ಹಾಸನ ಪೆನ್‌ಡ್ರೈವ್ ಪ್ರಕರಣ: ಜರ್ಮನಿಗೆ ತೆರಳಿರುವ ಸಂಸದ ಪ್ರಜ್ವಲ್ ರೇವಣ್ಣ?

Date:

ಹಾಸನದ ಅಶ್ಲೀಲ ವೀಡಿಯೊ ತುಣುಕು ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಶನಿವಾರ ರಾತ್ರಿ ಎಸ್‌ಐಟಿ ರಚನೆಗೆ ಆದೇಶ ಹೊರಡಿಸಿದೆ. ಆದರೆ, ಇದಕ್ಕೂ ಮೊದಲೇ, ಆರೋಪ ಕೇಳಿಬಂದಿರುವ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಅವರು ವಿದೇಶಕ್ಕೆ ತೆರಳಿರುವುದಾಗಿ ಮಾಹಿತಿ ದೊರಕಿದೆ. ಅಲ್ಲದೇ, ಈ ಮಾಹಿತಿಯನ್ನು ಪೊಲೀಸರು ಕೂಡ ದೃಢೀಕರಿಸಿದ್ದಾರೆ.

ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರು ಸ್ಪರ್ಧಿಸಿರುವ ಹಾಸನ ಸೇರಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ(ಏ.26) ಮತದಾನ ನಡೆದಿತ್ತು. ಪ್ರತಿ ಚುನಾವಣೆಯಲ್ಲೂ ಕುಟುಂಬ ಸಮೇತರಾಗಿ ಬಂದು ಮತ‌ ಚಲಾಯಿಸುತ್ತಿದ್ದ ಪ್ರಜ್ವಲ್, ಈ ಬಾರಿ ಪೆನ್‌ಡ್ರೈವ್ ಪ್ರಕರಣ ಸುದ್ದಿಯಲ್ಲಿದ್ದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಪಡುವಲಹಿಪ್ಪೆಯಲ್ಲಿ ಏಕಾಂಗಿಯಾಗಿ ಬಂದು ಹಕ್ಕು ಚಲಾವಣೆ ಮಾಡಿದ್ದರು. ಅಲ್ಲದೇ, ಈ ವೇಳೆ ಮಾಧ್ಯಮಗಳೊಂದಿಗೂ ಕೂಡ ಮಾತನಾಡಿ, ‘ಗೆಲುವು ನನ್ನದಾಗಲಿದೆ’ ಎಂದು ಹೇಳಿದ್ದರು.

ಅಶ್ಲೀಲ ವೀಡಿಯೋ ಪ್ರಕರಣವು ರಾಜ್ಯದ ಮೂಲೆಮೂಲೆಗಳಲ್ಲಿ ಸುದ್ದಿಯಾಗುತ್ತಿದ್ದಂತೆಯೇ, ಶನಿವಾರ ಮುಂಜಾನೆ ಮೂರು ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

LH 755 ನಂಬರಿನ ಲುಫ್ತಾನ್ಸಾ ಏರ್‌ಲೈನ್ಸ್ ಮೂಲಕ ಬೆಂಗಳೂರಿನ ವಿಮಾನ ನಿಲ್ದಾಣದಿಂದ ಜರ್ಮನಿಯ ಫ್ರಾಂಕ್ ಫರ್ಟ್‌ಗೆ ಪ್ರಜ್ವಲ್‌ ರೇವಣ್ಣ ಅವರು ಪ್ರಯಾಣಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಯಾರೊಂದಿಗೆ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿಲ್ಲ.

ಸರ್ಕಾರವು ಎಸ್‌ಐಟಿ ತನಿಖೆಗೆ ಆದೇಶ ಮಾಡುವ ಮುಂಚೆಯೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರುವ ಮೂಲಕ ಮಾಜಿ ಪ್ರಧಾನಿಗಳ ಕುಟುಂಬಕ್ಕೆ ಇನ್ನಷ್ಟು ಮುಜುಗರ ತಂದಿದ್ದು, ಸತ್ಯ ಒಪ್ಪಿಕೊಂಡಂತಾಗಿದೆ ಎಂಬ ಮಾತುಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.

