ಅಗತ್ಯಬಿದ್ದರೆ ಮುಲಾಜಿಲ್ಲದೆ ಎಚ್‌ ಡಿ ಕುಮಾರಸ್ವಾಮಿಯನ್ನು ಬಂಧಿಸ್ತೀವಿ: ಸಿದ್ದರಾಮಯ್ಯ

Date:

ಕುಮಾರಸ್ವಾಮಿಯವರನ್ನು ಬಂಧಿಸುವ ಬಗ್ಗೆ ಈಗಲೇ ಏನನ್ನೂ ಹೇಳಲಾಗುವುದಿಲ್ಲ. ಆದರೆ ಈ ಪ್ರಕರಣ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧಿಸ್ತೀವಿ. ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅವರು ಇಂದು (ಆ.21) ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ಧ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್‌ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ” ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು.

ಕುಮಾರಸ್ವಾಮಿಯವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾತಿಯನ್ನು ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಈ ವಿಚಾರದ ಬಗ್ಗೆ ತನಗೆ ಮಾಹಿತಿಯಿಲ್ಲ. ಕುಮಾರಸ್ವಾಮಿಯವರದು ಎಂದಿಗೂ ಹಿಟ್ ಎಂಡ್ ರನ್ ಕೇಸ್” ಎಂದು ಲೇವಡಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಭಿವೃದ್ಧಿ ಕೆಲಸದಲ್ಲಿ ರಾಜಕೀಯವಿಲ್ಲ

ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸೇರಿದಂತೆ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರಿಸಿ, “ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ರಾಜಕೀಯ ಮಾಡದೇ , ಜಿಲ್ಲೆಯ ಜನರ ಹಾಗೂ ಇಲ್ಲಿನ ಅಭಿವೃದ್ಧಿ ಪರವಾಗಿಯೇ ನಮ್ಮ ನಿರ್ಣಯಗಳಿರುತ್ತವೆ. ಕೊಪ್ಪಳ ಜಿಲ್ಲೆಯ ಬಗ್ಗೆ ವಿಶೇಷ ಕಾಳಜಿಯಿದ್ದು, ಇಲ್ಲಿನ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿದ್ದೇನೆ” ಎಂದರು.

ಬೆಂಬಲ ಬೆಲೆ ಕುರಿತಂತೆ ಕೇಂದ್ರಕ್ಕೆ ಪತ್ರ

ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಬಗ್ಗೆ ಮಾತನಾಡಿ, “ಹೆಸರುಕಾಳು ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ಶೀಘ್ರವಾಗಿ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...