ಎಡಿಜಿಪಿ ಚಂದ್ರಶೇಖರ್ ಒಬ್ಬ ಕ್ರಿಮಿನಲ್ : ಎಚ್‌ ಡಿ ಕುಮಾರಸ್ವಾಮಿ ಆಕ್ರೋಶ

Date:

ಎಡಿಜಿಪಿ ಚಂದ್ರಶೇಖರ್ ಒಬ್ಬ ಬ್ಲ್ಯಾಕ್ ಮೇಲರ್, ಕ್ರಿಮಿನಲ್ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಡಿಜಿಪಿ ಚಂದ್ರಶೇಖರ್ ಅವರು ತನ್ನ ಸಹೋದ್ಯೋಗಿಗಳಿಗೆ ಬರೆದಿರುವ ಪತ್ರದ ಬಗ್ಗೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು,”ಆತ ತನ್ನ ಸಹೋದ್ಯೋಗಿಗಳಿಗೆ ಬರೆದಿರುವ ಪತ್ರವನ್ನು ಚೆನ್ನಾಗಿ ತಯಾರು ಮಾಡಿದ್ದಾರೆ. ಆ ಪತ್ರವನ್ನು ಯಾರು, ಎಲ್ಲಿ ತಯಾರು ಮಾಡಿಕೊಟ್ಟರು ಎನ್ನುವುದು ನನಗೂ ಚೆನ್ನಾಗಿ ಗೊತ್ತಿದೆ. ಉತ್ತರ ಕೊಡುವ ಜಾಗದಲ್ಲಿ, ಸಂದರ್ಭದಲ್ಲಿ ಇದಕ್ಕೆ ಉತ್ತರ ಕೊಡುತ್ತೇನೆ” ಎಂದು ಅವರು ಹೇಳಿದರು.

“ಆತ ಹೇಳಿರುವಂತೆ ನಾನು ಪ್ರಕರಣದಲ್ಲಿ ಆರೋಪಿ ಇರಬಹುದು. ಆದರೆ, ಆತ ಅಧಿಕಾರಿ ಸೋಗಿನಲ್ಲಿರುವ ಕ್ರಿಮಿನಲ್. ಆತನ ವಿರುದ್ಧ ಸರಣಿ ಅಪರಾಧ ಕೃತ್ಯಗಳನ್ನು ಎಸಗಿರುವ ಆರೋಪಗಳಿವೆ” ಎಂದು ಸಚಿವರು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಲೋಕಾಯುಕ್ತರಿಗೆ ರಾಜ್ಯಪಾಲರು ಬರೆದ ಪತ್ರವು ಸರಕಾರಿ ಪ್ರಾಯೋಜಿತ ಒಂದು ನಿರ್ದಿಷ್ಟ ಸುದ್ದಿ ವಾಹಿನಿಗೆ ಸೋರಿಕೆ ಆಗಿತ್ತು. ಅದನ್ನು ಸೋರಿಕೆ ಮಾಡಿದ್ದು ಯಾರು ಎನ್ನುವುದು ಎಲ್ಲರಿಗೂ ಗೊತ್ತಿದೆ. ಆದರೆ, ಅದು ರಾಜಭವನದಿಂದಲೇ ಸೋರಿಕೆ ಆಗಿರಬೇಕೆಂದು ಕಥೆ ಕಟ್ಟಿ, ರಾಜಭವನ ಸಿಬ್ಬಂದಿಯನ್ನೇ ತನಿಖೆ ಮಾಡಬೇಕು. ಅನುಮತಿ ಕೊಡಿ ಎಂದು ಅಧಿಕಾರಿ ಚಂದ್ರಶೇಖರ್ ತನ್ನ ಉನ್ನತ ಅಧಿಕಾರಿಗೆ ಪತ್ರ ಬರೆದಿದ್ದರು. ಹೀಗಾಗಿ ಆ ಅಧಿಕಾರಿಯ ದರ್ಪ ಹಾಗೂ ಆತನ ಹಿನ್ನೆಲೆಯ ಬಗ್ಗೆ ನಾನು ದಾಖಲೆಗಳ ಸಮೇತ ಮಾತನಾಡಿದ್ದೇನೆʼ ಎಂದು ಸಚಿವರು ಹೇಳಿದರು.

