2026ರಲ್ಲಿ ರಾಜ್ಯದಲ್ಲಿ ನಡೆಯಲಿರುವ ಸ್ಥಳೀಯ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಕಷ್ಟ ಎಂದು ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ಈ ಹಿಂದೆ, ರಾಜ್ಯದಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಮುಂದಿನ ಎಲ್ಲ ಚುನಾವಣೆಗಳಲ್ಲೂ ಮುಂದುವರಿಯುತ್ತದೆ ಎಂದು ದೇವೇಗೌಡರು ಹೇಳಿದ್ದರು. ಇದೀಗ, ತಮ್ಮ ಹೇಳಿಕೆಯನ್ನು ಬದಲಿಸಿದ್ದಾರೆ.
ನಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಿಗೂ ಬಿಜೆಪಿ ಜೊತೆಗಿನ ಮೈತ್ರಿ ಮುಂದುವರಿಯುತ್ತದೆ. ಆದರೆ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಇತರ ಸ್ಥಳೀಯ ಸಂಸ್ಥೆಗಳನ್ನು ಒಳಗೊಂಡಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ಮೈತ್ರಿ ಕಷ್ಟ” ಎಂದಿದ್ದಾರೆ.
ಜೆಡಿಎಸ್ ತನ್ನ ಬಲವಿರುವ ಸ್ಥಳಗಳಲ್ಲಿ ಮೈತ್ರಿ ಇಲ್ಲದೆ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಮತ್ತು ಇತರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸ್ಪರ್ಧಿಸಲಿದೆ ಎಂದು ದೇವೇಗೌಡ ಸ್ಪಷ್ಟಪಡಿಸಿದರು. ಕೆಲವು ಸ್ಥಳಗಳಲ್ಲಿ ನಾವು ಸ್ವಂತವಾಗಿ ಹೋರಾಡುತ್ತೇವೆ” ಎಂದು ಹೇಳಿದ್ದಾರೆ.