ಎಸ್​ಐಟಿ ತಂಡ ರಚನೆ

ಪ್ರಜ್ವಲ್ ರೇವಣ್ಣ ಅವರಿಂದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಪ್ರಕರಣದ ತನಿಖೆಗೆ ಸರ್ಕಾರ ಎಸ್​ಐಟಿ ತಂಡ ರಚಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹಲವಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿರುವ ಪೆನ್​ಡ್ರೈವ್ ಒಂದು ಬಹಿರಂಗಗೊಂಡಿದೆ. ಅದರ ಬಗ್ಗೆ ತನಿಖೆ ನಡೆಸುವುದಾಗಿ ಅವರು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಹಾಸನ ಪೆನ್‌ಡ್ರೈವ್ ಪ್ರಕರಣ | ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧಾರ

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರದಿಂದ ತೀರ್ಮಾನ ಮಾಡಲಾಗಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಸರ್ಕಾರಕ್ಕೆ ಪತ್ರ ಬರೆದಿದ್ದರು. ಹೀಗಾಗಿ, ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು.

ಸರ್ಕಾರ ರಚಿಸಿರುವ ಎಡಿಜಿಪಿ ನೇತೃತ್ವದ ವಿಶೇಷ ತನಿಖಾ ತಂಡದಲ್ಲಿ ಒಬ್ಬ ಮಹಿಳಾ ಪೊಲೀಸ್ ಅಧಿಕಾರಿ ಸೇರಿದಂತೆ ಮೂವರು ಎಸ್‌ಪಿಗಳು ಇರಲಿದ್ದಾರೆ ಎಂದು ತಿಳಿದುಬಂದಿದೆ.

ಚುನಾವಣೆಯ ಪ್ರಚಾರದ ಭರಾಟೆ ಆರಂಭವಾಗಿ ಕೊನೆಯ ಹಂತದಲ್ಲಿ ರಾಸಲೀಲೆಯ ವಿಡಿಯೋಗಳು ಬಹಿರಂಗಗೊಂಡಿವೆ. ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯ ನಾಯಕರು ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದಾರೆ.

ರಾಜ್ಯದಲ್ಲಿ ಇನ್ನೂ 14 ಕ್ಷೇತ್ರಗಳ ಮತದಾನ ಪ್ರಕ್ರಿಯೆ ನಡೆಯುವುದಕ್ಕೂ ಮುನ್ನವೇ ಈ ಬೆಳವಣಿಗೆ ನಡೆದಿದೆ. ಅಲ್ಲದೇ, ಖುದ್ದು ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಪ್ರವಾಸದಲ್ಲಿರುವಾಗಲೇ ಈ ಬೆಳವಣಿಗೆ ನಡೆದಿದೆ.

ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ಕುಂದಾನಗರಿ ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ರಾತ್ರಿ ತಲುಪಿದ್ದಾರೆ. ಈಗ ಈ ಬೆಳವಣಿಗೆ ನಡೆದಿರುವುದು ರಾಜ್ಯದ ಬಿಜೆಪಿ ಮುಖಂಡರಿಗೆ ಇರಿಸು-ಮುರಿಸು ತಂದೊಡ್ಡಿದೆ.

ಈ ಎಲ್ಲ ಬೆಳವಣಿಗೆಗಳ ನಡುವೆ ಜೆಡಿಎಸ್ ಮುಖಂಡ ಜಿಟಿ ದೇವೇಗೌಡ ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಲ್ಲಿ ನಾಳೆ(ಏ.28)ರ ಬೆಳಗ್ಗೆ 11.30ಕ್ಕೆ ತುರ್ತು ಮಾಧ್ಯಮಗೋಷ್ಠಿಯನ್ನು ಕೂಡ ಕರೆದಿದ್ದು, ಯಾವ ವಿಚಾರದ ಬಗ್ಗೆ ಮಾತನಾಡಲಿದ್ದಾರೆ ಎಂದು ತಿಳಿದುಬಂದಿಲ್ಲ. ಸುದ್ದಿಗೋಷ್ಠಿಯಲ್ಲಿ ಹಾಸನ ಪೆನ್‌ಡ್ರೈವ್ ವಿಚಾರದಲ್ಲಿ ಮೌನ ಮುರಿಯಲಿದ್ದಾರೆಯೇ ಎಂದು ಕಾದು ನೋಡಬೇಕಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...