ನೀವು ಮನುಷ್ಯನಾಗಿರಲೇ ಅಯೋಗ್ಯ: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ಗರಂ

Date:

ಪ್ರಧಾನಿ ನರೇಂದ್ರ ಮೋದಿಯವರ ಕಟು ಟೀಕಾಕಾರರಲ್ಲಿ ಒಬ್ಬರಾಗಿರುವ ಬಹುಭಾಷಾ ನಟ ಕಿಶೋರ್ ಕುಮಾರ್, ಪ್ರಧಾನಿಯವರ ಇತ್ತೀಚಿನ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ್ದು, “ನೀವು ಸಾರ್ವಜನಿಕ ಜೀವನಕ್ಕೆ ಮಾತ್ರವಲ್ಲ, ಮನುಷ್ಯನಾಗಿರಲೇ ಅಯೋಗ್ಯ” ಎಂದು ವ್ಯಾಪಕ ಆಕ್ರೋಶ ಹೊರಹಾಕಿದ್ದಾರೆ.

ಮೋದಿಯವರ ವಿರುದ್ಧ ಪೋಸ್ಟ್ ಹಾಕುತ್ತಿರುವ ಕಾರಣಕ್ಕೆ ಸೋಶಿಯಲ್‌ ಮೀಡಿಯಾದಲ್ಲಿ ಪರ ಹಾಗೂ ವಿರೋಧ ವ್ಯಕ್ತಿಗಳನ್ನು ಪಡೆದುಕೊಂಡಿರುವ ನಟ ಕಿಶೋರ್‌, ಮತ್ತೊಮ್ಮೆ ಬಹಳ ಖಾರವಾಗಿ ಪೋಸ್ಟ್‌ ಹಾಕುವ ಮೂಲಕ ಸುದ್ದಿಯಾಗಿದ್ದಾರೆ.

ಪ್ರಧಾನಿ ಮೋದಿ ಸಮಾವೇಶ ಹಾಗೂ ಸಂದರ್ಶನದಲ್ಲಿ ಆಡಿದ ಮಾತುಗಳ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿರುವ ಬಹುಭಾಷಾ ನಟ, “ಮೋದಿ ಮನುಷ್ಯನಾಗಿರಲು ಅಯೋಗ್ಯ” ಎಂದು ಬರೆದುಕೊಂಡಿದ್ದಾರೆ. ಅಲ್ಲದೇ, ‘ಹಿಂದೂ ಧರ್ಮದ ಮಾನವನ್ನು ವಿಶ್ವದಲ್ಲಿ ಹರಾಜು ಹಾಕಿದ ವ್ಯಕ್ತಿ ಮೋದಿ” ಎಂದು ಕಿಶೋರ್ ಕುಮಾರ್ ಸುದೀರ್ಘ ಪೋಸ್ಟ್‌ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

modi kishor

“ನಾನು ಹಿಂದೂ ಹೆಸರನ್ನೂ ಹೇಳಿಲ್ಲ, ಮುಸಲ್ಮಾನರನ್ನೂ ಹೆಸರಿಸಿಲ್ಲ. ಯಾವೊತ್ತಿಂದ ನಾನು ಹಿಂದೂ-ಮುಸ್ಲಿಮ್ ರಾಜಕಾರಣ ಮಾಡಲು ತೊಡಗುತ್ತೇನೆಯೋ ಅಂದಿನಿಂದ ನಾನು ಸಾರ್ವಜನಿಕ ಬದುಕಿನಲ್ಲಿರುವ ಅರ್ಹತೆಯೇ ನನಗಿಲ್ಲ” ಎಂದು ಮೇ 14ರ ಸಂದರ್ಶನದಲ್ಲಿ ತಿಳಿಸಿದ್ದರು. ಆದರೆ ಮರುದಿನ ನಡೆದಿದ್ದ ಸಾರ್ವಜನಿಕ ಸಮಾವೇಶದಲ್ಲಿ ಪ್ರಧಾನಿ ಮೋದಿ, ಮತ್ತದೇ ಹಿಂದೂ-ಮುಸ್ಲಿಮ್ ಭಾಷಣಗೈದಿದ್ದರು. ಈ ವಿಡಿಯೋವನ್ನು ಕಿಶೋಕ್ ಹಂಚಿಕೊಂಡಿದ್ದಾರೆ.

