ಹಾಸನ | ಆಳುವ ಸರ್ಕಾರಗಳ ಕೆಲ ನೀತಿಗಳಿಂದಾಗಿ ಸಂವಿಧಾನಾತ್ಮಕ ಹಕ್ಕುಗಳು ದುರ್ಬಲ: ಭೀಮ್ ರಾವ್ ಅಂಬೇಡ್ಕರ್ 

Date:

ಇತ್ತಿಚಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನೀತಿಗಳಿಂದಾಗಿ ಸಂವಿಧಾನಾತ್ಮಕ ಹಕ್ಕುಗಳು ದುರ್ಬಲಗೊಳ್ಳುತ್ತಿವೆ. ಮೀಸಲಾತಿ ನೀತಿಯ ಸರಿಯಾದ ಅನುಷ್ಠಾನವಾಗುತ್ತಿಲ್ಲ. ಸರ್ಕಾರಿ ಸಂಸ್ಥೆಗಳ ಖಾಸಗೀಕರಣದಿಂದ ಉದ್ಯೋಗಾವಕಾಶಗಳು ಕಡಿಮೆಯಾಗಿವೆ ಎಂದು ಭಾರತೀಯ ಬೌದ್ಧ ಮಹಾಸಭಾ ರಾಷ್ಟ್ರೀಯ ಕಾರ್ಯಾಧ್ಯಕ್ಷ  ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಮೊಮ್ಮಗ ಭೀಮ್ ರಾವ್ ಅಂಬೇಡ್ಕರ್ ಭೀಮಾ ಕೊರೆಗಾಂವ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತಾಡಿದರು.

ಜಿಲ್ಲಾ ಕೊರೆಗಾಂವ್ ವಿಜಯೋತ್ಸವ ಆಚರಣಾ ಸಮಿತಿ ವತಿಯಿಂದ ನಗರದ ಪ್ರಜಾ ಸೌಧದ ಬಳಿ ಹಮ್ಮಿಕೊಂಡಿದ್ದ 208ನೇ ಭೀಮಾ ಕೊರೆಗಾಂವ್ ವಿಜಯೋತ್ಸವದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,  ಅಂದಿನ ಕಾಲಕ್ಕೆ ಶೋಷಣೆ ವಿರುದ್ಧ ಭೀಮಾ ಕೊರೆಗಾಂವ್  ಸಮಾನತೆಗಾಗಿ ನಡೆದ ಹೊರಟವಾದರೆ ಇಂದಿಗೂ ತಮ್ಮ ಹಕ್ಕು ಗಳಿವಾಗಿ ಹೋರಾಟ ನಡೆಯುತ್ತಲೇ ಇದೆ, ತಳ ಸಮುದಾಯದ ಮೇಲೆ ದೌರ್ಜನ್ಯ ದಬ್ಬಾಳಿಕೆ ನಡೆಯುತ್ತಲೇ ಇವೆ ಇದನ್ನು ಕೊನೆಗಾಣಿಸಲು ಸಂವಿಧಾನದ ಕಾನೂನುಗಳ ಕಟ್ಟುನಿಟ್ಟಿನ ಜಾರಿಯಿಂದ ಮಾತ್ರ ಸಾಧ್ಯ ಎಂದರು ಪದೋನ್ನತಿಯಲ್ಲಿ ಮೀಸಲಾತಿ ಕುರಿತು ಅನೇಕ ಪ್ರಕರಣಗಳು ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿವೆ. “ಸರ್ಕಾರಿ ಸಂಸ್ಥೆಗಳೇ ಇಲ್ಲ” ಎನ್ನುವ ವಾದಗಳು ಮುಂದಿಡಲಾಗುತ್ತಿವೆ. ಇದು ದೇಶದ ಶೋಷಿತ ಸಮುದಾಯಗಳಿಗೆ ದೊಡ್ಡ ಆತಂಕವಾಗಿದೆ. ಭೀಮಾ ಕೋರೆಗಾವ್ ವಿಜಯೋತ್ಸವವನ್ನು ನಾವು ಕೇವಲ ಆಚರಣೆಗಾಗಿ ಅಲ್ಲ, ಆತ್ಮಗೌರವದ ಸಂಕೇತವಾಗಿ ಆಚರಿಸಬೇಕು. ಈ ಇತಿಹಾಸ ದೇಶಾದ್ಯಂತ ಹಾಗೂ ವಿದೇಶಗಳಲ್ಲೂ ಚರ್ಚೆಗೆ ಬಂದಿದೆ. ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈಗ ಜನರಿಗೆ ಈ ಇತಿಹಾಸ ತಿಳಿಯತೊಡಗಿದೆ. ನಮ್ಮ ಸಮುದಾಯದ ಇತಿಹಾಸ ಮಾತ್ರವಲ್ಲ, ಸಮಾನತೆ, ನ್ಯಾಯ ಮತ್ತು ಮಾನವೀಯ ಗೌರವಕ್ಕಾಗಿ ನಡೆದ ಹೋರಾಟದ ಇತಿಹಾಸ. ಈ ಸತ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಜವಾಬ್ದಾರಿ ನಮ್ಮದಾಗಿದೆ ಎಂದು ಭೀಮ್ ರಾವ್ ಅಂಬೇಡ್ಕರ್ ತಿಳಿಸಿದರು.

