ಬಿಗ್ ಬ್ರೇಕಿಂಗ್ ನ್ಯೂಸ್ | ಎಚ್‌ಡಿಕೆ-ಬಿಎಸ್‌ವೈ ಜಂಟಿ ಹಗರಣ: ನಾಳೆ ನ್ಯಾಯಾಧೀಶರ ಮುಂದೆ ಅಧಿಕಾರಿಗಳಿಂದ 164 ನಿಯಮದಡಿ ಹೇಳಿಕೆ

Date:

ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ ಕುಮಾರಸ್ವಾಮಿ ಮತ್ತು ಬಿ.ಎಸ್‌ ಯಡಿಯೂರಪ್ಪನವರು ಜಂಟಿಯಾಗಿ ನಡೆಸಿದ ಡಿನೋಟಿಫಿಕೇಷನ್ ಹಗರಣದ ಸಂಪೂರ್ಣ ದಾಖಲೆಗಳ ಸಮೇತ ಈದಿನ.ಕಾಮ್‌ 2024ರ ಸೆಪ್ಟೆಂಬರ್ 16ರಂದು ತನಿಖಾ ವರದಿಯನ್ನು ಪ್ರಕಟಿಸಿತ್ತು. ಇದೀಗ ಲೋಕಾಯುಕ್ತ ಅಧಿಕಾರಿಗಳು ಅಕ್ರಮ ಡಿನೋಟಿಫಿಕೇಷನ್‌ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದ ಹಲವು ಅಧಿಕಾರಿಗಳ ಹೇಳಿಕೆಯನ್ನು ನಿಯಮ 164ರ ಅಡಿಯಲ್ಲಿ ನ್ಯಾಯಾಧೀಶರ ಎದುರು ದಾಖಲೆ ಮಾಡಲು ಮುಂದಾಗಿದ್ದಾರೆ. ನಾಳೆ ಸೆಪ್ಟೆಂಬರ್‌ 19ರಂದು ಲೋಕಾಯುಕ್ತ ನ್ಯಾಯಾಲಯದಲ್ಲಿ ಹಲವು ಅಧಿಕಾರಿಗಳ ಹೇಳಿಕೆಯನ್ನು ದಾಖಲಿಸಲು ಮುಹೂರ್ತ ನಿಗದಿಯಾಗಿದೆ.

ನಿಯಮ 164ರ ಅನ್ವಯ ವಿಚಾರಣೆಯ ಹಂತದಲ್ಲಿ ತಪ್ಪೊಪ್ಪಿಗೆ ಅಥವಾ ಸಾಕ್ಷ್ಯಗಳನ್ನು ನ್ಯಾಯಾಧೀಶರ ಸಮ್ಮುಖದಲ್ಲಿ ದಾಖಲೆ ಮಾಡಲಾಗುತ್ತದೆ. ಹೀಗೆ ಮಾಡುವುದರಿಂದ ವಿಚಾರಣೆಯ ಪ್ರಕ್ರಿಯೆಯಲ್ಲಿ ಸಾಕ್ಷಿದಾರರು ಪ್ರತಿಕೂಲ ಹೇಳಿಕೆ ಕೊಡುವುದನ್ನು  ತಪ್ಪಿಸಬಹುದು. ಈ ರೀತಿಯ ಹೇಳಿಕೆಯನ್ನು ಆಧರಿಸಿ ತನಿಖಾಧಿಕಾರಿಗಳು ತನಿಖೆಯನ್ನು ತ್ವರಿತವಾಗಿ ಪುರ್ಣಗೊಳಿಸಲು ನೆರವಾಗುತ್ತದೆ.

ಬೆಂಗಳೂರು ಮಹಾನಗರದ ಗಂಗಾನಗರ (ಗಂಗೇನಹಳ್ಳಿ) ಪ್ರದೇಶದಲ್ಲಿ 1 ಎಕರೆ 11 ಗುಂಟೆ ಭೂಮಿಯನ್ನು ಸತ್ತವರ ಹೆಸರಿನಲ್ಲಿ ಹಾಲಿ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಜಂಟಿಯಾಗಿ ಡಿನೋಟಿಫೈ ಮಾಡಿಸಿದ್ದರು. ಡಿನೋಟಿಫೈ ಆದ ಭೂಮಿಯನ್ನು ಅಂತಿಮವಾಗಿ ಕುಮಾರಸ್ವಾಮಿ ಅವರ ಬಾಮೈದ ಡಾ. ಚನ್ನಪ್ಪ ಎಂಬಾತನ ಹೆಸರಿಗೆ ನೋಂದಣಿ ಮಾಡಿಕೊಡಲಾಗಿತ್ತು. ಈ ಬಗ್ಗೆ 2015ರಲ್ಲಿ ಲೋಕಾಯುಕ್ತಕ್ಕೆ ದೂರನ್ನೂ ನೀಡಲಾಗಿತ್ತು. ಆದರೆ, ದೂರು ದಾಖಲಾಗಿ 9 ವರ್ಷಗಳು ಕಳೆದರೂ ಲೋಕಾಯುಕ್ತ ತನಿಖೆಯನ್ನು ಪೂರ್ಣಗೊಳಿಸದೆ, ನಿರ್ಲಕ್ಷ್ಯ ಧೋರಣೆ ತಳೆದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಮುಖ ಬೆಳವಣಿಗೆಯೊಂದು ನಡೆದಿದ್ದು, ಡಿನೋಟಿಫೈ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದ ಅಂದಿನ ಅಧಿಕಾರಿಗಳಾದ ರಾಕೇಶ್‌ ಸಿಂಗ್‌, ಜ್ಯೋತಿ ರಾಮಲಿಂಗಂ, ನಂದಕುಮಾರ್‌ ಮತ್ತಿತರ ಅಧಿಕಾರಿಗಳ ಹೇಳಿಕೆಗಳನ್ನು ಲೋಕಾಯುಕ್ತ ದಾಖಲಿಸಿಕೊಳ್ಳಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...