್ಟೋಬರ್‌ನಲ್ಲಿ ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್ಲ ಪಕ್ಷಗಳು ಚುನಾವಣಾ ತಯಾರಿ ಅರಂಭಿಸಿವೆ. ಇದೀಗ, ಎಎಪಿ ಕೂಡ ಚುನಾವಣಾ ಅಖಾಡಕ್ಕೆ ಇಳಿದಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಹರಿಯಾಣಕ್ಕೆ ಐದು ಗ್ಯಾರಂಟಿಗಳನ್ನು ಘೋಷಿದ್ದಾರೆ. ಬಂಧನದಲ್ಲಿರುವ ಕೇಜ್ರಿವಾಲ್ ಬದಲಾಗಿ ಸುನೀತಾ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.

ಎಎಪಿ ಸಂಸದರಾದ ಸಂಜಯ್ ಸಿಂಗ್ ಮತ್ತು ಸಂದೀಪ್ ಪಾಠಕ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ ಸುನೀತಾ ಕೇಜ್ರಿವಾಲ್ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಎಎಪಿ ಅಧಿಕಾರಿಕ್ಕೆ ಬಂದರೆ, ಪಂಜಾಬ್ ಮತ್ತು ದೆಹಲಿಯಂತೆ ಹಗಲಿರುಳು ಉಚಿತ ವಿದ್ಯುತ್, ಪ್ರತಿಯೊಬ್ಬ ಯುವಕನಿಗೆ ಉದ್ಯೋಗ, ಪ್ರತಿ ಮಗುವಿಗೆ ಶಿಕ್ಷಣ, ಉಚಿತ ವೈದ್ಯಕೀಯ ಚಿಕಿತ್ಸೆ ಹಾಗೂ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿ ಮಹಿಳೆಗೆ ಮಾಸಿಕ 1,000 ರೂ. ಸಹಾಯ ಧನ ನೀಡುವುದಾಗಿ ಘೋಷಿಸಿದ್ದಾರೆ.

ಎಎಪಿಯ ರಾಜ್ಯ ಘಟಕದ ಮುಖ್ಯಸ್ಥ ಸುಶೀಲ್ ಗುಪ್ತಾ ಮಾತನಾಡಿ, “ಪಕ್ಷವು ಎಲ್ಲ 90 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಚುನಾವಣೆಯಲ್ಲಿ ಪ್ರಬಲವಾಗಿ ಹೋರಾಡಲು ಮತ್ತು ಸರ್ಕಾರ ರಚಿಸಲು ಸಜ್ಜಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜನರು ಬದಲಾವಣೆ ಬಯಸಿದ್ದಾರೆ. ಹರಿಯಾಣದಲ್ಲಿ ಸಂಪೂರ್ಣ ಬಲದೊಂದಿಗೆ ಚುನಾವಣೆ ಎದುರಿಸಲು ಎಎಪಿ ನಿರ್ಧರಿಸಿದೆ” ಎಂದು ಹೇಳಿದ್ದಾರೆ.

ಎಎಪಿ ರಾಷ್ಟ್ರೀಯ ಕಾರ್ಯದರ್ಶಿ ಸಂದೀಪ್ ಪಾಠಕ್ ಮಾತನಾಡಿ, “ನಾವು ಕುರುಕ್ಷೇತ್ರ ಲೋಕಸಭಾ ಕ್ಷೇತ್ರದಲ್ಲಿ ಪೂರ್ಣ ಶಕ್ತಿಯಿಂದ ಚುನಾವಣೆ ಎದುರಿಸಿದಂತೆ, ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಪ್ರಬಲವಾಗಿ ಹೋರಾಡುತ್ತೇವೆ” ಎಂದು ಹೇಳಿದ್ದಾರೆ.

ಹರಿಯಾಣದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಬಿಜೆಪಿ ಸರ್ಕಾರವು ತೂಗುಗತ್ತಿಯ ಮೇಲಿದೆ. ರೈತ ಹೋರಾಟದ ಸಮಯದಲ್ಲಿ ರೈತರ ಮೇಲೆ ದಾಳಿ, ದೌರ್ಜನ್ಯ ನಡೆಸಿದ ಬಿಜೆಪಿ ಸರ್ಕಾರದ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಿ, ಅಧಿಕಾರಕ್ಕೇರಬೇಕೆಂದು ಕಾಂಗ್ರೆಸ್‌ ಭಾರೀ ಕಸರತ್ತು ನಡೆಸುತ್ತಿದೆ. ಕಾಂಗ್ರೆಸ್‌ ನೇತೃತ್ವದ ‘ಇಂಡಿಯಾ’ ಒಕ್ಕೂಟದಲ್ಲಿರುವ ಎಎಪಿ ಲೋಕಸಭಾ ಚುನಾವಣೆಯಲ್ಲಿ ಹರಿಯಾಣದ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಿತ್ತು. ಅದರೆ, ವಿಧಾನಸಭಾ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುತ್ತೇವೆ ಎಂದು ಎಎಪಿ ಹೇಳುತ್ತಿದೆ. ಹೀಗಾಗಿ, ಕಾಂಗ್ರೆಸ್‌-ಎಎಪಿ ಮೈತ್ರಿ ವಿಧಾನಸಭೆಯಲ್ಲಿ ಮುಂದುವರೆಯುವುದೇ ಅಥವಾ ಮುರಿಯುವುದೇ ಎಂಬ ಪ್ರಶ್ನೆ ಮುನ್ನೆಲೆಯಲ್ಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...