ಭೀಮಾ ಕೋರೆಗಾವ್ ಯುದ್ಧವು ಕೇವಲ ಒಂದು ಸೈನಿಕ ಸಂಘರ್ಷವಲ್ಲ,  ಅದು ಗೌರವ, ಸ್ವಾಭಿಮಾನ ಮತ್ತು ಸಮಾನತೆಯ ಹೋರಾಟದ ಸಂಕೇತ. 1818ರಲ್ಲಿ ಭೀಮಾ ನದಿಯ ತಟದಲ್ಲಿ ನಡೆದ ಈ ಯುದ್ಧದಲ್ಲಿ ಮಹಾರ್ ಸಮುದಾಯದ ಸೈನಿಕರು ಬ್ರಿಟಿಷ್ ಸೇನೆಯ ಭಾಗವಾಗಿ ಪೇಶ್ವಾ ಆಳ್ವಿಕೆಗೆ ವಿರುದ್ಧವಾಗಿ ಹೋರಾಡಿದರು. ಶತಕೋಟಿ ಅನ್ಯಾಯ, ಅಸ್ಪೃಶ್ಯತೆ ಮತ್ತು ದೌರ್ಜನ್ಯಗಳನ್ನು ಅನುಭವಿಸುತ್ತಿದ್ದ ತುಳಿತಕ್ಕೆ ಒಳಗಾದ ಸಮುದಾಯಗಳು ಈ ಯುದ್ಧದಲ್ಲಿ ಒಟ್ಟಾಗಿ ನಿಂತವು.ಮಹಾರ್ ಸಮುದಾಯದವರು ಸಹಜವಾಗಿಯೇ ಯೋಧರೇ ಆಗಿದ್ದರು. ಮರಾಠಾ ಸೇನೆಯಲ್ಲಿಯೂ ಮಹಾರ್ ಸೈನಿಕರು ಇದ್ದರು. ಛತ್ರಪತಿ ಶಿವಾಜಿ ಮಹಾರಾಜರ ಕಾಲದಲ್ಲಿಯೂ ಮಹಾರ್ ಸಮುದಾಯದ ಯೋಧರು ಸೇನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಭೀಮಾ ಕೋರೆಗಾವ್ ಯುದ್ಧದಲ್ಲಿ ಪ್ರಾಣ ತ್ಯಾಗ ಮಾಡಿದ ಯೋಧರ ಹೆಸರುಗಳು ಇಂದಿಗೂ ಸ್ಮಾರಕದಲ್ಲಿ ಕೆತ್ತಲ್ಪಟ್ಟಿವೆ. ಬ್ರಿಟಿಷರು ಮಹಾರ್ ಸಮುದಾಯವನ್ನು “ಮಾರ್ಷಿಯಲ್ ರೇಸ್” (ಯೋಧ ಸಮುದಾಯ) ಎಂದು ಅಧಿಕೃತವಾಗಿ ಗುರುತಿಸಿದ್ದರು. ಭಾರತದಲ್ಲಿ ಇಂತಹ ಗುರುತಿನ ಪಡೆದ ಎರಡು ಸಮುದಾಯಗಳಲ್ಲಿ ಮಹಾರಾಷ್ಟ್ರದ ಮಹಾರ್ ಸಮುದಾಯ ಮತ್ತು ಪಂಜಾಬ್‌ನ ಮತ್ತೊಂದು ಸಮುದಾಯ ಪ್ರಮುಖವಾಗಿವೆ. ಈ ಇತಿಹಾಸವನ್ನು ದೇಶದ ಜನತೆಗೆ ಪರಿಚಯಿಸಿದವರು ಡಾ. ಬಿ.ಆರ್. ಅಂಬೇಡ್ಕರ್. 1927ರಲ್ಲಿ ಮೊದಲ ಬಾರಿಗೆ ಅವರು ಭೀಮಾ ಕೋರೆಗಾವ್ ವಿಜಯೋತ್ಸವಕ್ಕೆ ಭೇಟಿ ನೀಡಿ, ಈ ಹೋರಾಟದ ಮಹತ್ವವನ್ನು ದೇಶದ ಮುಂದೆ ತಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಹಾಸನ | ಶಿವಲಿಂಗೇಗೌಡ ಹೇಳಿಕೆಗೆ ಮಾಜಿ ಸಚಿವ ಎಚ್.ಡಿ. ರೇವಣ್ಣ ತಿರುಗೇಟು

