ಹರಿಯಾಣ ಚುನಾವಣೆ | ಐಎನ್‌ಎಲ್‌ಡಿ ಜೊತೆ ಮಾಯಾವತಿ ಅವರ ಬಿಎಸ್‌ಪಿ ಮೈತ್ರಿ

Date:

ಹರಿಯಾಣದಲ್ಲಿ ಈ ವರ್ಷ ಅಕ್ಟೋಬರ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ ಇಂಡಿಯನ್ ನ್ಯಾಷನಲ್ ಲೋಕ ದಳ (ಐಎನ್‌ಎಲ್‌ಡಿ) ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿವೆ.

ಐಎನ್‌ಎಲ್‌ಡಿ ಪ್ರಧಾನ ಕಾರ್ಯದರ್ಶಿ ಅಭಯ್ ಚೌತಾಲಾ ಮತ್ತು ಬಿಎಸ್‌ಪಿ ರಾಷ್ಟ್ರೀಯ ಸಂಯೋಜಕ ಆಕಾಶ್ ಆನಂದ್ ಅವರು ಗುರುವಾರ ಸಭೆ ನಡೆಸಿದ್ದು, ಮೈತ್ರಿ ಮಾಡಿಕೊಂಡಿದ್ದಾರೆ. ಬಳಿಕ ಮಾತನಾಡಿದ ಇಬ್ಬರೂ, “ಇತರ ಸಮಾನ ಮನಸ್ಕ ಸಾಮಾಜಿಕ ಮತ್ತು ರಾಜಕೀಯ ಸಂಘಟನೆಗಳೊಂದಿಗೆ ಕೈಜೋಡಿಸುವ ಆಯ್ಕೆಗಳನ್ನು ಮೈತ್ರಿಕೂಟ ಎದುರು ನೋಡುತ್ತಿದೆ” ಎಂದು ಹೇಳಿದ್ದಾರೆ.

ಮಾಜಿ ಉಪಪ್ರಧಾನಿ ಮತ್ತು ರಾಜ್ಯದ ಹೆಚ್ಚಿನ ಪ್ರಾಬಲ್ಯವಿರುವ ಜಾಟ್ ಸಮುದಾಯದ ನಾಯಕ ಚೌಧರಿ ದೇವಿ ಲಾಲ್ ಅವರ ಮೊಮ್ಮಗ ಅಭಯ್ ಚೌತಾಲಾ ಅವರನ್ನು ಮೈತ್ರಿಕೂಟದ ಮುಖ್ಯಮಂತ್ರಿ ಮುಖವೆಂದು ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ ಒಟ್ಟು 127 ಸ್ಥಾನಗಳ ಪೈಕಿ ಐಎನ್‌ಎಲ್‌ಡಿ 53ರಲ್ಲಿ ಸ್ಪರ್ಧಿಸಲಿದೆ. ಬಿಎಸ್‌ಪಿ ಉಳಿದ 37 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

ರಾಜ್ಯದಲ್ಲಿ ಗುತ್ತಿಗೆ ಆಧಾರದ ಮೇಲೆ ಉದ್ಯೋಗ ನೇಮಕಾತಿಯನ್ನು ತೊಡೆದುಹಾಕುವುದಾಗಿ ಎರಡೂ ಪಕ್ಷಗಳು ಭರವಸೆ ನೀಡಿವೆ. ಶಾಶ್ವತ ಕೆಲಸ, ಪ್ರತಿ ಮನೆಯ ವಿದ್ಯುತ್ ಬಿಲ್ಅನ್ನು 500 ರೂ.ಗೆ ಇಳಿಸಲು ಸೋಲಾರ್ ಪ್ಲಾಂಟ್‌ಗಳ ಸ್ಥಾಪನೆ, ಉಚಿತ ನೀರು, ತಿಂಗಳಿಗೆ 7,500 ರೂ. ವೃದ್ಧಾಪ್ಯ ವೇತನ, ಪ್ರತಿ ಮನೆಯಲ್ಲಿ ಒಬ್ಬರಿಗೆ 21,000 ರೂ. ನಿರುದ್ಯೋಗ ಭತ್ಯೆ ನೀಡುವುದಾಗಿ ಘೋಷಿಸಿವೆ.

ಪರಿಶಿಷ್ಟ ಜಾತಿಯ ಪ್ರತಿ ಕುಟುಂಬಕ್ಕೆ 300 ಚದುರ ಅಡಿ ನಿವೇಶನ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ, 10ನೇ ತರಗತಿಯವರೆಗೆ ಉಚಿತ ಶಿಕ್ಷಣ ಇತ್ಯಾದಿ ಭರವಸೆಗಳನ್ನು ನೀಡಿವೆ.

ಐಎನ್‌ಎಲ್‌ಡಿಅಲ್ಲಿ ಉಂಟಾದ ಆಂತರಿಕ ಕಲಹದಿಂದಾಗಿ, ಐದು ಬಾರಿ ಮುಖ್ಯಮಂತ್ರಿ ಓಪಿ ಚೌತಾಲಾ ಅವರ ಮೊಮ್ಮಗ ದುಶ್ಯಂತ್ ಅವರು 2018ರಲ್ಲಿ ಪಕ್ಷವನ್ನು ಒಡೆದರು. ಹೊಸದಾಗಿ, ಜನನಾಯಕ್ ಜನತಾ ಪಕ್ಷವನ್ನು (ಜೆಜೆಪಿ) ರಚಿಸಿದರು. 2019ರಲ್ಲಿ ರಾಜ್ಯದಲ್ಲಿ ಸರ್ಕಾರ ರಚಿಸಲು ಬಿಜೆಪಿಗೆ ಜೆಜೆಪಿ ಬೆಂಬಲ ನೀಡಿತ್ತು. ಆದರೆ, ಈ ವರ್ಷದ ಮಾರ್ಚ್‌ನಲ್ಲಿ ಅದು ತನ್ನ ಬೆಂಬಲವನ್ನು ಹಿಂತೆಗೆದುಕೊಂಡಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...