ಕಿಶೋರ್ ಕುಮಾರ್ ಪೋಸ್ಟ್‌ನಲ್ಲಿ ಏನಿದೆ?

“ನಿಜ ನೀವು ಸಾರ್ವಜನಿಕ ಜೀವನಕ್ಕೇ ಅಲ್ಲ, ಮನುಷ್ಯನಾಗಿರಲೇ ಅಯೋಗ್ಯ. ನಿಮ್ಮಂಥವರ ಬಾಯಲ್ಲಿ ಮರ್ಯಾದಾ ಪುರುಷೋತ್ತಮ ರಾಮನ ಹೆಸರೂ ಮಹಾಪಾಪ. ಚಿಲ್ಲರೆ ಕಳ್ಳನನ್ನೂ ನಾಚಿಸುವ, ಸತ್ಯ ಸಿದ್ಧಾಂತ ನೈತಿಕತೆ ವ್ಯಕ್ತಿತ್ವ ಅದಾವುದೂ ಇಲ್ಲದ ವಿಶ್ವ ಕಂಡ ಅತೀ ಸುಳ್ಳುಗಾರ, ಅತೀ ಪುಕ್ಕಲು, ಅತೀ ನಿಕೃಷ್ಠ, ಅತೀ ದುರಹಂಕಾರಿ, ಅತೀ ಕ್ರೂರ, ಅತೀ ಮೂರ್ಖ, ಅತೀ ಸಂವೇದನಾಹೀನ, ಅತೀ ಘನತೆಹೀನ, ಅತೀ ಆತ್ಮರತಿಲೋಲ, ಅತೀ ಜನವಿರೋಧಿ, ಅತೀ ಹೊಲಸು ನಾಲಿಗೆಯ, ಅತೀ ಸಂಕುಚಿತ ದೃಷ್ಟಿಯ ಅತೀ ಅಪಾಯಕಾರಿ ” ಎಂದು ಮೋದಿ ಅವರನ್ನು ಟೀಕಿಸಿದ್ದಾರೆ.

 

View this post on Instagram

 

A post shared by Kishore Kumar Huli (@actorkishore)

“ಅತೀ ಭ್ರಷ್ಟ ನಿರಂಕುಶ ಪ್ರಭುತ್ವವಾದಿ ಎಂದು ಆಧಾರಸಹಿತ ಆ ಮನುಷ್ಯನೇ (?) ಹೇಳಿಬಿಡುತ್ತಾನೆ ಬೇಕಿದ್ದರೆ ಅವನ ನಡೆ ನುಡಿಯನ್ನು ನೋಡಿ. 10 ವರ್ಷ ಅಧಿಕಾರವಿದ್ದೂ ಮಾಡಿದ ಕೆಲಸದ ಬಗ್ಗೆ, ರೈತರ, ಸೈನಿಕರ, ಮಹಿಳೆಯರ, ಮಕ್ಕಳ, ಆಸ್ಪತ್ರೆ ಕಾಲೇಜುಗಳ ಅಭಿವೃದ್ಧಿಯ ಬಗ್ಗೆ ಮಾತಾಡಲು ಯೋಗ್ಯತೆಯಿಲ್ಲದೇ. ಬರೀ ಸುಳ್ಳು, ದ್ವೇಷ ಕಾರುವುದು.. ಮುಸ್ಲಿಂ ತೆರಿಗೆಯಂತೆ , ನುಸುಳುಕೋರರಂತೆ, ಪಾಕಿಸ್ಥಾನವಂತೆ, ರೂಮು ಕಿತ್ಕೊತಾರಂತೆ, ಎಮ್ಮೆ ಕಿತ್ಕೊತಾರಂತೆ, ಸೈಕಲ್ ಕಿತ್ಕೊತಾರಂತೆ, ವೋಟು ಜಿಹಾದ್ ಅಂತೆ ಮಂದಿರಕ್ಕೆ ಬೀಗವಂತೆ… ಬರೀ ತಲೆಬುಡವಿಲ್ಲದ ಮಾತುಗಳು. ಮುಸ್ಲಿಂ ಭಯೋತ್ಪಾದಕರು ಇಸ್ಲಾಂನ ಮಾನ ಕಳೆದಂತೆ ಅಧಿಕಾರಕ್ಕಾಗಿ ಹಿಂದೂ ಬಣ್ಣ ಬಳಿದುಕೊಂಡ ಈ ಢೋಂಗಿ ಮನುಷ್ಯ ಹಿಂದೂ ಧರ್ಮದ ಮಾನ ವಿಶ್ವದಾದ್ಯಂತ ಮೂರು ಕಾಸಿಗೆ ಹರಾಜು ಹಾಕಿಬಿಟ್ಟ’ ಎಂದು ಕಿಶೋರ್‌ ಜರೆದಿದ್ದಾರೆ.