ಲಂಡನ್ ಹಾಗೂ ಬಾಂಬೆಗಳಲ್ಲಿ ವಿದ್ಯಾಭ್ಯಾಸ ಮಾಡಿ, ಪಿಎಚ್‌ಡಿ ಪೂರ್ಣಗೊಳಿಸಿದ ಬಳಿಕ, ಬ್ರಿಟಿಷ್ ಲೈಬ್ರರಿಗಳಲ್ಲಿ ಸಂಗ್ರಹಿಸಿದ್ದ ದಾಖಲೆಗಳನ್ನು ಅಧ್ಯಯನ ಮಾಡಿ, ಈ ಇತಿಹಾಸವನ್ನು ಸಮಾಜಕ್ಕೆ ಪರಿಚಯಿಸಿದರು. ಅದಕ್ಕೂ ಮೊದಲು ಈ ಸತ್ಯ ಬಹುತೇಕ ಜನರಿಗೆ ಗೊತ್ತಿರಲಿಲ್ಲ. ಇಂದಿಗೂ ಈ ಹೋರಾಟ ಮುಂದುವರಿದಿದೆ. ಈಗ ಅದು ಯುದ್ಧಭೂಮಿಯಲ್ಲಿ ಅಲ್ಲ, ಸಮಾಜದ ಒಳಗೆ ನಡೆಯುತ್ತಿದೆ. ಗೌರವಕ್ಕಾಗಿ, ಹಕ್ಕುಗಳಿಗಾಗಿ, ಸಂವಿಧಾನದ ಅನುಷ್ಠಾನಕ್ಕಾಗಿ ನಡೆಯುತ್ತಿರುವ ಹೋರಾಟ ಇದಾಗಿದೆ. ಡಾ. ಅಂಬೇಡ್ಕರ್ ನಮಗೆ ಕೊಟ್ಟ ಮಹಾಮಂತ್ರವೇ – ಶಿಕ್ಷಣ ಪಡೆಯಿರಿ, ಸಂಘಟಿತರಾಗಿರಿ, ಹೋರಾಡಿರಿ ಎಂದು ಭೀಮ್ ರಾವ್ ಅಂಬೇಡ್ಕರ್ ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...