“ನಾನು ಕೇಳಿರುವ ಪ್ರಶ್ನೆಗಳಿಗೆ ಆತ ಉತ್ತರ ನೀಡಿಲ್ಲ. ಬದಲಿಗೆ ಕ್ರಿಮಿನಲ್ ಮನಃಸ್ಥಿತಿಯ ಕೊಳಕು ಭಾಷೆಯನ್ನು ಬಳಸಿ, ಒಬ್ಬ ಕೇಂದ್ರ ಸಚಿವರ ಬಗ್ಗೆ ಕೆಟ್ಟದ್ದಾಗಿ ಪತ್ರದಲ್ಲಿ ಪದ ಬಳಕೆ ಮಾಡಿದ್ದಾರೆ. ಇದಕ್ಕೆ ಏನು ಮಾಡಬೇಕು, ಎಲ್ಲಿ ಉತ್ತರ ಕೊಡಬೇಕು ಎನ್ನುವುದು ನನಗೆ ಗೊತ್ತಿದೆ” ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಧಾನಸೌಧದಲ್ಲೇ ಅತ್ಯಾಚಾರ? ಇದು ಕೇವಲ ತನಿಖೆಯಿಂದ ಬಗೆಹರಿಯುವ ಸಂಗತಿಯಲ್ಲ

ʼನಾನು ದಾಖಲೆ, ವಿಷಯ ಇಲ್ಲದೆ ಮಾತನಾಡುವುದಿಲ್ಲ. ಅಧಿಕಾರಿ ಬರೆದಿರುವ ಪತ್ರವನ್ನು ಚೆನ್ನಾಗಿ ಸಿದ್ಧ ಮಾಡಿಕೊಟ್ಟಿದ್ದಾರೆ. ನಾನು ಶನಿವಾರ ಬೆಳಗ್ಗೆ ಮಾಧ್ಯಮಗೋಷ್ಠಿ ಮಾಡಿದ ಮೇಲೆ, ಸಂಜೆ ಆ ಅಧಿಕಾರಿ ಎಲ್ಲಿ ಹೋಗಿದ್ದ ಎನ್ನುವುದು ಗೊತ್ತಿದೆ. ಅವರ ಪತ್ರವನ್ನು ಅಲ್ಲಿ ಯಾವ ಕಾನೂನು ಪಂಡಿತರು ರೆಡಿ ಮಾಡಿಕೊಟ್ಟರು, ಅವರೊಂದಿಗೆ ಇನ್ನೊಬ್ಬರು ಯಾರಿದ್ದರು ಎನ್ನುವುದು ನನಗೆ ಗೊತ್ತಿದೆʼ ಎಂದು ಏಕವಚನದಲ್ಲೇ ಸಚಿವರು ವಾಗ್ದಾಳಿ ನಡೆಸಿದ್ದಾರೆ.

ಪತ್ರದಲ್ಲಿ ಸತ್ಯಮೇಯ ಜಯತೇ ಎಂದು ಆತ ಬರೆದಿದ್ದಾರೆ. ನಾನು ಹೋರಾಟ ಮಾಡುತ್ತಿರುವುದು ಕೂಡ ಅದೇ ಉದ್ದೇಶಕ್ಕೆ. ಶನಿವಾರ ಅಷ್ಟು ದಾಖಲೆಗಳ ಸಮೇತ ಈ ವ್ಯಕ್ತಿ ಬಗ್ಗೆ ಹೇಳಿದ್ದು ಕೂಡ ಸತ್ಯಮೇವ ಜಯತೇ ಕಾರಣಕ್ಕಾಗಿಯೇ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಪೊಲೀಸ್ ಠಾಣೆಗೆ ಈ ಅಧಿಕಾರಿ ವಿರುದ್ಧ ನಾನು ದೂರು ಕೊಟ್ಟಿದ್ದೀನಾ? ಅವರ ಕೈಕೆಳಗೆ ಕೆಲಸ ಮಾಡುವ ಇನ್‌ಸ್ಪೆಕ್ಟರ್‌ಗೆ 20 ಕೋಟಿ ರೂ. ಬೇಡಿಕೆ ಇಟ್ಟು ಸಿಕ್ಕಿಬಿದ್ದಿದ್ದಾನೆ. ಆ ಇನ್‌ಸ್ಪೆಕ್ಟರ್‌ ಈ ಅಧಿಕಾರಿ ವಿರುದ್ಧ ದೂರು ನೀಡಿದ್ದಾರೆ. ತಕ್ಷಣ 2 ಕೋಟಿ ರೂ. ತಂದು ಕೊಡಬೇಕು ಎಂದು ಬೆದರಿಸಿದ್ದು ಈತನೇ ಅಲ್ಲವೇ? ಎಫ್‌ಐಆರ್‌ ಹಾಕಿದ ನಂತರ ಕೇಸ್ ಕೋರ್ಟ್ ಮುಂದೆ ಇದೆಯಲ್ಲ. ಇದೇನಾ ಆತನ ಸತ್ಯಮೇವ ಜಯತೇ? ಎಂದು ಪ್ರಶ್ನಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...