ಬಿಜೆಪಿಯವರು ಜನರ ಮನೆ ಬೆಳಗುವ ಒಂದಾದರೂ ಕೆಲಸ ಮಾಡಿದ್ದಾರಾ: ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ

Date:

ವಿಧಾನಪರಿಷತ್ ಸದಸ್ಯ ಸಿ ಟಿ ರವಿ ಅವರನ್ನು ಹೈಕೋರ್ಟ್ ಬಿಡುಗಡೆಗೊಳಿಸಿರುವ ವಿಚಾರ ಕಾಂಗ್ರೆಸ್‌ಗೆ ಮುಖಭಂಗ ಪ್ರಶ್ನೆಯೇ ಬರಲ್ಲ. ಅದು ಜಾಮೀನು‌ ಸಹಿತ ಪ್ರಕರಣವಾಗಿದೆ. ಎಫ್ ಎಸ್ ಎಲ್ ವರದಿ ಬರಲಿ ಆಮೇಲೆ ನೋಡೋಣ. ಕಾನೂನು ಕೇವಲ ಬಿಜೆಪಿಯವರಿಗೆ ಮಾತ್ರ ಗೊತ್ತಿಲ್ಲ ನಮಗೂ ಗೊತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿ, “ಪರಿಷತ್‌ನಲ್ಲಿ ಒಬ್ಬ ಮಹಿಳೆಗೆ ಅವಮಾನಕರವಾಗಿ ಮಾತನಾಡಿದ್ದಾರೆ. ಅವರ ಬೆನ್ನಿಗೆ ಹಲವಾರು ಶಾಸಕರು ನಿಂತಿದ್ದಾರೆ. ಹಾಗೆ ಮಾತನಾಡಿದ್ದು ತಪ್ಪು ಅಂತ ಕೂಡಾ ಹೇಳುತ್ತಿಲ್ಲ ಅಂದರೆ‌ ಎಷ್ಟು ದುರಹಂಕಾರ ಇರಬೇಕು” ಎಂದರು.

“ಘಟನೆಯನ್ನು ಬಿಜೆಪಿಯ ಯಾರಾದರೂ ಒಬ್ಬರು ಖಂಡಿಸಿದ್ದಾರೆಯೇ? ಈ ಪ್ರಕರಣದಿಂದ ಎಲ್ಲರೂ ಒಗ್ಗಾಟ್ಟಾಗಿದ್ದೇವೆ ಎನ್ನುತ್ತಾರೆ. ಅಂದರೆ ಎಲ್ಲರೂ ಹಾಳು ಬುದ್ದಿಯವರೇ, ಒಬ್ಬರೂ ಖಂಡಿಸಿಲ್ಲ ಎಂದರೆ ಎಲ್ಲರೂ ದುಶ್ಯಾಸನರು ಅಲ್ವಾ? ಜನರ ಮನೆ ಬೆಳಗುವ ಒಂದಾದರೂ ಕೆಲಸ ಅವರು ಮಾಡಿದ್ದಾರೆಯೇ? ಬರೀ‌ ಬೆಂಕಿ ಹಚ್ಚುವ ಕೆಲಸ ಮಾಡುತ್ತಾರೆ” ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ‌ ಅಧ್ಯಕ್ಷ ವಿಜಯೇಂದ್ರ ಕೂಡಾ ಘಟನೆ ಬಗ್ಗೆ ಪರಿಶೀಲನೆ ಮಾಡುತ್ತೇನೆ. ಒಂದು ವೇಳೆ ರವಿ ಹಾಗೇ ಹೇಳಿದ್ದರೆ ಕ್ರಮ ಕೈಗೊಳ್ಳುತ್ತೇವೆ ಎನ್ನಲಿಲ್ಲ. ಬದಲಿಗೆ ಬಿಜೆಪಿಯವರು ಬಳೆ ತೊಟ್ಟಿಲ್ಲ ಎಂದಿದ್ದಾರೆ. ಬಳೆ ತೊಟ್ಟವರಿಗೆ ಬಿಜೆಪಿಯವರು ಅವಮಾನ ಮಾಡಿದ್ದಾರಲ್ಲ? ಅದಕ್ಕೆ ವಿಜಯೇಂದ್ರ ಏನು ಹೇಳುತ್ತಾರೆ. ಪೂಜ್ಯ ಅಪ್ಪಾಜಿಯವರ ಮೇಲೆಯೇ ಪೋಕ್ಸೋ ಅಡಿಯಲ್ಲಿ ಕೇಸು ದಾಖಲಾಗಿರುವಾಗ ಅವರು ಏನು ಹೇಳುತ್ತಾರೆ? ಮುನಿರತ್ನ ವಿಚಾರದಲ್ಲಿ ಒಂದು‌ ನೋಟಿಸು ಕೂಡಾ ನೀಡಲಿಲ್ಲವಲ್ಲ” ಎಂದು ವ್ಯಂಗ್ಯವಾಡಿದರು.

ರಾತ್ರಿ‌ ಇಡೀ ರವಿ ಅವರನ್ನು ಸುತ್ತಿಸಲಾಗಿದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, “ಆರೋಪಿ ಅರೆಸ್ಟ್ ಆಗಿದ್ದಾನೆ. ಪೊಲೀಸ್ ಠಾಣೆಗಳಲ್ಲಿ ಬಿಜೆಪಿ ನಾಯಕರಿಗೇನು ಕೆಲಸ ? ಅವರು ಅಲ್ಲೇಕೆ ಹೋಗಿದ್ದಾರೆ ? ಆರೋಪಿ ಅರೆಸ್ಟ್ ಆದ ಕೂಡಲೇ ಅವರ ಬಾಡಿ ಸರ್ಜ್ ಮಾಡುವುದು ಒಂದು ಪ್ರಕ್ರಿಯೆ ಅದರ ಪ್ರಕಾರ ಪೊಲೀಸರು ಮಾಡಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...