ಹಾಸನ ಪೆನ್‌ಡ್ರೈವ್ ಪ್ರಕರಣ | ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧಾರ

Date:

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ.

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಎಸ್‌ಐಟಿ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್, ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ನಡೆಸುವಂತೆ ಪತ್ರ ಬರೆದಿದ್ದರು.

Womens Commission Letter
ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಸಿಎಂಗೆ ಬರೆದಿದ್ದ ಪತ್ರ

ಇದನ್ನು ಓದಿದ್ದೀರಾ? ಹಾಸನದ ‘ಪೆನ್‌ಡ್ರೈವ್’ ನಮಗೂ ತಲುಪಿದೆ; ಎಸ್ಐಟಿ ರಚಿಸಲು ಸಿಎಂಗೆ ಮನವಿ: ಮಹಿಳಾ ಆಯೋಗ

ಈ ಹಿನ್ನೆಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ. ಈ ಮಧ್ಯೆ, ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಸಿಎಂ, ಗೃಹ ಸಚಿವ, ಐಜಿಪಿಗೆ ಪತ್ರ ಬರೆದಿದ್ದ ಮಹಿಳಾ ಆಯೋಗ

ಕಳೆದ ಗುರುವಾರ(ಏ.25) ಬೆಂಗಳೂರಿನ ಕಾವೇರಿ ಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ, “ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಇರುವ ಪೆನ್ ಡ್ರೈವ್ ಮಹಿಳಾ ಆಯೋಗದ ಕಚೇರಿಗೂ ತಲುಪಿದೆ. ದೇಶದಲ್ಲೇ ತಲೆ ತಗ್ಗಿಸಲು ತಗ್ಗಿಸುವ ಘಟನೆ ಇದು. ಹೆದರಿಸಿ, ನಂಬಿಸಿ ಈ ವೀಡಿಯೋ ಮಾಡಲಾಗಿದೆ. ಈವರೆಗೆ ಮಹಿಳಾ ಆಯೋಗಕ್ಕೆ ಸಂತ್ರಸ್ತರು ಯಾರು ಕೂಡ ಬಂದಿಲ್ಲ. ಆದರೂ ಎರಡು ದೂರುಗಳು ಬಂದಿದೆ. ಈ ಬಗ್ಗೆ ಎಸ್ಐಟಿ ರಚಿಸಲು ಸಿಎಂಗೆ ಮನವಿ ಮಾಡಲಾಗಿದೆ” ಎಂದು ತಿಳಿಸಿದ್ದರು.

“ಹರಿದಾಡುತ್ತಿರುವ ಪೆನ್‌ಡ್ರೈವ್‌ನಲ್ಲಿ ಮಹಿಳೆಯರ ಮೇಲೆ ನಡೆಸಲಾಗುತ್ತಿರುವ ಲೈಂಗಿಕ ಹಿಂಸೆಯ ಕುರಿತು ಮತ್ತು ಸಾವಿರಾರು ಅಮಾಯಕ ಹೆಣ್ಣು ಮಕ್ಕಳನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಂಡು, ಮೊಬೈಲ್‌ನಲ್ಲಿ ಖಾಸಗಿ ವಿಡಿಯೋವನ್ನು ಚಿತ್ರೀಕರಿಸಿಕೊಂಡು, ಬ್ಲ್ಯಾಕ್‌ಮೇಲ್ ಮಾಡುತ್ತಿರುವುದಾಗಿ ಸಮೂಹ ಮಾಧ್ಯಮಗಳಲ್ಲಿ ಪ್ರಚಾರವಾಗಿರುತ್ತದೆ. ಅಲ್ಲದೇ ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ, ಕೆಲವರ ಮೇಲೆ ಅತ್ಯಾಚಾರ ಸಹ ಮಾಡುತ್ತಿರುವ ತುಣುಕುಗಳಿರುವ ಪೆನ್‌ಡ್ರೈವ್‌ಗಳು ಈಗ ಜನ ಸಾಮಾನ್ಯರ ಕೈಗೆ ಸಿಕ್ಕಿ, ಇಡೀ ಸಮಾಜ ತಲೆ ತಗ್ಗಿಸುವ ಸ್ಥಿತಿ ಏರ್ಪಟ್ಟಿದೆ” ಎಂದು ನಾಗಲಕ್ಷ್ಮಿ ಚೌಧರಿ ಬೇಸರಿಸಿದ್ದರು.

ಇದನ್ನು ಓದಿದ್ದೀರಾ? ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ಅಲ್ಲದೇ, ಪತ್ರದಲ್ಲಿ, “ಹಲವು ಮಹಿಳೆಯರನ್ನು ಬಲವಂತದಿಂದ ಲೈಂಗಿಕ ಕ್ರಿಯೆಗೆ ಒತ್ತಾಯಪಡಿಸುವ ಮೂಲಕ ಚಿತ್ರೀಕರಿಸಲಾಗಿದೆ ಎನ್ನಲಾಗುತ್ತಿದ್ದು, ಚಿತ್ರೀಕರಣ ಮಾಡಿದ ವ್ಯಕ್ತಿ ಮತ್ತು ಅದನ್ನು ಸಾರ್ವಜನಿಕಗೊಳಿಸಿದ ವ್ಯಕ್ತಿಯನ್ನು ತನಿಖೆಗೆ ಒಳಪಡಿಸುವ ಮೂಲಕ ಮಹಿಳೆಯರ ಘನತೆ ಹಾಗೂ ಆಸ್ತಿತ್ವಕ್ಕೆ ಹಾನಿ ಉಂಟು ಮಾಡುತ್ತಿರುವವರನ್ನು ಶೀಘ್ರವಾಗಿ ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸಲು ಆದೇಶ ನೀಡಬೇಕು” ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ತಿಳಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...