ಹಾಥ್ರಸ್ ಅತ್ಯಾಚಾರ ಪ್ರಕರಣ: ಮಾನನಷ್ಟ ಮೊಕದ್ದಮೆ ಕುರಿತು ರಾಹುಲ್ ಗಾಂಧಿ ಪ್ರತಿಕ್ರಿಯೆ ಕೋರಿದ ಕೋರ್ಟ್‌

Date:

ಸೆಪ್ಟೆಂಬರ್ 2020ರ ಹಾಥ್ರಸ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಖುಲಾಸೆಗೊಂಡ ಮೂವರು ಸಲ್ಲಿಸಿದ ಮಾನನಷ್ಟ ಮೊಕದ್ದಮೆಯ ಕುರಿತು ಪ್ರತಿಕ್ರಿಯಿಸುವಂತೆ ಲೋಕಸಭೆ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿಳಿಸಿದೆ.

ಅತ್ಯಾಚಾರ ಆರೋಪದಲ್ಲಿ ಖುಲಾಸೆಗೊಂಡಿದ್ದರೂ, 2024ರ ಡಿಸೆಂಬರ್ 12ರಂದು ರವಿ, ರಾಮ್ ಕುಮಾರ್ ಅಲಿಯಾಸ್ ರಾಮು ಮತ್ತು ಲವ್‌ಕುಶ್ ವಿರುದ್ದ ರಾಹುಲ್ ಗಾಂಧಿ ಮಾನನಷ್ಟ ಹೇಳಿಕೆಗಳನ್ನು ನೀಡಿದ್ದರು ಎಂದು ಆರೋಪಿಸಲಾಗಿದೆ.

ಇದನ್ನು ಓದಿದ್ದೀರಾ? ಹಾಥ್ರಸ್‌ ಅತ್ಯಾಚಾರ | ರಾತ್ರೋರಾತ್ರಿ ದಲಿತ ಯುವತಿಯ ಶವ ಸುಟ್ಟಿದ್ದ ಪೊಲೀಸರು; ನ್ಯಾಯ ಇಂದಿಗೂ ಮರೀಚಿಕೆ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2020ರ ಸೆಪ್ಟೆಂಬರ್‌ನಲ್ಲಿ 19 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಆಕೆಯ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಪೊಲೀಸರು ರಾತ್ರೋರಾತ್ರಿ ಅಂತ್ಯಕ್ರಿಯೆಯನ್ನು ನಡೆಸಿದ್ದರು. ಈ ಪ್ರಕರಣದಲ್ಲಿ ಖುಲಾಸೆಗೊಂಡ ಮೂವರು ಇದೀಗ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಸೋಮವಾರ ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ದೀಪಕ್ ನಾಥ್ ಸರಸ್ವತಿ ಅವರಿಗೆ ಅರ್ಜಿದಾರರ ಪರ ವಕೀಲ ಮುನ್ನಾ ಸಿಂಗ್ ಪುಂಡಿರ್ ವರದಿ ಸಲ್ಲಿಸಿದ್ದು, ವರದಿಯ ಆಧಾರದ ಮೇಲೆ ನ್ಯಾಯಾಲಯವು ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆ 2026ರ ಫೆಬ್ರವರಿ 7ರಂದು ನಡೆಯಲಿದೆ.

2024ರ ಡಿಸೆಂಬರ್ 12ರಂದು ಬೂಲ್‌ಗಢಿ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರಾಹುಲ್ ಗಾಂಧಿ ಸಂತ್ರಸ್ತೆಯ ಕುಟುಂಬವು ಮನೆಯಲ್ಲಿಯೇ ಸೆರೆವಾಸದಲ್ಲಿರುವಾಗ ಆರೋಪಿಗಳು ಮುಕ್ತವಾಗಿ ತಿರುಗಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...