ಹಾಸನ | ಎಲ್ಲ ಕ್ಷೇತ್ರಗಳ ಟಿಕೆಟ್‌ ಗೌಡರೇ ನಿರ್ಧರಿಸುತ್ತಾರೆ: ಎಚ್‌ ಡಿ ರೇವಣ್ಣ

Date:

  • ಹಾಸನ ಕ್ಷೇತ್ರದ ಟಿಕೆಟ್‌ ಯಾರಿಗೆಂದು ಜನವರಿಯಲ್ಲಿಯೇ ನಿರ್ಧಾರ
  • ʼಗೌಡರ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆʼ

ದೇವೇಗೌಡ್ರು ನಮಗೆ ಸರ್ವೋಚ್ಚ ನಾಯಕರು. ಅವರು ಏನು ಹೇಳುತ್ತಾರೋ ಅದನ್ನೇ ಕೇಳುತ್ತೇವೆ. ಹಿಂದೇನೂ ಕೇಳಿದ್ದೆ, ಈಗಲೂ ಕೇಳುತ್ತೇವೆ. ಮುಂದೆಯೂ ಕೇಳುತ್ತೇವೆ. ಅವರ ಮಾತನ್ನ ತಿರಸ್ಕರಿಸೋ ಮಾತೇ ಇಲ್ಲ. ಹಾಸನದ ಟಿಕೆಟ್‌ ಯಾರಿಗೆಂದು ಅವರೇ ನಿರ್ಧಾರ ಮಾಡಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಆನೆಕೆರೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, “ಹಾಸನದ ಟಿಕೆಟ್‌ ಯಾರಿಗೆ ನೀಡಬೇಕು, ಅಭ್ಯರ್ಥಿ ಯಾರಾಗಬೇಕೆಂದು ದೇವೇಗೌಡರು ಜನವರಿಯಲ್ಲಿಯೇ ತೀರ್ಮಾನ ಮಾಡಿದ್ದಾರೆ. ಅವರ ಮಾತು ಅಂತಿಮ. ಅವರು ನಮ್ಮ ಪಕ್ಷಕ್ಕೆ ಸರ್ವೋಚ್ಚ ನಾಯಕರು. ಅವರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ. ಯಾಕೆಂದರೆ ನಮ್ಮ ಜನ ಉಳಿಬೇಕು ಅಷ್ಟೇ. ಶಕುನಿಗಳು ನಮ್ಮ ಕುಟುಂಬವನ್ನು ಮುಗಿಸಲು ಹೊರಟಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ | ಭವಾನಿ ರೇವಣ್ಣ ಹಾಸನದಲ್ಲಿ ಸ್ಪರ್ಧಿಸಿದರೆ ಗೆಲ್ಲಲ್ಲ: ಎಚ್‌ ಡಿ ಕುಮಾರಸ್ವಾಮಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇವೇಗೌಡರಿಗೆ 60 ವರ್ಷದ ರಾಜಕೀಯ ಅನುಭವವಿದೆ. ಎಲ್ಲ ಕ್ಷೇತ್ರಗಳ ಟಿಕೆಟ್ ದೇವೇಗೌಡರೇ ನಿರ್ಧರಿಸುತ್ತಾರೆ. ಅಷ್ಟೇ ಅಲ್ಲದೆ ಹಾಸನದ ಅಭ್ಯರ್ಥಿ ಯಾರಾಗಬೇಕು ಅಂತ ಜನವರಿಯಲ್ಲಿಯೇ ನಿರ್ಧಾರ ಮಾಡಿದ್ದಾರೆ. ಸಾಮಾನ್ಯ ಕಾರ್ಯಕರ್ತ ಅಂದರೆ ಯಾರು? ಪಕ್ಷದಿಂದ ಯಾವ ಫಲವನ್ನೂ ಪಡೆಯದೇ ಇರುವವನು ಸಾಮಾನ್ಯ ಕಾರ್ಯಕರ್ತ. ಆದರೆ, ಹಾಸನಕ್ಕೆ ಸ್ಪರ್ಧಿಸಲು ಬಯಸಿರುವ ಎಚ್‌ ಪಿ ಸ್ವರೂಪ್ ಅವರು ಈ ಹಿಂದೆ ಜಿಪಂ ಸದಸ್ಯರಾಗಿ ಮತ್ತು ಹಾಸನ ಜಿಪಂ ಉಪಾಧ್ಯಕ್ಷರಾಗಿ ಅಧಿಕಾರ ಅನುಭವಿಸಿದ್ದರು” ಎಂದರು.

“ಶಕುನಿಗಳ ಆಟಕ್ಕೆ ಪಕ್ಷದ ಕಾರ್ಯಕರ್ತರು ಮತ್ತು ಜನರು ತಕ್ಕ ಉತ್ತರ ಕೊಡುತ್ತಾರೆ. ನಮ್ಮ ಜನವನ್ನು ಉಳಿಸಿಕೊಳ್ಳಲು ಪಕ್ಷವನ್ನು ಉಳಿಸಿಕೊಳ್ಳಲು ನಾವು ಹೋರಾಟ ಮಾಡುತ್ತಿದ್ದೇವೆ ಅಷ್ಟೇ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...