ಈ ಫಲಿತಾಂಶ ಲೋಕಸಭೆ ಚುನಾವಣೆಯ ಹ್ಯಾಟ್ರಿಕ್‌ ಗೆಲುವಿನ ಮುನ್ಸೂಚನೆ: ಪ್ರಧಾನಿ ನರೇಂದ್ರ ಮೋದಿ

Date:

‘ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯ ಹ್ಯಾಟ್ರಿಕ್‌ ಗೆಲುವು 2024ರ ಲೋಕಸಭೆ ಚುನಾವಣೆಯ ಹ್ಯಾಟ್ರಿಕ್‌ ಗೆಲುವಿನ ಮುನ್ಸೂಚನೆ’ ಎಂದು ಧಾನಿ ನರೇಂದ್ರ ಮೋದಿ ತಿಳಿಸಿದರು.

ನಾಲ್ಕು ರಾಜ್ಯಗಳ ಚುನಾವಣೆಯ ಫಲಿತಾಂಶಗಳಲ್ಲಿ ಮೂರರಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಜಯೋತ್ಸವ ಸಮಾರಂಭದಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಅವರು ಮಾತನಾಡಿದರು.

ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟವನ್ನು ಅಹಂಕಾರಿಗಳ ಕೂಟ ಎಂದು ಗೇಲಿ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಜಾಗೃತ ಮಹಿಳಾ ಶಕ್ತಿಯ ಬಲದಿಂದಾಗಿ ಬಿಜೆಪಿಗೆ ಭರ್ಜರಿ ಜಯ ಸಿಕ್ಕಿದೆ. ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಘಢ ರಾಜ್ಯಗಳ ಮತದಾರರು ಬಿಜೆಪಿಗೆ ಅಭೂತಪೂರ್ವ ಜಯ ತಂದುಕೊಟ್ಟಿದ್ದಾರೆ. ಈ ಹ್ಯಾಟ್ರಿಕ್‌ ಗೆಲುವು 2024ರ ಲೋಕಸಭೆ ಚುನಾವಣೆಯ ಹ್ಯಾಟ್ರಿಕ್‌ ಗೆಲುವಿನ ಮುನ್ಸೂಚನೆ’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಈ ಗೆಲುವು ಸ್ವಾವಲಂಬಿ ಕೇಂದ್ರ ಸರ್ಕಾರದ ಅಜೆಂಡಾಕ್ಕೆ ಸಂದ ಜಯ ಎಂದ ಪ್ರಧಾನಿ ಮೋದಿ, ‘ಈ ಫಲಿತಾಂಶಗಳು ಭ್ರಷ್ಟಾಚಾರದ ವಿರುದ್ಧದ ನಮ್ಮ ಹೋರಾಟಕ್ಕೆ ಜನಬೆಂಬಲವನ್ನು ತೋರಿಸುತ್ತವೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಮಧ್ಯಪ್ರದೇಶ | ಆಡಳಿತ ವಿರೋಧಿ ಅಲೆ ನಡುವೆ ಬಿಜೆಪಿ ಜಯಭೇರಿ

‘ಭ್ರಷ್ಟಾಚಾರದಲ್ಲಿ ತೊಡಗಿರುವ ವಿಪಕ್ಷಗಳಿಗೆ ಮತದಾರರು ತಮ್ಮ ಮಾರ್ಗವನ್ನು ಸರಿಪಡಿಸಿಕೊಳ್ಳುವಂತೆ ಎಚ್ಚರಿಕೆ ನೀಡಿದ್ದಾರೆ. ಇನ್ನೂ ಕೂಡ ಅವರು ಸರಿ ಮಾಡದಿದಿದ್ದರೆ ಜನರೇ ಅವರನ್ನು ಮುಗಿಸುತ್ತಾರೆ’ ಎಂದು ಹೇಳಿದರು.

‘ದೇಶವು ಅಭಿವೃದ್ಧಿಯಲ್ಲಿ ಸಾಗುತ್ತಿರುವ ಸಂದರ್ಭದಲ್ಲಿ ದೇಶದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುವವರನ್ನು ಜನರು ಬೆಂಬಲಿಸಿಲ್ಲ. ಈ ಫಲಿತಾಂಶಗಳು ಭಾರತದ ಮೇಲಿನ ವಿಶ್ವದ ನಂಬಿಕೆಯನ್ನು ಖಚಿತಪಡಿಸುತ್ತದೆ ಮತ್ತು ದೇಶಕ್ಕಾಗಿ ಜಾಗತಿಕ ಹೂಡಿಕೆದಾರರಲ್ಲಿ ಹೆಚ್ಚಿನ ವಿಶ್ವಾಸ ತುಂಬಲಿದೆ ಎಂದು ಹೇಳಿದರು.

ತೆಲಂಗಾಣದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರದಿದ್ದರೂ ಉತ್ತಮ ಗೆಲುವು ಸಾಧಿಸಿದೆ. ಅಲ್ಲಿನ ತಾಯಂದಿರು, ಯುವಕರು, ಬಡವರು ಒಳ್ಳೆಯ ನಿರ್ಣಯ ತೆಗೆದುಕೊಂಡಿದ್ದಾರೆ. ಅವರಿಗೆ ನನ್ನ ಮನಪೂರ್ವಕ ನಮಸ್ಕಾರಗಳು. ದೇಶದಲ್ಲಿ ನನ್ನ ಪ್ರಕಾರ ನಾಲ್ಕು ಜಾತಿಗಳು ಮಾತ್ರ ದೊಡ್ಡದಾಗಿವೆ. ಮಹಿಳಾ ಶಕ್ತಿ, ಯುವಶಕ್ತಿ, ರೈತರು, ಹಾಗೂ ಬಡವರ್ಗ. ಈ ನಾಲ್ಕು ಜಾತಿಗಳ ಸಶಕ್ತೀಕರಣದಿಂದ ದೇಶ ಅಭಿವೃದ್ಧಿ ಹೊಂದಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...