ಬಿಗ್‌ ಬ್ರೇಕಿಂಗ್ | ಎಚ್‌ಡಿಕೆ-ಬಿಎಸ್‌ವೈ ಜಂಟಿ ಹಗರಣ: ಯಡಿಯೂರಪ್ಪಗೆ ಲೋಕಾಯುಕ್ತ ಸಮನ್ಸ್‌

Date:

ಹಾಲಿ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಜಂಟಿಯಾಗಿ ನಡೆಸಿದ್ದ ಡಿನೋಟಿಫಿಕೇಷನ್‌ ಹಗರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರಿಗೆ ಲೋಕಾಯುಕ್ತ ಸಮನ್ಸ್‌ ಜಾರಿ ಮಾಡಿದೆ. ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಬೆಂಗಳೂರಿನ ಗಂಗಾನಗರದಲ್ಲಿ 1 ಎಕರೆ 11 ಗುಂಟೆ ಭೂಮಿಯನ್ನು ಸತ್ತವರ ಹೆಸರಿನಲ್ಲಿ ಅಕ್ರಮವಾಗಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಜಂಟಿಯಾಗಿ ಡಿನೋಟಿಫಿಕೇಷನ್ ಮಾಡಿಸಿದ್ದರು. ಎಲ್ಲರೂ ಮರೆತು ಹೋಗಿದ್ದ ಈ ಹಗರಣವನ್ನು ದಾಖಲೆಗಳ ಸಮೇತ ಈದಿನ.ಕಾಮ್ ಬಯಲಿಗೆಳಿದಿದೆ. ಈ ಬೆನ್ನಲ್ಲೇ, ಹಗರಣದ ತನಿಖೆಯನ್ನು ಲೋಕಾಯುಕ್ತ ಅಧಿಕಾರಿಗಳು ಚುರುಕುಗೊಳಿಸಿದ್ದರು.

2007ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅವರ ಪ್ರಧಾನ ಕಾರ್ಯದರ್ಶಿಯಾಗಿದ್ದ ನಿವೃತ್ತ ಐಎಎಸ್‌ ಅಧಿಕಾರಿ ರಾಕೇಶ್‌ ಸಿಂಗ್ ಅವರಿಂದ ನಿಯಮ 164ರ ಅಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮ್ಯಾಜಿಸ್ಟ್ರೇಟ್‌ ಮುಂದೆ ಗುರುವಾರ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಇದೀಗ, ಪ್ರಕರಣದ ಎ1 ಆರೋಪಿಯಾಗಿರುವ ಯಡಿಯೂರಪ್ಪ ಅವರನ್ನು ವಿಚಾರಣೆಗೆ ಕರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶನಿವಾರ ಮಧ್ಯಾಹ್ನವೇ ವಿಚಾರಣೆ ಬರುವಂತೆಯೂ ಯಡಿಯೂರಪ್ಪಗೆ ಲೋಕಾಯುಕ್ತ ಸೂಚನೆ ನೀಡಿದೆ. ಹೀಗಾಗಿ, ಇಂದು ಯಡಿಯೂರಪ್ಪ ಲೋಕಾಯುಕ್ತ ಎದುರು ಹಾಜರಾಗುವ ಸಾಧ್ಯತೆ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...