ಪ್ರಧಾನಿ ಮೋದಿಯನ್ನು ಭೇಟಿಯಾದ ಎಚ್‌ಡಿಡಿ, ಎಚ್‌ಡಿಕೆ

Date:

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮತ್ತು ಅವರ ಮಗ, ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ಪ್ರಧಾನಿ ಮೋದಿ ಅವರನ್ನು ಗುರುವಾರ ಭೇಟಿಯಾಗಿದ್ದಾರೆ. ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಭೇಟಿಯ ಬಗ್ಗೆ ಟ್ವೀಟ್‌ ಮಾಡಿರುವ ಮೋದಿ, “ದೇವೇಗೌಡರು ತಮ್ಮನ್ನು ಭೇಟಿಯಾದದ್ದು ಗೌರವದ ಸಂಗತಿ. ವಿವಿಧ ವಿಷಯಗಳ ಬಗ್ಗೆ ಅವರ ಜಾಣ್ಮೆ ಮತ್ತು ದೃಷ್ಟಿಕೋನಗಳು ಬಹಳ ಆಳವಾಗಿವೆ ಮತ್ತು ಮೌಲ್ಯಯುತವಾಗಿವೆ. ನನಗೆ ಕಲಾಕೃತಿಯನ್ನು ಉಡುಗೊರೆ ನೀಡುವ ಮೂಲಕ ನನ್ನ ಇತ್ತೀಚಿನ ಕನ್ಯಾಕುಮಾರಿ ಭೇಟಿಯನ್ನು ನೆನಪಿಸಿದ್ದಾರೆ. ಅವರಿಗೆ ಕೃತಜ್ಞನಾಗಿದ್ದೇನೆ” ಎಂದಿದ್ದಾರೆ.

ರಾಜ್ಯಸಭಾ ಸದಸ್ಯರಾಗಿರುವ ಎಚ್‌.ಡಿ ದೇವೇಗೌಡ ಅವರು ಸಂಸತ್‌ ಸದನದಲ್ಲಿ ಭಾಗಿಯಾಗಲು ದೆಹಲಿಯಲ್ಲಿದ್ದಾರೆ. ಗುರುವಾರ ನಡೆದ ಕಲಾಪದಲ್ಲಿ ಅವರು ಶಿರೂರು ಗುಡ್ಡ ಕುಸಿತದ ಬಗ್ಗೆ ಪ್ರಸ್ತಾಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಮಂಡಿಸಿದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಯಾವುದೇ ವಿಶೇಷ ಯೋಜನೆ, ಅನುದಾನಗಳನ್ನು ನೀಡಲಾಗಿಲ್ಲ. ರಾಜ್ಯವನ್ನು ಕಡೆಗಣಿಸಲಾಗಿದೆ ಎಂದು ವ್ಯಾಪಕ ಆಕ್ರೋಶ ಕೇಳಿಬರುತ್ತಿದೆ. ಕೇಂದ್ರವು ಮಲತಾಯಿ ಧೋರಣೆ ತೋರುತ್ತಿದೆ ಎಂದು ಆರೋಪಿಸಲಾಗಿದೆ. ಇಂತಹ ಸಮಯದಲ್ಲಿಯೂ ಬಜೆಟ್‌ಅನ್ನು ಹೊಗಳಿರುವ ಎಚ್‌.ಡಿ ಕುಮಾರಸ್ವಾಮಿ ಅವರು ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಆದರೆ, ಅವರ ಭೇಟಿಯಿಂದ ರಾಜ್ಯಕ್ಕೆ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...