ಹಾವೇರಿ ಗ್ಯಾಂಗ್​ರೇಪ್​ | ವೋಟ್‌ ಬ್ಯಾಂಕ್ ಕಾರಣಕ್ಕೆ ಆರೋಪಿಗಳನ್ನು ರಕ್ಷಿಸುತ್ತಿರುವ ಕಾಂಗ್ರೆಸ್ ಸರ್ಕಾರ: ಬೊಮ್ಮಾಯಿ

Date:

ಹಾವೇರಿ ಜಿಲ್ಲೆಯ ಹಾನಗಲ್​​ನಲ್ಲಿ ಮಹಿಳೆ ಮೇಲೆ ಗ್ಯಾಂಗ್​ರೇಪ್​ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್​ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ ಎಂದಿದೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಹೀನ ಕೃತ್ಯಗಳು ನಡೆಯುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಅತ್ಯಾಚಾರ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ಕೊಡಿ ಅಂದರೂ ಯಾಕೆ ಸರ್ಕಾರ ನೀಡುತ್ತಿಲ್ಲ” ಎಂದು ಪ್ರಶ್ನಿಸಿದರು.

“ಹಾನಗಲ್​​ನಲ್ಲಿ ಗ್ಯಾಂಗ್​ರೇಪ್ ಪ್ರಕರಣ ಬಹಿರಂಗಗೊಂಡಿದೆ. ನೈತಿಕ ಪೊಲೀಸ್​ಗಿರಿ ಪ್ರಕರಣಗಳೂ ಬಹಿರಂಗವಾಗಿವೆ. ಇಂತಹ ಕೃತ್ಯ ಎಸಗುವ ಗ್ಯಾಂಗ್​​ ಸಕ್ರಿಯವಾಗಿದೆ. ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ವೋಟ್‌ ಬ್ಯಾಂಕ್ ಕಾರಣಕ್ಕೆ ಆರೋಪಿಗಳನ್ನುಸರ್ಕಾರ ರಕ್ಷಿಸುತ್ತಿದೆ. ಆಡಳಿತ ವ್ಯವಸ್ಥೆ ಕೂಡ ಜೊತೆಗೆ ನಿಂತಿದೆ” ಎಂದು ಬೊಮ್ಮಾಯಿ ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪೋಕ್ಸೋ ಕೇಸ್​ನಲ್ಲಿ ಪ್ರಕರಣ ದಾಖಲು ಮಾಡಿಲ್ಲ. ಕಾಟಾಚಾರಕ್ಕೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಇದು ಮೆಡಿಕೋ ಲೀಗಲ್ ಕೇಸ್, ಸರ್ಕಾರ ಸಂತ್ರಸ್ತೆ ಬಗ್ಗೆ ಜವಾಬ್ದಾರಿ ತೆಗೆದುಕೊಳ್ಳಬೇಕು. ಸಿಎಂ ಶಾಸಕರಿಗೆ ಹೇಳಿದ್ದೀನಿ ಅಂತಾರೆ. ಅಂದ್ರೆ ಸರ್ಕಾರ ಸತ್ತಿದೆಯಾ? ಆರೋಗ್ಯ ಇಲಾಖೆ ಸತ್ತಿದೆಯಾ?” ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಸ್ಪೃಶ್ಯತೆ, ಮೌಢ್ಯ, ಜಾತೀಯತೆ ತೊಲಗಿಸಿ ಬಸವಣ್ಣನಿಗೆ ನಿಜ ಗೌರವ ಸಲ್ಲಿಸೋಣ

“ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಕ್ರಿಮಿನಲ್‌ಗಳಿಗೆ ಕುಮಕ್ಕು ಸಿಗುತ್ತಿದೆ. ಅಪರಾಧ ಕೃತ್ಯ ಎಸಗಿದವರಲ್ಲಿ ವೋಟ್ ಬ್ಯಾಂಕ್ ಇದೆ. ಹೀಗಾಗಿ ಅವರ ರಕ್ಷಣೆ ಮಾಡುವ ಕೆಲಸವನ್ನ ಸರ್ಕಾರ ಮಾಡುತ್ತಿದೆ” ಎಂದು ಆರೋಪಿಸಿದರು.

“ಹಾನಗಲ್‌ನಲ್ಲಿ ಗ್ಯಾಂಗ್ ರೇಪ್ ಪ್ರಕರಣವನ್ನ ಖಂಡಿಸಿ ನಾವು ಇವತ್ತು ಪ್ರತಿಭಟನೆ ಮಾಡುತ್ತಿದ್ದೇವೆ. ಇಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿವೆ. ಗ್ಯಾಂಗ್ ರೇಪ್ ಪ್ರಕರಣದಲ್ಲಿ ಸರಿಯಾದ ರೀತಿಯಲ್ಲಿ ತನಿಖೆ ನಡೆಯುತ್ತಿದೆ ಅಂತಾರೆ. ಹಾಗಾದ್ರೆ ಇಬ್ಬರೂ ‌ಪೊಲೀಸರನ್ನು ಅಮಾನತು ಮಾಡಿದ್ದು ಏಕೆ? ಆ ಹೆಣ್ಣು ಮಗಳಿಗೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ಕೊಡಿಸಲು ಇವರಿಂದ ಆಗಿಲ್ಲ” ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...