ನಯಾಬ್ ಸಿಂಗ್ ವಿರುದ್ದ ಹೇಳಿಕೆ; ಹರಿಯಾಣ ಸಚಿವ ಅನಿಲ್ ವಿಜ್‌ಗೆ ಶೋಕಾಸ್ ನೋಟಿಸ್

Date:

ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮತ್ತು ಬಿಜೆಪಿ ಮುಖ್ಯಸ್ಥ ಮೋಹನ್ ಲಾಲ್ ಬಡೋಲಿ ಬಗ್ಗೆ ಹೇಳಿಕೆಯನ್ನು ನೀಡಿದ ಹರಿಯಾಣ ಸಚಿವ ಅನಿಲ್ ವಿಜ್‌ಗೆ ಬಿಜೆಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

“ಇತ್ತೀಚೆಗೆ ನೀವು ಪಕ್ಷದ ಅಧ್ಯಕ್ಷರ ವಿರುದ್ಧ ಮತ್ತು ಮುಖ್ಯಮಂತ್ರಿ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದೀರಿ. ಇದು ಗಂಭೀರವಾದ ಆರೋಪವಾಗಿದೆ ಮತ್ತು ಪಕ್ಷ ನಿಯಮ, ಆಂತರಿಕ ಶಿಸ್ತಿನ ಉಲ್ಲಂಘನೆಯಾಗಿದೆ” ಹಿಂದಿಯಲ್ಲಿ ನೀಡಿದ ಶೋಕಾಸ್ ನೋಟಿಸ್‌ನಲ್ಲಿ ಮೋಹನ್ ಲಾಲ್ ಬಡೋಲಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಹರಿಯಾಣ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯಂತೆ ಈ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಬಡೋಲಿ ತಿಳಿಸಿದ್ದಾರೆ. “ಮೂರು ದಿನದ ಒಳಗಾಗಿ ಈ ವಿಚಾರದಲ್ಲಿ ಲಿಖಿತ ಸ್ಪಷ್ಟನೆಯನ್ನು ನೀಡಬೇಕು” ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ಹೇಳಿಕೆಯು ಪಕ್ಷದ ಸಿದ್ಧಾಂತಕ್ಕೆ ವಿರುದ್ಧವಾಗಿದೆ. ಹಾಗೆಯೇ ನೆರೆಯ ರಾಜ್ಯದಲ್ಲಿ (ದೆಹಲಿ) ಚುನಾವಣಾ ಪ್ರಚಾರ ಮಾಡುತ್ತಿರುವ ಸಂದರ್ಭದಲ್ಲಿ ಇಂತಹ ಹೇಳಿಕೆಗಳು ಸರಿಯಲ್ಲ ಎಂದು ಬಿಜೆಪಿ ಶೋಕಾಸ್ ನೋಟಿಸ್‌ನಲ್ಲಿ ಹೇಳಿದೆ.

ಅಂಬಾಲ ಕ್ಷೇತ್ರದಲ್ಲಿ ಒಟ್ಟು ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವ 71 ವರ್ಷದ ಅನಿಲ್ ವಿಜ್ ನಿರಂತರವಾಗಿ ಸಿಎಂ ಸೈನಿ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ವಿಚಾರವನ್ನು ಸೈನಿ ಸಮರ್ಥನೆ ಮಾಡಿಕೊಂಡಿದ್ದರು. ಸಚಿವರಾಗಿರುವ, ಹಿರಿಯ ನಾಯಕರಾಗಿರುವ ಅನಿಲ್ ವಿಜ್ ಅವರಿಗೆ ಏನು ಅನಿಸುತ್ತದೆಯೋ ಅದನ್ನು ಹೇಳುವ ಹಕ್ಕಿದೆ ಎಂದು ಹೇಳಿಕೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...