ಹಾಲು, ಮದ್ಯದಿಂದ ಅನ್ನಭಾಗ್ಯ ಹಣ ವಸೂಲಿಗೆ ಇಳಿದಿರುವ ಕಾಂಗ್ರೆಸ್‌ ವಿತ್ತನೀತಿಗೆ ಧಿಕ್ಕಾರ: ಎಚ್‌ಡಿಕೆ

Date:

  • ‘ಹಾಲು, ಮದ್ಯದಿಂದ ಅನ್ನಭಾಗ್ಯದ ಹಣ ವಸೂಲಿಗೆ ಇಳಿದಿರುವ ನೀತಿಗೆ ಧಿಕ್ಕಾರ’
  • ‘ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ’

ರಾಜ್ಯ ಸರ್ಕಾರವು ನಂದಿನಿ ಹಾಲಿನ ದರವನ್ನು ಪರಿಷ್ಕರಣೆ ಮಾಡಿದ್ದು, ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡಲಾಗಿದೆ. ಅದೇ ರೀತಿ ರೈತರಿಂದ ಖರೀದಿ ಮಾಡುವ ಹಾಲಿಗೆ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಲಾಗಿದೆ. ನೂತನ ದರಗಳು ಆಗಸ್ಟ್ 1 ರಿಂದ ಜಾರಿಯಾಗಲಿದೆ. ಆದರೆ, ಈ ಕುರಿತು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ, ‘ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತನೀತಿಗೆ ಧಿಕ್ಕಾರ’ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಎಚ್‌ ಡಿ ಕುಮಾರಸ್ವಾಮಿ, “ಆಲ್ಕೋಹಾಲಿನ ಬೆಲೆ ಏರಿಸಿದ ನಂತರ ಕಾಂಗ್ರೆಸ್‌ ಸರ್ಕಾರ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯಲ್ಲಿ ಕೊಟ್ಟು, ಇನ್ನೊಂದು ಕೈಯಲ್ಲಿ ಕಸಿದುಕೊಳ್ಳುತ್ತಿದೆ. ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಬಾಯಿಬಾಯಿ ಬಡಿದುಕೊಂಡಿತ್ತು. ದೊಡ್ಡ ಬಾನಗಡಿಯನ್ನೇ ಎಬ್ಬಿಸಿತ್ತು. ಅಧಿಕಾರಕ್ಕೆ ಬಂದೊಡನೆ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದೆ. ಹೀಗಿದೆ ನೋಡಿ ಕೈ ಕರಾಮತ್ತು. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತನೀತಿಗೆ ಧಿಕ್ಕಾರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರ್ಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರ್ಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಂದಿನಿ ಹಾಲಿನ ದರ 3 ರೂ. ಏರಿಕೆ; ರೈತರಿಂದ ಖರೀದಿಸುವ ಹಾಲಿಗೂ ಹೆಚ್ಚಳ

“ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ. ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...