ಸದ್ಯ ಕಿಶೋರ್ ಕುಮಾರ್ ಅವರ ಪೋಸ್ಟ್‌ ಅನ್ನು ಹಲವು ಮಂದಿ ಹಂಚಿಕೊಂಡಿದ್ದಾರೆ. ಅಲ್ಲದೇ ಕಾಮೆಂಟ್ ಕೂಡ ಮಾಡುತ್ತಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹಿಂದೂ-ಮುಸ್ಲಿಮ್ ರಾಜಕಾರಣ ಮಾಡುವುದಿಲ್ಲವೇ ನಮ್ಮ ಪ್ರಧಾನಿ!

ಇದಕ್ಕೆ ಕಾಮೆಂಟ್‌ ಮಾಡಿರುವ ವ್ಯಕ್ತಿಯೊಬ್ಬ, “ಸುಳ್ಳುಬುರುಕ. ಗಟಾರದಲ್ಲಿ ಗ್ಯಾಸ್ ಉತ್ಪತ್ತಿ, ಯಾವುದೋ ಅಂಧಕಾಲದಲ್ಲಿ ಡಿಜಿಟಲ್ ಕ್ಯಾಮೆರಾ, ರೈಲ್ವೆ ಸ್ಟೇಷನ್‌ನಲ್ಲಿ ಟೀ ಮಾರುವಿಕೆ , ಯಪ್ಪಾ ಒಂದಾ ಎರಡಾ, ಉದ್ಯೋಗ ಕೇಳಿದ್ರೆ ಪಕೋಡಾ ಮಾರಿ, ರೈತರ ಪರ ಅನ್ನೋದು, ಅದೇ ರೈತರು ಬರಬಾರದು ಅಂತ ಮುಳ್ಳು ತಂತಿ ಹಾಕಿಸಿ, ಟಿಯರ್ ಗ್ಯಾಸ್ ಹಾಕೋದು. ಎಲ್ಲರೂ ಒಂದೇ ಅನ್ನೋದು, ಬಳಿಕ ಅನ್ಯಕೋಮಿನ ಮೇಲೆ ದ್ವೇಷ ಭಾಷಣ ಮಾತಾಡೋದು” ಎಂದು ತಿಳಿಸಿದ್ದಾರೆ.

“ಮೋದಿ ತುಂಬಾ ಕನ್‌ಫ್ಯೂಸ್‌ ಆಗಿದ್ದಾರೆ. ನಾನೆಂದೂ ಇವರಂಥ ಕೊಳಕು ವ್ಯಕ್ತಿಯನ್ನು ನೋಡಿಲ್ಲ. ಭಾರತಕ್ಕಾಗಿ ನೀವು ನಿಂತಿರೋದನ್ನು ನೋಡಿ ಖುಷಿಯಾಗುತ್ತಿದೆ. ಹೆಚ್ಚಿನ ಸೆಲೆಬ್ರಿಟಿಗಳು ಇದನ್ನು ಪ್ರಶ್ನೆ ಮಾಡುವ ಧೈರ್ಯ ಹೊಂದಿಲ್ಲ. ಲವ್‌ ಯು ಸರ್‌” ಎಂದು ಇನ್ನೊಬ್ಬರು ಕಿಶೋರ್ ಕುಮಾರ್ ಬರಹಕ್ಕೆ ಬೆಂಬಲ ಸೂಚಿಸಿದ್ದರೆ, ಮೋದಿ ಹಾಗೂ ಸಂಘಪರಿವಾರದ ಬೆಂಬಲಿಗರು ವಿರೋಧ ವ್ಯಕ್ತಪಡಿಸಿ ಕಾಮೆಂಟ್ ಹಾಕಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...